Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:38 - ಪರಿಶುದ್ದ ಬೈಬಲ್‌

38 “ಯಜ್ಞವೇದಿಕೆಯ ಮೇಲೆ ಪ್ರತಿದಿನ ಯಜ್ಞವನ್ನು ಸಮರ್ಪಿಸಬೇಕು. ಒಂದು ವರ್ಷದ ಎರಡು ಕುರಿಮರಿಗಳನ್ನು ನೀನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಬಲಿಪೀಠದ ಮೇಲೆ ಅನುದಿನವೂ ಸಮರ್ಪಿಸಬೇಕಾದುವುಗಳು ಇವು: ಒಂದು ವರ್ಷದ ಎರಡು ಕುರಿಗಳನ್ನು ದಿನಂಪ್ರತಿ ಬಲಿದಾನ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದದ್ದೇನಂದರೆ - ಒಂದು ವರುಷದ ಎರಡು ಕುರಿಗಳನ್ನು ದಿನಂಪ್ರತಿಯೂ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 “ಬಲಿಪೀಠದ ಮೇಲೆ ನೀನು ಅರ್ಪಿಸಬೇಕಾದದ್ದು ಇದೇ: ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಟ್ಟುಬಿಡದೆ ದಹನಬಲಿಯಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:38
25 ತಿಳಿವುಗಳ ಹೋಲಿಕೆ  

ಪ್ರತಿ ಮುಂಜಾನೆ ಮತ್ತು ಸಂಧ್ಯಾಕಾಲಗಳಲ್ಲಿ ಚಾದೋಕನು ಮತ್ತು ಇತರ ಯಾಜಕರು ಸರ್ವಾಂಗಹೋಮವನ್ನು ಯಜ್ಞವೇದಿಕೆಯ ಮೇಲೆ ಸಮರ್ಪಿಸುತ್ತಿದ್ದರು. ಇಸ್ರೇಲರಿಗೆ ಕೊಡಲ್ಪಟ್ಟಿದ್ದ ಕಟ್ಟಳೆಗಳಿಗನುಸಾರವಾಗಿ ಅವರು ಮಾಡಿದರು.


“ನಿತ್ಯಹೋಮವು ನಿಲ್ಲಿಸಲ್ಪಟ್ಟು ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಒಂದು ಸಾವಿರದ ಇನ್ನೂರ ತೊಂಭತ್ತು ದಿನಗಳು ಕಳೆಯಬೇಕು.


ಹಿಜ್ಕೀಯನು ತನ್ನ ಪಶುಗಳಲ್ಲಿ ಕೆಲವನ್ನು ಸರ್ವಾಂಗಹೋಮಕ್ಕಾಗಿ ಕೊಟ್ಟನು. ಇವುಗಳನ್ನು ಪ್ರತಿನಿತ್ಯದ ಬೆಳಿಗ್ಗೆ ಮತ್ತು ಸಂಜೆ ಸಮರ್ಪಿಸುವ ಸರ್ವಾಂಗಹೋಮಗಳಿಗಾಗಿ ಉಪಯೋಗಿಸಿಕೊಳ್ಳಲಾಯಿತು; ಅಲ್ಲದೆ ಸಬ್ಬತ್ ದಿನದಂದೂ ಅಮವಾಸ್ಯೆ ದಿನದಂದೂ ಅವುಗಳನ್ನು ಅರ್ಪಿಸಿದರು. ಇವೆಲ್ಲಾ ದೇವರ ಕಟ್ಟಳೆಗಳಿಗನುಸಾರವಾಗಿದ್ದವು.


ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.


ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.


“ಆಗ ಭವಿಷ್ಯತ್ತಿನ ನಾಯಕನು ಬಹುಜನರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಳ್ಳುವನು. ಆ ಒಪ್ಪಂದ ಒಂದು ವಾರದವರೆಗೆ ಮುಂದುವರೆಯುವದು. ಅರ್ಧವಾರದವರೆಗೆ ಯಜ್ಞ ಮತ್ತು ನೈವೇದ್ಯಗಳನ್ನು ನಿಲ್ಲಿಸಲಾಗುವುದು. ಒಬ್ಬ ಘಾತುಕನು ಬರುವನು. ಅವನು ಬಹುವಿನಾಶಕಾರಿ ಕೆಲಸಗಳನ್ನು ಮಾಡುವನು. ಆದರೆ ಆ ಘಾತುಕನನ್ನು ಮುಗಿಸಿಬಿಡಬೇಕೆಂದು ದೇವರ ಆಜ್ಞೆಯಾಗಿದೆ” ಎಂದು ಹೇಳಿದನು.


ತಮ್ಮ ಸುತ್ತಲು ವಾಸಿಸುವ ಅನ್ಯಜನರಿಗೆ ಅವರು ಭಯಪಟ್ಟರೂ ಹಳೆಯ ಅಸ್ತಿವಾರದ ಮೇಲೆ ವೇದಿಕೆಯನ್ನು ಕಟ್ಟಿದರು. ಅವರು ಹಾಗೆ ಮಾಡುವುದನ್ನು ನಿಲ್ಲಿಸಲಿಲ್ಲ. ಕಟ್ಟಿ ಮುಗಿಸಿದ ಬಳಿಕ ಬೆಳಿಗ್ಗೆ, ಸಾಯಂಕಾಲ ಹೋಮಯಜ್ಞಾದಿಗಳನ್ನು ಸಮರ್ಪಿಸಿದರು.


ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.


ಆತನು ಬೇರೆ ಯಾಜಕರಂತಲ್ಲ. ಅವರಾದರೋ ಪ್ರತಿ ದಿನವೂ ಯಜ್ಞಗಳನ್ನು ಅರ್ಪಿಸಬೇಕು. ಅವರು ತಮ್ಮ ಸ್ವಂತ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಿದ ನಂತರ ಬೇರೆಯವರ ಪಾಪಗಳಿಗಾಗಿ ಅರ್ಪಿಸಬೇಕು. ಆದರೆ ಕ್ರಿಸ್ತನು ಹಾಗೆ ಮಾಡಬೇಕಾಗಿಲ್ಲ. ಆತನು ತನ್ನನ್ನೇ ಯಜ್ಞವಾಗಿ ಅರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


ನಾನು ಪ್ರಾರ್ಥಿಸುತ್ತಿದ್ದಾಗ ಗಬ್ರಿಯೇಲನೆಂಬ ಪುರುಷನು ನನ್ನಲ್ಲಿಗೆ ಬಂದನು. ಗಬ್ರಿಯೇಲನನ್ನೇ ನಾನು ದರ್ಶನದಲ್ಲಿ ಕಂಡಿದ್ದೆನು. ಗಬ್ರಿಯೇಲನು ವೇಗವಾಗಿ ಹಾರುತ್ತಾ ಸಾಯಂಕಾಲದ ನೈವೇದ್ಯದ ಸಮಯದಲ್ಲಿ ನನ್ನ ಬಳಿಗೆ ಬಂದನು.


ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆದನು. ಅಬ್ರಹಾಮನು, “ಏನು ಮಗನೇ?” ಎಂದು ಉತ್ತರಿಸಿದನು. ಇಸಾಕನು, “ಕಟ್ಟಿಗೆ ಮತ್ತು ಬೆಂಕಿ ನನಗೆ ಕಾಣಿಸುತ್ತಿವೆ. ಆದರೆ ಯಜ್ಞಕ್ಕೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದನು.


ಪವಿತ್ರಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಯಜ್ಞವೇದಿಕೆಯನ್ನು ಇರಿಸಿದನು. ಅವನು ಯೆಹೋವನಿಗಾಗಿ ಆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು.


ಬಳಿಕ ಆರೋನನ ಪುತ್ರರು ಕೊಬ್ಬನ್ನು ವೇದಿಕೆಗೆ ತಂದು ಅದನ್ನು ಬೆಂಕಿಯಲ್ಲಿ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮದ ಮೇಲಿಡಬೇಕು. ಅದು ಅಗ್ನಿಯ ಮೂಲಕ ಅರ್ಪಿಸುವ ಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


“ಆರೋನನಿಗೂ ಅವನ ಪುತ್ರರಿಗೂ ಈ ಅಪ್ಪಣೆಯನ್ನು ಕೊಡು: ಸರ್ವಾಂಗಹೋಮದ ನಿಯಮ ಇದಾಗಿದೆ. ಸರ್ವಾಂಗಹೋಮವು ವೇದಿಕೆಯ ಒಲೆಯಲ್ಲಿ ರಾತ್ರಿಯೆಲ್ಲಾ ಮರುದಿನ ಮುಂಜಾನೆಯವರೆಗೆ ಉರಿಯುತ್ತಿರಬೇಕು. ವೇದಿಕೆಯಲ್ಲಿ ಬೆಂಕಿಯು ಉರಿಯುತ್ತಿರಬೇಕು.


ಅಮಾವಾಸ್ಯೆಯಲ್ಲಿ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆ ಇವುಗಳಲ್ಲದೆ ಈ ಅರ್ಪಣೆಗಳನ್ನು ಅರ್ಪಿಸಬೇಕು. ಇವುಗಳನ್ನು ನಿಯಮಗಳ ಪ್ರಕಾರವಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಇವೆ.


ಮೋಶೆಯ ಅಪ್ಪಣೆಯ ಪ್ರಕಾರ ಪ್ರತಿನಿತ್ಯವೂ ಸಬ್ಬತ್‌ದಿನಗಳಲ್ಲಿಯೂ ಅಮಾವಾಸ್ಯೆಯ ದಿನಗಳಲ್ಲಿಯೂ ವರ್ಷದ ಮೂರು ಹಬ್ಬದ ದಿನಗಳಲ್ಲಿಯೂ (ಹುಳಿಯಿಲ್ಲದ ರೊಟ್ಟಿಯ ಹಬ್ಬ, ವಾರಗಳ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬ) ಆಯಾ ದಿನಗಳಲ್ಲಿ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.


ಇದಾದ ಬಳಿಕ ಅವರು ನಿತ್ಯ ಸರ್ವಾಂಗಹೋಮವನ್ನೂ ಅಮಾವಾಸ್ಯೆ ಮತ್ತು ಇತರ ಹಬ್ಬದ ದಿನಗಳಲ್ಲಿ ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಬೇಕಾದ ಯಜ್ಞಹೋಮಗಳನ್ನೂ ಸಮರ್ಪಿಸಿದರು. ಜನರು ತಾವು ಯೆಹೋವನಿಗೆ ಕೊಡಬೇಕೆಂದಿದ್ದ ಇತರ ಕಾಣಿಕೆಗಳನ್ನು ಸಹ ತಂದು ಕೊಡಲಾರಂಭಿಸಿದರು.


ಆರೋನನು ಧಾನ್ಯನೈವೇದ್ಯವನ್ನು ಯಜ್ಞವೇದಿಕೆಯ ಬಳಿಗೆ ತಂದನು. ಅವನು ಒಂದು ಹಿಡಿ ಧಾನ್ಯವನ್ನು ತೆಗೆದುಕೊಂಡು ದಿನಂಪ್ರತಿ ಹೊತ್ತಾರೆಯ ವೇಳೆಯಲ್ಲಿ ಅರ್ಪಿಸುವ ಯಜ್ಞವಲ್ಲದೆ ಇದನ್ನೂ ಕೂಡ ಅರ್ಪಿಸಿದನು.


ಸೊಲೊಮೋನನು ತನ್ನ ಸ್ನೇಹಿತನೂ ತೂರ್ ದೇಶದ ರಾಜನೂ ಆದ ಹೂರಾಮನಿಗೆ ಹೀಗೆ ಬರೆದು ಕಳುಹಿಸಿದನು: “ನನ್ನ ತಂದೆಯಾದ ದಾವೀದನ ಅರಮನೆಗೆ ಬೇಕಾದ ದೇವದಾರುಮರಗಳನ್ನು ನೀನು ಒದಗಿಸಿದಂತೆಯೇ ನನಗೂ ನೀನು ಸಹಾಯ ಮಾಡಬೇಕು.


ಅವರು ದೇವಾಲಯದ ಮಂಟಪದ ಬಾಗಿಲನ್ನು ಮುಚ್ಚಿ ಉರಿಯುತ್ತಿದ್ದ ದೀಪಗಳನ್ನು ನಂದಿಸಿಬಿಟ್ಟರು. ಇಸ್ರೇಲ್ ದೇವರಾದ ಯೆಹೋವನಿಗೆ ಪವಿತ್ರ ಸ್ಥಳದಲ್ಲಿ ಧೂಪಸುಡುವದನ್ನೂ ಸರ್ವಾಂಗಹೋಮಗಳನ್ನು ಅರ್ಪಿಸುವದನ್ನೂ ನಿಲ್ಲಿಸಿದರು.


“ನೀನು ಪ್ರತಿದಿನ ಮುಂಜಾನೆ ಒಂದು ವರ್ಷದ ಪೂರ್ಣಾಂಗವಾದ ಕುರಿಯನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.


ಹೀಗೆ ಅವರು ಶಾಶ್ವತವಾಗಿ ಕುರಿ, ಧಾನ್ಯ ಮತ್ತು ಎಣ್ಣೆಯನ್ನು ಪ್ರತೀ ಮುಂಜಾನೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು