Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:40 - ಪರಿಶುದ್ದ ಬೈಬಲ್‌

40 ನೀನು ಮೊದಲಿನ ಕುರಿಮರಿಯನ್ನು ವಧಿಸುವಾಗ ಮೂರು ಸೇರು ಶ್ರೇಷ್ಠ ಗೋಧಿ ಹಿಟ್ಟನ್ನೂ ಸಮರ್ಪಿಸು. ಆ ಹಿಟ್ಟನ್ನು ಒಂದೂವರೆ ಸೇರು ದ್ರಾಕ್ಷಾರಸದೊಂದಿಗೆ ಬೆರೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಒಂದು ಲೀಟರು ಶ್ರೇಷ್ಠವಾದ ಓಲಿವ್ ಎಣ್ಣೆಯನ್ನು ಒಂದು ಕಿಲೋಗ್ರಾಂ ಗೋದಿಹಿಟ್ಟಿಗೆ ಬೆರೆಸಿ ಧಾನ್ಯಾರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯ ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಹೋಮ ಮಾಡಬೇಕು. ಪಾನ ದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನು ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ, ಒಂದು ಲೀಟರ್ ದ್ರಾಕ್ಷಾರಸವನ್ನು ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:40
34 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಜೀವಿತಗಳನ್ನು ದೇವರ ಸೇವೆಗಾಗಿ ಯಜ್ಞದೋಪಾದಿಯಲ್ಲಿ ಅರ್ಪಿಸಿಕೊಳ್ಳಲು ನಿಮ್ಮ ನಂಬಿಕೆಯು ನಿಮ್ಮನ್ನು ಪ್ರೇರೇಪಿಸುತ್ತದೆ. ಒಂದುವೇಳೆ, ನಿಮ್ಮ ಯಜ್ಞದೊಡನೆ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ಸಂತೋಷಿಸುತ್ತೇನೆ, ನಿಮ್ಮೆಲ್ಲರೊಂದಿಗೆ ಸಂತೋಷಿಸುತ್ತೇನೆ.


ಒಂದುವೇಳೆ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿದರೂ ಬದಲಾಯಿಸಬಹುದು. ಒಂದುವೇಳೆ ಆತನು ನಿಮಗಾಗಿ ಆಶೀರ್ವಾದವನ್ನು ಬಿಟ್ಟುಹೋಗಬಹುದು. ಆಗ ನೀವು ದೇವರಾದ ಯೆಹೋವನಿಗೆ ಧಾನ್ಯ ಮತ್ತು ಪಾನಸಮರ್ಪಣೆ ಮಾಡುವಿರಿ.


ಪ್ರತಿ ಮುಂಜಾನೆ ನೀನು ಐದು ಸೇರು ಗೋಧಿಹಿಟ್ಟನ್ನೂ ಎರಡು ಸೇರು ಎಣ್ಣೆಯನ್ನೂ ಒಟ್ಟಾಗಿ ಬೆರೆಸಿ ಪ್ರತಿದಿನ ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸಬೇಕು.


ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”


ನದಿ ದಡದಲ್ಲಿರುವ ನುಣುಪಾದ ಕಲ್ಲುಗಳನ್ನು ಪೂಜಿಸಲು ಆಶಿಸುತ್ತೀರಿ. ಅದರ ಮೇಲೆ ದ್ರಾಕ್ಷಾರಸ ಸುರಿದು ಪೂಜೆ ಮಾಡುತ್ತೀರಿ. ಅವುಗಳಿಗೆ ಬಲಿಯರ್ಪಿಸುತ್ತೀರಿ. ಆದರೆ ಅದರಿಂದ ನಿಮಗೆ ದೊರಕುವುದು ಕಲ್ಲೇ. ಈ ವಿಷಯ ನನ್ನನ್ನು ಸಂತೋಷಗೊಳಿಸುತ್ತದೆಂದು ನೆನಸುತ್ತೀರೋ? ಇಲ್ಲ. ಅವು ನನ್ನನ್ನು ಸಂತೋಷಪಡಿಸುವದಿಲ್ಲ.


ನೀವು ಎಣ್ಣೆ ಬೆರೆಸಿದ ಹದಿನಾರು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯಸಮರ್ಪಣೆಗಾಗಿ ಅರ್ಪಿಸಬೇಕು. ನೀವು ಕಾಲುಭಾಗ ದ್ರಾಕ್ಷಾರಸವನ್ನು ಅರ್ಪಿಸಬೇಕು. ಆ ಯಜ್ಞದ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿರುತ್ತದೆ.


ಯಾಜಕರೇ, ನೀವು ನಿಮ್ಮ ಶೋಕವಸ್ತ್ರವನ್ನು ಧರಿಸಿ ಗಟ್ಟಿಯಾಗಿ ರೋಧಿಸಿರಿ. ವೇದಿಕೆಯಲ್ಲಿ ಸೇವೆಮಾಡುವವರೇ, ಗಟ್ಟಿಯಾಗಿ ರೋಧಿಸಿರಿ. ನನ್ನ ದೇವರ ಸೇವಕರೇ, ನೀವು ನಿಮ್ಮ ಶೋಕವಸ್ತ್ರಗಳಲ್ಲಿಯೇ ನಿದ್ರೆಮಾಡಿರಿ. ಯಾಕೆಂದರೆ ಇನ್ನು ದೇವಾಲಯದಲ್ಲಿ ಧಾನ್ಯ ಮತ್ತು ಪಾನಸಮರ್ಪಣೆ ಇಲ್ಲ.


ಯಾಜಕರೇ, ಯೆಹೋವನ ಸೇವಕರೇ, ಗೋಳಾಡಿರಿ. ಯಾಕೆಂದರೆ ಇನ್ನು ಮುಂದೆ ಯೆಹೋವನ ಆಲಯದಲ್ಲಿ ಪಾನ ಮತ್ತು ಧಾನ್ಯಾರ್ಪಣೆ ಇರದು.


“ಹಬ್ಬದ ದಿವಸಗಳಲ್ಲಿ ಮತ್ತು ಬೇರೆ ವಿಶೇಷ ದಿವಸಗಳಲ್ಲಿ ಪ್ರತಿ ಎಳೇ ಹೋರಿಯೊಂದಿಗೆ ಒಂದು ಏಫಾ ಧಾನ್ಯಸಮರ್ಪಣೆಯನ್ನು ಸಮರ್ಪಿಸಬೇಕು. ಮತ್ತು ಪ್ರತಿ ಒಂದು ಟಗರಿನೊಂದಿಗೆ ಒಂದು ಏಫಾ ಧಾನ್ಯವನ್ನು ಸಮರ್ಪಿಸಬೇಕು. ಕುರಿಗಳೊಂದಿಗೆ ಸಮರ್ಪಿಸಬೇಕಾದ ಧಾನ್ಯವು ರಾಜನಿಗೆ ಇಷ್ಟದ ಪ್ರಕಾರ ಇರುವದು. ಅದರ ಜೊತೆಗೆ ಒಂದು ಏಫಾ ಧಾನ್ಯದೊಂದಿಗೆ ಒಂದು ಹಿನ್ ಎಣ್ಣೆಯನ್ನೂ ಕೊಡಬೇಕು.


ರಾಜನು ಒಂದು ಏಫಾ ಧಾನ್ಯವನ್ನು ಹೋರಿಯೊಂದಿಗೂ ಇನ್ನೊಂದು ಏಫಾ ಧಾನ್ಯವನ್ನು ಟಗರಿನೊಂದಿಗೂ ಕೊಡಬೇಕು. ಆದರೆ ಅಧಿಪತಿಯು ಕುರಿಗಳೊಂದಿಗೆ ತನಗಿಷ್ಟವಾದಷ್ಟು ಧಾನ್ಯಸಮರ್ಪಣೆಯನ್ನು ಕೊಡಬಹುದು. ಆದರೆ ಅವನು ಪ್ರತೀ ಒಂದು ಏಫಾ ಧಾನ್ಯಕ್ಕೆ ಒಂದು ಹಿನ್ ಆಲಿವ್ ಎಣ್ಣೆಯನ್ನು ಕೊಡಲೇಬೇಕು.


ಟಗರಿನೊಂದಿಗೆ ಒಂದು ಏಫಾ ಧಾನ್ಯಸಮರ್ಪಣೆಗಾಗಿ ಕೊಡಬೇಕು. ಕುರಿಗಳೊಂದಿಗೆ ಧಾನ್ಯಸಮರ್ಪಣೆಗಾಗಿ ರಾಜನು ತನ್ನ ಇಷ್ಟಬಂದ ಹಾಗೆ ಕೊಡಬಹುದು. ಆದರೆ ಪ್ರತೀ ಒಂದು ಏಫಾ ಧಾನ್ಯದೊಂದಿಗೆ ಒಂದು ಹಿನ್ ಆಲಿವ್ ಎಣ್ಣೆಯನ್ನು ಕೊಡಬೇಕು.


ರಾಜನು ಧಾನ್ಯಸಮರ್ಪಣೆಗಾಗಿ ಒಂದು ಏಫಾ ಜವೆಗೋಧಿಯನ್ನು ಹೋರಿಯೊಂದಿಗೂ ಒಂದು ಏಫಾ ಜವೆಗೋಧಿಯನ್ನು ಟಗರಿನೊಂದಿಗೂ ಕೊಡಬೇಕು. ಅದರೊಂದಿಗೆ ರಾಜನು ಪ್ರತೀ ಒಂದು ಏಫಾ ಜವೆಗೋಧಿಯೊಂದಿಗೆ ಒಂದು ಹಿನ್ ಎಣ್ಣೆಯನ್ನೂ ಕೊಡಬೇಕು.


ನಾನು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಬಂದೆನು. ಆದರೆ ಎತ್ತರವಾದ ಬೆಟ್ಟವನ್ನಾಗಲಿ ಎಲೆಗಳುಳ್ಳ ಮರವನ್ನಾಗಲಿ ಅವರು ಕಂಡಾಗಲೆಲ್ಲಾ ಅವರು ಅಲ್ಲಿಗೆ ಹೋದರು ಮತ್ತು ವಿಗ್ರಹಗಳನ್ನು ಪೂಜಿಸಿದರು. ಅಲ್ಲಿ ಅವರು ಯಜ್ಞಗಳನ್ನೂ ನನ್ನನ್ನು ಕೋಪಗೊಳಿಸುವ ಕಾಣಿಕೆಗಳನ್ನೂ ಧೂಪವನ್ನೂ ಮತ್ತು ಪಾನದ್ರವ್ಯಾರ್ಪಣೆಗಳನ್ನೂ ಅರ್ಪಿಸಿದರು.


ನೀನು ದಿನಕ್ಕೆ ಮೂರು ಲೋಟ ನೀರನ್ನು ಮಾತ್ರ ಕುಡಿಯಬೇಕು. ನೀನು ಅವುಗಳನ್ನು ಪ್ರತಿದಿನ ಒಂದೇ ಸಮಯದಲ್ಲಿ ಕುಡಿಯಬೇಕು.


ನಿಮ್ಮ ಯಜ್ಞಗಳ ಕೊಬ್ಬನ್ನು ಆ ಸುಳ್ಳುದೇವರುಗಳು ತಿಂದುಬಿಟ್ಟವು. ನೀವು ಅರ್ಪಿಸಿದ ದ್ರಾಕ್ಷಾರಸವನ್ನು ಕುಡಿದುಬಿಟ್ಟವು. ಆ ದೇವರುಗಳೆದ್ದು ನಿಮಗೆ ಸಹಾಯಮಾಡಲಿ. ಅವುಗಳು ನಿಮ್ಮನ್ನು ಸಂರಕ್ಷಿಸಲಿ.


ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.


“ಈ ಎಲ್ಲ ಅರ್ಪಣೆಗಳನ್ನು ಆ ಏಳು ದಿನಗಳಲ್ಲಿ ಪ್ರತಿಯೊಂದು ದಿನವೂ ಆಹಾರವಾಗಿಯೂ ತ್ಯಾಗಮಯವಾದ ಕಾಣಿಕೆಯಾಗಿಯೂ ಯೆಹೋವನಿಗೆ ಸುಗಂಧ ವಾಸನೆಯಾಗಿಯೂ ಅರ್ಪಿಸಬೇಕು. ಕ್ರಮಾನುಸಾರವಾದ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ ಇವುಗಳನ್ನೂ ಅರ್ಪಿಸಬೇಕು.


ಹೊತ್ತಾರೆಯ ಸಮರ್ಪಣೆಯೊಂದಿಗೆ ನೀವು ಧಾನ್ಯಸಮರ್ಪಣೆಗಾಗಿ ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋಧಿಹಿಟ್ಟನ್ನೂ ಬೆರೆಸಿ ಸಮರ್ಪಿಸಬೇಕು.”


ನಿರುದ್ದೇಶದಿಂದ ಮತ್ತು ಸಮುದಾಯಕ್ಕೆ ತಿಳಿಯದಂತೆ ಇದನ್ನು ಮಾಡಿದ್ದಾಗಿದ್ದರೆ, ಯೆಹೋವನಿಗೆ ಸುಗಂಧ ವಾಸನೆಯನ್ನು ಉಂಟುಮಾಡುವುದಕ್ಕಾಗಿ ಒಂದು ಎಳೆಹೋರಿಯನ್ನು ಸರ್ವಾಂಗಹೋಮವಾಗಿ ಅರ್ಪಿಸಬೇಕು ಮತ್ತು ಅದರೊಡನೆ ಧಾನ್ಯಾರ್ಪಣೆಯನ್ನೂ ಪಾನಾರ್ಪಣೆಯನ್ನೂ ಪಾಪಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಅರ್ಪಿಸಬೇಕು.


ಪಾನದ್ರವ್ಯಕ್ಕಾಗಿ ಎರಡು ಸೇರು ದ್ರಾಕ್ಷಾರಸವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಯಜ್ಞವಾಗಿರುತ್ತದೆ.


ಮತ್ತು ಹನ್ನೆರಡು ಪೌಂಡುಗಳಷ್ಟು ಲವಂಗಚಕ್ಕೆಯನ್ನು ತೆಗೆದುಕೊಂಡು ಬಾ. ಇವುಗಳನ್ನೆಲ್ಲ ಅಧಿಕೃತ ಅಳತೆಮಾಪಕದಿಂದ ಅಳತೆಮಾಡು. ಒಂದು ಗ್ಯಾಲನ್ ಆಲಿವ್ ಎಣ್ಣೆಯನ್ನೂ ತೆಗೆದುಕೊಂಡು ಬಾ.


(ಅವರು ಮನ್ನವನ್ನು ಅಳೆಯುವುದಕ್ಕೆ ಗೋಮೆರ್ ಎಂಬ ಅಳತೆಯನ್ನು ಉಪಯೋಗಿಸಿದರು.)


ಯಾಕೋಬನು ಈ ಸ್ಥಳದಲ್ಲಿ ಜ್ಞಾಪಕಾರ್ಥವಾಗಿ ಒಂದು ಸ್ಮಾರಕಕಲ್ಲನ್ನು ನಿಲ್ಲಿಸಿ ಅದರ ಮೇಲೆ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸುರಿದನು. ಇದು ಒಂದು ವಿಶೇಷವಾದ ಸ್ಥಳ. ಯಾಕೆಂದರೆ ಅಲ್ಲಿ ದೇವರು ಯಾಕೋಬನೊಂದಿಗೆ ಮಾತಾಡಿದನು. ಯಾಕೋಬನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು.


ಮುಂಜಾನೆ ಒಂದು ಕುರಿಮರಿಯನ್ನು ಮತ್ತು ಸಾಯಂಕಾಲ ಮತ್ತೊಂದು ಕುರಿಮರಿಯನ್ನು ಸಮರ್ಪಿಸಬೇಕು.


ನೀನು ಸಾಯಂಕಾಲದಲ್ಲಿ ಮತ್ತೊಂದು ಕುರಿಮರಿಯನ್ನು ವಧಿಸುವಾಗಲೂ ಮೂರು ಸೇರು ಶ್ರೇಷ್ಠ ಗೋಧಿಯನ್ನೂ ಅರ್ಧ ಸೇರು ದ್ರಾಕ್ಷಾರಸವನ್ನೂ ಸಮರ್ಪಿಸು. ಇದು ಯೆಹೋವನಿಗೆ ಸುಗಂಧಹೋಮವಾಗಿರುವುದು.


ಮುಂಜಾನೆ, ಯಜ್ಞಗಳನ್ನು ಅರ್ಪಿಸುವ ಕಾಲದಲ್ಲಿ ಎದೋಮಿನ ಕಡೆಯಿಂದ ನೀರು ಹರಿಯಲಾರಂಭಿಸಿತು ಮತ್ತು ಕಣಿವೆಯು ತುಂಬಿಕೊಂಡಿತು.


ಇಸ್ರೇಲರು ಯೆಹೋವನಿಗೆ ದ್ರಾಕ್ಷಾರಸದ ಸಮರ್ಪಣೆ ಮಾಡುವದಿಲ್ಲ. ಆತನಿಗೆ ಯಜ್ಞವನ್ನರ್ಪಿಸುವದಿಲ್ಲ. ಅವರ ಯಜ್ಞಗಳು ಸಮಾಧಿಗಳಲ್ಲಿ ಉಣ್ಣುವ ಆಹಾರದಂತಿರುವದು. ಅದನ್ನು ಯಾವನಾದರೂ ಉಂಡಲ್ಲಿ ಅವನು ಅಶುದ್ಧನಾಗುವನು. ಅವರ ರೊಟ್ಟಿಯು ದೇವರ ಆಲಯದೊಳಗೆ ಇಡಲ್ಪಡುವದಿಲ್ಲ. ಅವರೇ ಅದನ್ನು ತಿನ್ನಬೇಕು.


ಬೆಂಕಿಯು ವೇದಿಕೆಯ ಮೇಲೆ ಉರಿಯುತ್ತಲೇ ಇರಬೇಕು; ಆರಿಹೋಗಬಾರದು.


“ಮಹಾಯಾಜಕನಾದ ಆರೋನನ ಮಗನಾದ ಎಲ್ಲಾಜಾರನು ಇಡೀ ಪವಿತ್ರ ಗುಡಾರವನ್ನು ಮತ್ತು ಎಲ್ಲಾ ಪವಿತ್ರಸ್ಥಳವನ್ನು ಮತ್ತು ಅದರೊಳಗಿರುವ ಎಲ್ಲಾ ಪಾತ್ರೆಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಹೊಂದಿದ್ದಾನೆ. ದೀಪದ ಎಣ್ಣೆಗೂ ಪರಿಮಳಧೂಪಕ್ಕೂ ದೈನಂದಿನ ಧಾನ್ಯಸಮರ್ಪಣೆಗೂ ಅಭಿಷೇಕತೈಲಕ್ಕೂ ಅವನು ಜವಾಬ್ದಾರನಾಗಿದ್ದಾನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು