Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:46 - ಪರಿಶುದ್ದ ಬೈಬಲ್‌

46 ನಾನು ಅವರ ದೇವರಾದ ಯೆಹೋವನಾಗಿದ್ದೇನೆಂದು ಜನರು ತಿಳಿದುಕೊಳ್ಳುವರು. ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿ ಈಜಿಪ್ಟಿನಿಂದ ಅವರನ್ನು ಕರೆದುಕೊಂಡು ಬಂದವನು ನಾನೇ ಎಂದು ಅವರು ತಿಳಿದುಕೊಳ್ಳುವರು. ನಾನು ಅವರ ದೇವರಾಗಿರುವ ಯೆಹೋವನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ ನಾನೇ ಅವರ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು. ಅವರ ದೇವರಾದ ಯೆಹೋವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ತಮ್ಮ ಮಧ್ಯದಲ್ಲಿ ವಾಸವಾಗುವದಕ್ಕಾಗಿಯೇ ತಮ್ಮನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ ತಮ್ಮ ದೇವರಾದ ಯೆಹೋವನು ನಾನೇ ಎಂದು ಅವರು ತಿಳುಕೊಳ್ಳುವರು. ನಾನು ಅವರ ದೇವರಾದ ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ಅವರ ದೇವರಾದ ಯೆಹೋವ ದೇವರು ನಾನೇ ಎಂದು ಅವರಿಗೆ ತಿಳಿಯುವುದು. ನಾನೇ ಅವರ ದೇವರಾದ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:46
17 ತಿಳಿವುಗಳ ಹೋಲಿಕೆ  

“ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.


ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.


ನೀನು ಅವರಿಗೆ, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ಇಸ್ರೇಲನ್ನು ಆರಿಸಿಕೊಂಡ ದಿವಸ ನಾನು ನನ್ನನ್ನು ಈಜಿಪ್ಟ್ ದೇಶದಲ್ಲಿ ಅವರಿಗೆ ಪ್ರಕಟಿಸಿಕೊಂಡೆನು. ನಾನು ನನ್ನ ಕೈಯನ್ನು ಮೇಲೆತ್ತಿ ಯಾಕೋಬನ ಕುಟುಂಬಕ್ಕೆ ವಾಗ್ದಾನ ಮಾಡಿದೆನು. ನಾನು ಅವರಿಗೆ, “ನಿಮ್ಮ ಒಡೆಯನಾದ ಯೆಹೋವನು ನಾನೇ.” ಎಂದು ಹೇಳಿದೆನು.


“ಇಸ್ರೇಲರಿಗೆ ಹೀಗೆ ಹೇಳು: ನಾನೇ ನಿಮ್ಮ ದೇವರಾದ ಯೆಹೋವನು ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು!


ಅನ್ಯಜನರು ಆ ಭಯಂಕರ ಪಾಪಗಳನ್ನು ಮಾಡಿದ್ದಾರೆ. ಆದರೆ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.”


ಯಾಕೆಂದರೆ, ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ, ಆದ್ದರಿಂದ ನೀವೂ ಪರಿಶುದ್ಧರಾಗಿರಬೇಕು. ಹರಿದಾಡುವ ಆ ಜಂತುಗಳಿಂದ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ.


ಇದಲ್ಲದೆ ದೇವರು ಮೋಶೆಗೆ, “ಜನರು ನನಗೋಸ್ಕರವಾಗಿ ಒಂದು ಪವಿತ್ರ ಗುಡಾರವನ್ನು ಕಟ್ಟಬೇಕು. ಆಗ ನಾನು ಅವರ ನಡುವೆ ಅದರಲ್ಲಿ ವಾಸಿಸುವೆನು.


ಅಲ್ಲದೆ ನಾನು ನಿಮ್ಮ ಮಧ್ಯದಲ್ಲಿ ನನ್ನ ಪವಿತ್ರಗುಡಾರವನ್ನು ಇಡುವೆನು. ನಾನು ನಿಮ್ಮಿಂದ ದೂರ ಹೋಗುವುದಿಲ್ಲ.


ಆಗ ಯೆಹೂದದ ಜನರು ದೇವರ ವಿಶೇಷ ಪ್ರಜೆಯಾದರು; ಇಸ್ರೇಲ್ ಆತನ ರಾಜ್ಯವಾಯಿತು.


ಯೆಹೋವನು ಹೇಳುವುದೇನೆಂದರೆ, “‘ನೀವು ಈಜಿಪ್ಟ್ ದೇಶವನ್ನು ಬಿಟ್ಟಾಗ ನಾನು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ನಾನು ಆ ವಾಗ್ದಾನವನ್ನು ನೆರವೇರಿಸಿದ್ದೇನೆ! ನನ್ನ ಆತ್ಮವು ನಿಮ್ಮೊಂದಿಗಿದೆ. ಆದ್ದರಿಂದ ಭಯಪಡಬೇಡಿ!’


ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ.


ನಾನು ನಿಮ್ಮೊಂದಿಗೆ ನಡೆಯುತ್ತಾ ನಿಮ್ಮ ದೇವರಾಗಿರುವೆನು ಮತ್ತು ನೀವು ನನ್ನ ಜನರಾಗಿರುವಿರಿ.


ಅವರು ಮೋಶೆ ಮತ್ತು ಆರೋನರ ವಿರುದ್ಧ ಒಟ್ಟಾಗಿ ಸೇರಿಬಂದು, ಅವರಿಗೆ, “ನೀವು ಅಧಿಕಾರವನ್ನು ಮತ್ತು ಘನತೆಯನ್ನು ಅತಿಯಾಗಿ ಅಪೇಕ್ಷಿಸುತ್ತಿರುವಿರಿ. ಈ ಸಮೂಹದವರಲ್ಲಿರುವ ಪ್ರತಿಯೊಬ್ಬನೂ ದೇವರಿಗೆ ಪ್ರತಿಷ್ಠಿತನೇ. ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಜನರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇನು?” ಎಂದು ಕೇಳಿದರು.


ಸಮುವೇಲನು ಅವರಿಗೆ, “ಇಸ್ರೇಲರ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಾನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದೆನು. ನಾನು ಈಜಿಪ್ಟಿನವರ ಆಳ್ವಿಕೆಯಿಂದ ಮತ್ತು ನಿಮಗೆ ಹಾನಿಮಾಡಲು ಪ್ರಯತ್ನಿಸಿದ ಇತರ ರಾಜ್ಯಗಳಿಂದ ರಕ್ಷಿಸಿದೆನು’ ಎನ್ನುತ್ತಾನೆ.


“ದೇವರೇ, ನೀನು ಭೂಮಿಯ ಮೇಲೆ ಜನರೊಂದಿಗೆ ವಾಸಿಸುವವನಲ್ಲವೆಂದು ತಿಳಿದಿದ್ದೇವೆ. ಆಕಾಶಮಂಡಲವಾಗಲಿ ಅತ್ಯುನ್ನತವಾದ ಆಕಾಶವಾಗಲಿ ನಿನಗೆ ವಾಸಸ್ಥಾನವಾಗಲು ಸಾಧ್ಯವಿಲ್ಲ. ಈಗ ನಾನು ಕಟ್ಟಿರುವ ಈ ಆಲಯವು ಸಹ ನಿನ್ನ ವಾಸಕ್ಕೆ ಸಾಲದು.


ನೀನು ಸ್ತಬ್ಧನಾಗಿರುವೆ; ಯಾರನ್ನೂ ರಕ್ಷಿಸಲಾಗದ ಸೈನಿಕನಂತಾಗಿರುವೆ. ಯೆಹೋವನೇ, ನೀನಾದರೋ ನಮ್ಮ ಜೊತೆಯಲ್ಲಿರುವೆ. ನಾವು ನಿನ್ನ ಹೆಸರಿನವರಾಗಿದ್ದೇವೆ. ಆದ್ದರಿಂದ ನಮ್ಮನ್ನು ಕೈಬಿಡಬೇಡ.”


ಯೆಹೋವನಾದ ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರೊಂದಿಗೆ ವಾಸಿಸುತ್ತಾ ಅವರನ್ನು ಆಳುವನು. ಇದು ಯೆಹೋವನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು