ವಿಮೋಚನಕಾಂಡ 29:5 - ಪರಿಶುದ್ದ ಬೈಬಲ್5 ವಿಶೇಷವಾದ ಬಟ್ಟೆಗಳನ್ನು ಆರೋನನಿಗೆ ತೊಡಿಸು. ಹೆಣೆದ ಅಂಗಿಯನ್ನು ಮತ್ತು ಏಫೋದಿನೊಡನೆ ಧರಿಸತಕ್ಕ ದೈವನಿರ್ಣಯದ ಪದಕವನ್ನು ಅವನಿಗೆ ತೊಡಿಸು. ಬಳಿಕ ಅಂದವಾದ ನಡುಕಟ್ಟನ್ನು ಅವನಿಗೆ ಕಟ್ಟು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ವಸ್ತ್ರಗಳನ್ನು ತೆಗೆದುಕೊಂಡು ಒಳ ಅಂಗಿಯನ್ನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳತಕ್ಕ ನಿಲುವಂಗಿಯನ್ನೂ, ಏಫೋದ್ ಕವಚವನ್ನು ಎದೆಯ ಪದಕವನ್ನೂ ಆರೋನನಿಗೆ ತೊಡಿಸಿ ಏಫೋದ್ ಕವಚದ ಕಸೂತಿ ಹಾಕಿದ ನಡುಕಟ್ಟನ್ನು ಕಟ್ಟಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ತರುವಾಯ ಆರೋನನಿಗೆ ಆ ವಸ್ತ್ರಗಳನ್ನು ಅಂದರೆ, ನಿಲುವಂಗಿಯನ್ನು, ಕವಚದೊಳಗೆ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು, ಎಫೋದ್ ಕವಚವನ್ನು, ಎದೆಕವಚವನ್ನು ತೊಡಿಸಿ, ಕವಚದ ಕಸೂತಿ ನಡುಕಟ್ಟನ್ನು ಕಟ್ಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆ ವಸ್ತ್ರಗಳನ್ನು ಅಂದರೆ ನಿಲುವಂಗಿಯನ್ನೂ ಕವಚದ ಸಂಗಡ ತೊಟ್ಟುಕೊಳ್ಳತಕ್ಕ ಮೇಲಂಗಿಯನ್ನೂ ಕವಚವನ್ನೂ ಚೀಲದ ಪದಕವನ್ನೂ ಆರೋನನಿಗೆ ತೊಡಿಸಿ ಕವಚದ ವಿಚಿತ್ರವಾದ ನಡುಕಟ್ಟನ್ನು ಕಟ್ಟಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ತರುವಾಯ ಆ ವಸ್ತ್ರಗಳನ್ನು ತೆಗೆದುಕೊಂಡು ಆರೋನನಿಗೆ ಅಂಗಿಯನ್ನೂ ಏಫೋದಿನ ನಿಲುವಂಗಿಯನ್ನೂ ಏಫೋದನ್ನೂ ಎದೆಪದಕವನ್ನೂ ತೊಡಿಸಿ, ಏಫೋದಿನ ಕಲಾತ್ಮಕವಾದ ನಡುಕಟ್ಟಿನಿಂದ ಅವನ ನಡುವನ್ನೂ ಕಟ್ಟಿ, ಅಧ್ಯಾಯವನ್ನು ನೋಡಿ |