ವಿಮೋಚನಕಾಂಡ 3:14 - ಪರಿಶುದ್ದ ಬೈಬಲ್14 ಆಗ ದೇವರು ಮೋಶೆಗೆ, “ನಾನು ‘ಇರುವಾತನೇ’ ಆಗಿದ್ದೇನೆ. ನೀನು ಇಸ್ರೇಲರ ಬಳಿಗೆ ಹೋದಾಗ ‘ಇರುವಾತನೇ’ ಎಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳು” ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ” ಎಂದು ಹೇಳಿದನು. “ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ದೇವರು ಹೀಗೆಂದರು: “ಇರುವವನಾಗಿ ಇರುವವನು ನಾನೇ; ನೀನು ಇಸ್ರಯೇಲರಿಗೆ 'ತಾನಾಗಿ ಇರುವವನು,' ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾನೆ ಎಂದು ಹೇಳು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದೇವರು ಅವನಿಗೆ - ಇರುವಾತನೇ ಆಗಿದ್ದೇನೆ. ನೀನು ಇಸ್ರಾಯೇಲ್ಯರಿಗೆ - ಇರುವಾತನೆಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ. ‘ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು,” ಎಂದರು. ಅಧ್ಯಾಯವನ್ನು ನೋಡಿ |
ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”