ವಿಮೋಚನಕಾಂಡ 3:16 - ಪರಿಶುದ್ದ ಬೈಬಲ್16 ಇದಲ್ಲದೆ ಯೆಹೋವನು ಅವನಿಗೆ, “ನೀನು ಹೋಗಿ ಇಸ್ರೇಲರ ನಾಯಕರನ್ನು ಒಟ್ಟುಗೂಡಿಸಿ ಅವರಿಗೆ, ‘ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನನಗೆ ಕಾಣಿಸಿಕೊಂಡನು. ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದವುಗಳನ್ನು ನಾನು ಲಕ್ಷ್ಯವಿಟ್ಟು ನೋಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀನು ಹೋಗಿ ಇಸ್ರಯೇಲರ ಹಿರಿಯರನ್ನು ಕೂಡಿಸು. ಅವರಿಗೆ, “ನಿಮ್ಮ ಪೂರ್ವಜರ ದೇವರು, ಅಂದರೆ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರು ಆಗಿರುವ ಸರ್ವೇಶ್ವರ ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ ಹೀಗೆಂದಿದ್ದಾರೆ: ನಿಮ್ಮನ್ನೂ ಈಜಿಪ್ಟ್ ದೇಶದಲ್ಲಿ ನಿಮಗೆ ಸಂಭವಿಸಿದ್ದೆಲ್ಲವನ್ನೂ ನಾನು ಕಣ್ಣಾರೆ ಕಂಡು ತಿಳಿದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀನು ಹೋಗಿ ಇಸ್ರಾಯೇಲ್ಯರ ಹಿರಿಯರನ್ನು ಕೂಡಿಸಿ ಅವರಿಗೆ - ನಿಮ್ಮ ಪಿತೃಗಳ ದೇವರು ಅಂದರೆ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ - ನಾನು ನಿಮ್ಮಲ್ಲಿ ಲಕ್ಷ್ಯವಿಟ್ಟು ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ತಿಳುಕೊಂಡಿದ್ದೇನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ನೀನು ಹೋಗಿ ಇಸ್ರಾಯೇಲ್ ಹಿರಿಯರನ್ನು ಕೂಡಿಸಿ ಅವರಿಗೆ, ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನಗೆ ಕಾಣಿಸಿಕೊಂಡು ಹೀಗೆಂದಿದ್ದಾರೆ: ನಾನು ನಿಮ್ಮನ್ನೂ ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲವನ್ನೂ ನಿಶ್ಚಯವಾಗಿ ನೋಡಿದ್ದೇನೆ. ಅಧ್ಯಾಯವನ್ನು ನೋಡಿ |