Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:2 - ಪರಿಶುದ್ದ ಬೈಬಲ್‌

2 ಆ ಬೆಟ್ಟದಲ್ಲಿ ಯೆಹೋವನ ದೂತನು ಮೋಶೆಗೆ ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡನು. ಪೊದೆಯು ಉರಿಯುತ್ತಿದ್ದರೂ ಸುಟ್ಟು ಹೋಗದಿರುವುದನ್ನು ಮೋಶೆ ಗಮನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಯೆಹೋವನ ದೂತನು ಮುಳ್ಳಿನ ಪೊದೆಯೊಳಗಿನಿಂದ ಉರಿಯುವ ಬೆಂಕಿ ಜ್ವಾಲೆಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ಕಣ್ಣೆತ್ತಿ ನೋಡಿದಾಗ, ಆ ಮುಳ್ಳಿನ ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು; ಆದರೆ ಅದು ಸುಟ್ಟು ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ ಮುಳ್ಳಿನ ಪೊದೆಯೊಂದರ ಒಳಗೆ ಉರಿಯುವ ಬೆಂಕಿಯಲ್ಲಿ ಸರ್ವೇಶ್ವರನ ದೂತನು ಅವನಿಗೆ ಕಾಣಿಸಿಕೊಂಡನು. ಮೋಶೆ ನೋಡಿದನು. ಆ ಮುಳ್ಳಿನ ಪೊದೆ ಉರಿಯುತ್ತಲೇ ಇತ್ತು; ಆದರೆ ಸುಟ್ಟುಹೋಗದೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಯೆಹೋವನ ದೂತನು ಅವನಿಗೆ ಕಾಣಿಸಿಕೊಂಡನು. ಹೇಗಂದರೆ ಅವನು ಒಂದು ಮುಳ್ಳಿನ ಪೊದೆಯನ್ನು ಕಂಡನು ಆ ಪೊದೆಯು ಬೆಂಕಿಯಿಂದ ಉರಿಯುತ್ತಿದ್ದರೂ ಅದು ಸುಟ್ಟುಹೋಗದೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಯೆಹೋವ ದೇವರ ದೂತನು ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ನೋಡಿದಾಗ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು ಆದಾಗ್ಯೂ ಪೊದೆಯು ಸುಟ್ಟು ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:2
29 ತಿಳಿವುಗಳ ಹೋಲಿಕೆ  

ನಿನ್ನ ಕಷ್ಟಕಾಲದಲ್ಲಿ ನಾನು ನಿನ್ನೊಂದಿಗಿರುವೆನು. ನೀನು ಜಲರಾಶಿಯನ್ನು ಹಾದುಹೋಗುವಾಗ ನಾನೇ ನಿನ್ನೊಂದಿಗಿರುವೆ. ನೀನು ನದಿಗಳನ್ನು ದಾಟುವಾಗ ಅಪಾಯಕ್ಕೆ ಗುರಿಯಾಗದಿರುವೆ. ಬೆಂಕಿಯೊಳಗಿಂದ ನಡೆಯುವಾಗ ನಿನಗೆ ಹಾನಿಯಾಗದು.


ಸತ್ತಜನರ ಪುನರುತ್ಥಾನದ ಬಗ್ಗೆ ದೇವರು ಹೇಳಿರುವುದನ್ನು ನೀವು ಖಂಡಿತವಾಗಿ ಓದಿದ್ದೀರಿ. ದೇವರು ಮೋಶೆಗೆ, ‘ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದನ್ನು ಮೋಶೆಯ ಪುಸ್ತಕದಲ್ಲಿರುವ ಉರಿಯುವ ಪೊದೆಯ ಅಧ್ಯಾಯದಲ್ಲಿ ಕಾಣಬಹುದು.


ಭೂಮಿಯು ಒಳ್ಳೆಯದನ್ನು ಯೋಸೇಫನಿಗೆ ಕೊಡಲಿ. ಯೋಸೇಫನು ತನ್ನ ಸಹೋದರರಿಂದ ಬೇರ್ಪಡಿಸಿಕೊಂಡಿರುವನು. ಆದ್ದರಿಂದ ಉರಿಯುವ ಪೊದೆಯಲ್ಲಿರುವ ಯೆಹೋವನು ಉತ್ತಮವಾದವುಗಳನ್ನು ಯೋಸೇಫನಿಗೆ ಕೊಡಲಿ.


ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯು ಸ್ಪಷ್ಟವಾಗಿ ತೋರಿಸಿದ್ದಾನೆ. ಉರಿಯುವ ಪೊದೆಯ ಕುರಿತು ಮೋಶೆ ಬರೆಯುವಾಗ ‘ಪ್ರಭುವಾದ ದೇವರೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದಾನೆ.


ಶತ್ರುಗಳು ನಮ್ಮ ಮೇಲೆ ನಡೆಯಮಾಡಿದೆ. ನೀನು ನಮ್ಮನ್ನು ಬೆಂಕಿಯಲ್ಲಿಯೂ ನೀರಿನಲ್ಲಿಯೂ ಹಾಯಿಸಿದೆ. ಆದರೂ ಸುರಕ್ಷಿತ ಸ್ಥಳಕ್ಕೆ ನಮ್ಮನ್ನು ತಂದು ಸೇರಿಸಿದೆ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.


ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.


ಇದಲ್ಲದೆ ಯೆಹೋವನು ಅವನಿಗೆ, “ನೀನು ಹೋಗಿ ಇಸ್ರೇಲರ ನಾಯಕರನ್ನು ಒಟ್ಟುಗೂಡಿಸಿ ಅವರಿಗೆ, ‘ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನನಗೆ ಕಾಣಿಸಿಕೊಂಡನು. ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಹೇಳುವುದೇನೆಂದರೆ, ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದವುಗಳನ್ನು ನಾನು ಲಕ್ಷ್ಯವಿಟ್ಟು ನೋಡಿದ್ದೇನೆ.


ಅವರು ಹೊರಗೆ ಬಂದ ಮೇಲೆ ಉಪರಾಜರು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಇತರರು ಅವರ ಸುತ್ತಲೂ ನೆರೆದರು. ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳನ್ನು ಬೆಂಕಿಯು ಸುಟ್ಟಿಲ್ಲ. ಅವರ ದೇಹಕ್ಕೆ ಬೆಂಕಿಯು ಮುಟ್ಟಿಲ್ಲ. ಅವರ ಕೂದಲಿಗೂ ವಸ್ತ್ರಗಳಿಗೂ ಬೆಂಕಿಯು ತಾಕಿಲ್ಲ. ಬೆಂಕಿಯ ಸಮೀಪಕ್ಕೆ ಹೋದ ವಾಸನೆಯೂ ಅವರಿಗೆ ಮುಟ್ಟಿಲ್ಲ ಎಂಬುದನ್ನು ಅವರು ತಿಳಿದುಕೊಂಡರು.


ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”


ಆದರೆ ಯೆಹೋವನು ನಿಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ತನ್ನ ಸ್ವಕೀಯ ಪ್ರಜೆಯನ್ನಾಗಿ ಮಾಡಿಕೊಂಡಿರುತ್ತಾನೆ. ಕಬ್ಬಿಣವನ್ನು ಕರಗಿಸುವ ಬೆಂಕಿಯ ಕುಲುಮೆಯಂತಿದ್ದ ಈಜಿಪ್ಟಿನಿಂದ ನಿಮ್ಮನ್ನು ಎಳೆದು ತಂದು ತನ್ನ ವಿಶೇಷ ಜನಾಂಗವಾಗಿ ನಿಮ್ಮನ್ನು ತೆಗೆದುಕೊಂಡಿರುತ್ತಾನೆ. ಈಗ ನೀವು ಆತನ ಜನರಾಗಿದ್ದೀರಿ.


ಧರ್ಮಶಾಸ್ತ್ರವು ನಿರ್ಬಲವಾಗಿತ್ತು. ಏಕೆಂದರೆ ನಮ್ಮ ಪಾಪಾಧೀನಸ್ವಭಾವವೇ ಅದನ್ನು ಬಲಹೀನಗೊಳಿಸಿತು. ಹೀಗಿರಲಾಗಿ, ಧರ್ಮಶಾಸ್ತ್ರವು ಮಾಡಲಾಗದ್ದನ್ನು ದೇವರು ಮಾಡಿದನು. ದೇವರು ತನ್ನ ಸ್ವಂತ ಮಗನನ್ನೇ ಪಾಪಾಧೀನವಾದ ಮಾನವ ಸ್ವಭಾವದಲ್ಲಿ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಕಳುಹಿಸಿಕೊಟ್ಟನು. ಆದಕಾರಣ ದೇವರು ಪಾಪಕ್ಕೆ ಮರಣದಂಡನೆಯನ್ನು ವಿಧಿಸಲು ಮಾನವ ಸ್ವಭಾವವನ್ನೇ ಉಪಯೋಗಿಸಿಕೊಂಡನು.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ತೊಂದರೆಗೆ ಒಳಗಾಗಿರುವ ನಿಮಗೆ ದೇವರು ಶಾಂತಿಯನ್ನು ನೀಡುತ್ತಾನೆ. ಆತನು ನಮಗೂ ಶಾಂತಿಯನ್ನು ನೀಡುವನು. ಪ್ರಭುವಾದ ಯೇಸು ತನ್ನ ಶಕ್ತಿಶಾಲಿಗಳಾದ ದೂತರೊಂದಿಗೆ ಪರಲೋಕದಿಂದ ಪ್ರತ್ಯಕ್ಷನಾದಾಗ ಈ ಶಾಂತಿಯನ್ನು ದಯಪಾಲಿಸುತ್ತಾನೆ.


ಮಗುವಿನ ಕೂಗು ದೇವರಿಗೆ ಕೇಳಿಸಿತು. ಆಗ ದೇವದೂತನು ಆಕಾಶದಿಂದ ಆಕೆಯನ್ನು ಕರೆದು, “ಹಾಗರಳೇ, ನಿನಗೇನಾಯಿತು? ಭಯಪಡಬೇಡ; ಮಗುವಿನ ಕೂಗನ್ನು ಯೆಹೋವನು ಕೇಳಿದ್ದಾನೆ.


ಯೆಹೋವನ ದೂತನು ಪರಲೋಕದಿಂದ, “ಅಬ್ರಹಾಮನೇ, ಅಬ್ರಹಾಮನೇ!” ಎಂದು ಕರೆದನು. ಅಬ್ರಹಾಮನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು.


ಸೀನಾಯಿ ಬೆಟ್ಟವು ಹೊಗೆಯಿಂದ ಕವಿದುಕೊಂಡಿತು. ಕುಲುಮೆಯಿಂದ ಬರುವ ಹೊಗೆಯಂತೆ, ಬೆಟ್ಟದಿಂದ ಹೊಗೆಯು ಮೇಲಕ್ಕೇರಿತು. ಯೆಹೋವನು ಬೆಂಕಿಯಲ್ಲಿ ಬೆಟ್ಟದ ಮೇಲೆ ಇಳಿದು ಬಂದದ್ದರಿಂದ ಇದು ಸಂಭವಿಸಿತು. ಇಡೀ ಬೆಟ್ಟ ನಡುಗಲಾರಂಭಿಸಿತು.


“ಇಗೋ, ನಿಮ್ಮ ಮುಂದೆ ನಾನು ಒಬ್ಬ ದೂತನನ್ನು ಕಳುಹಿಸುತ್ತಿದ್ದೇನೆ. ನಾನು ನಿಮಗಾಗಿ ಸಿದ್ಧಮಾಡಿದ ಸ್ಥಳಕ್ಕೆ ಈ ದೂತನು ನಿಮ್ಮನ್ನು ಮುನ್ನಡೆಸುವನು; ದಾರಿಯುದ್ದಕ್ಕೂ ಸಂರಕ್ಷಿಸುವನು.


ಇಸ್ರೇಲರಿಗೆ ಯೆಹೋವನ ಮಹಿಮೆಯು ಬೆಟ್ಟದ ತುದಿಯಲ್ಲಿ ಉರಿಯುವ ಬೆಂಕಿಯಂತೆ ಕಾಣುತ್ತಿತ್ತು.


ಯೆಹೋವನ ದೂತನು ಮಾನೋಹನಿಗೆ, “ನಿನ್ನ ಹೆಂಡತಿಯು ನಾನು ಹೇಳಿದ್ದೆಲ್ಲವನ್ನು ಮಾಡಬೇಕು. ಅವಳು ದ್ರಾಕ್ಷಾಫಲಗಳನ್ನು ತಿನ್ನಬಾರದು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು