ವಿಮೋಚನಕಾಂಡ 3:20 - ಪರಿಶುದ್ದ ಬೈಬಲ್20 ಆದ್ದರಿಂದ ನಾನು ಕೈಚಾಚಿ ಈಜಿಪ್ಟಿನ ವಿರುದ್ಧ ಮಹತ್ಕಾರ್ಯಗಳನ್ನು ಮಾಡಿ ಅನೇಕ ವಿಧದಲ್ಲಿ ಅದನ್ನು ಬಾಧಿಸುವೆನು. ಆಗ ಅವನು ನಿಮ್ಮನ್ನು ಹೋಗಗೊಡಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆದಕಾರಣ ನಾನು ನನ್ನ ಕೈಯನ್ನು ಚಾಚಿ ಐಗುಪ್ತ ದೇಶದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು. ಅನಂತರ ಅರಸನು ನಿಮ್ಮನ್ನು ಕಳುಹಿಸಿಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆದಕಾರಣ ನನ್ನ ಭುಜಬಲವನ್ನು ಪ್ರದರ್ಶಿಸುವೆನು. "ಅಲ್ಲಿ ಮಹಾತ್ಕಾರ್ಯಗಳನ್ನು ಮಾಡಿ, ಈಜಿಪ್ಟ್ ದೇಶವನ್ನೆ ನಾನಾವಿಧವಾಗಿ ಬಾಧಿಸುವೆನು. ಆಮೇಲೆ ಅರಸನು ನಿಮ್ಮನ್ನು ಬಿಡುಗಡೆಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದಕಾರಣ ನಾನು ಕೈಚಾಚಿ ಐಗುಪ್ತದೇಶದ ಮಧ್ಯದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು; ಆಮೇಲೆ ಅರಸನು ನಿಮ್ಮನ್ನು ಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಹೀಗಿರುವುದರಿಂದ ನನ್ನ ಕೈಯನ್ನು ಚಾಚಿ ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿ, ನಾನು ಅದನ್ನು ನಾನಾ ವಿಧವಾಗಿ ಬಾಧಿಸುವೆನು. ತರುವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು. ಅಧ್ಯಾಯವನ್ನು ನೋಡಿ |
ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!