ವಿಮೋಚನಕಾಂಡ 3:21 - ಪರಿಶುದ್ದ ಬೈಬಲ್21 ಈಜಿಪ್ಟಿನ ಜನರು ಇಸ್ರೇಲರಿಗೆ ದಯೆ ತೋರುವಂತೆ ಮಾಡುವೆನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಡುವಾಗ ಈಜಿಪ್ಟಿನವರು ಅವರಿಗೆ ಉಡುಗೊರೆಗಳನ್ನು ಕೊಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಇದಲ್ಲದೆ ಈ ನನ್ನ ಜನರ ಮೇಲೆ ಐಗುಪ್ತ್ಯರಿಗೆ ದಯೆಯುಂಟಾಗುವಂತೆ ಮಾಡುವೆನು. ಆದ್ದರಿಂದ ನೀವು ಹೊರಡುವಾಗ ಬರಿಗೈಯಲ್ಲಿ ಬರಬೇಕಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ನನ್ನ ಜನರಿಗೆ ಈಜಿಪ್ಟಿನವರು ಅನುಕಂಪ ತೋರಿಸುವಂತೆ ಮಾಡುವೆನು. ಆದ್ದರಿಂದ ನೀವು ಅಲ್ಲಿಂದ ಹೊರಡುವಾಗ ಬರಿಗೈಯಲ್ಲಿ ಹೋಗಬೇಕಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದಲ್ಲದೆ ಈ ನನ್ನ ಜನರಿಗೆ ಐಗುಪ್ತ್ಯರ ದಯೆ ದೊರಕುವಂತೆ ಮಾಡುವೆನು; ಆದದರಿಂದ ನೀವು ಹೊರಡುವಾಗ ಬರಿಗೈಲಿ ಹೋಗುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಇದಲ್ಲದೆ ಈ ಜನರಿಗೆ ಈಜಿಪ್ಟಿನವರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿ |
ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.
ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”