ವಿಮೋಚನಕಾಂಡ 3:22 - ಪರಿಶುದ್ದ ಬೈಬಲ್22 “ಪ್ರತಿಯೊಬ್ಬ ಇಬ್ರಿಯ ಸ್ತ್ರೀಯು ಈಜಿಪ್ಟಿನ ನೆರೆಯವರನ್ನಾಗಲಿ ಅಥವಾ ತನ್ನ ಮನೆಯಲ್ಲಿ ವಾಸಿಸುತ್ತಿರುವ ಯಾವುದೇ ಸ್ತ್ರೀಯನ್ನಾಗಲಿ ಕೇಳಿದರೆ ಅವರು ಆಕೆಗೆ ಉಡುಗೊರೆಗಳನ್ನು ಕೊಡುವರು. ನಿನ್ನ ಜನರು ಬೆಳ್ಳಿಬಂಗಾರಗಳನ್ನು, ಶ್ರೇಷ್ಠವಾದ ಬಟ್ಟೆಗಳನ್ನು ಪಡೆಯುವರು. ನೀವು ಈಜಿಪ್ಟನ್ನು ಬಿಡುವಾಗ ಆ ಉಡುಗೊರೆಗಳನ್ನು ನಿಮ್ಮ ಮಕ್ಕಳಿಗೆ ತೊಡಿಸುವಿರಿ. ಈ ರೀತಿಯಲ್ಲಿ ನೀವು ಈಜಿಪ್ಟಿನವರ ಐಶ್ವರ್ಯವನ್ನು ತೆಗೆದುಕೊಂಡು ಹೋಗುವಿರಿ” ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಿಮ್ಮಲ್ಲಿನ ಪ್ರತಿಯೊಬ್ಬ ಸ್ತ್ರೀಯು ನೆರೆಹೊರೆಯ ಹೆಂಗಸರಿಂದಲೂ, ನಿಮ್ಮ ಮನೆಗಳ ಅತಿಥಿಗಳಾಗಿ ತಂಗಿರುವ ಹೆಂಗಸರಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ, ಬಟ್ಟೆಗಳನ್ನೂ ಕೇಳಿಕೊಳ್ಳಲಿ. ನೀವು ಅವುಗಳನ್ನು ನಿಮ್ಮ ಗಂಡು ಹೆಣ್ಣು ಮಕ್ಕಳಿಗೆ ತೊಡಿಸಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲಿಗೆ ಮಾಡಿಹೊರಟು ಬರುವಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನಿಮ್ಮ ಪ್ರತಿಯೊಬ್ಬ ಮಹಿಳೆ ನೆರೆಹೊರೆಯ ಮಹಿಳೆಯರಿಂದಲೂ ನಿಮ್ಮ ಮನೆಯಲ್ಲೇ ತಂಗಿರುವ ಮಹಿಳೆಯರಿಂದಲೂ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ಬಟ್ಟೆಬರೆಗಳನ್ನು ಕೇಳಿಕೊಳ್ಳಲಿ. ಅವುಗಳನ್ನು ನಿಮ್ಮ ಮಕ್ಕಳುಮರಿಗಳಿಗೆ ತೊಡಿಸಿರಿ. ಹೀಗೆ ಈಜಿಪ್ಟರನ್ನು ಸೂರೆಮಾಡಿ ಹೊರಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಿಮ್ಮಲ್ಲಿ ಪ್ರತಿ ಸ್ತ್ರೀಯು ನೆರೇ ಹೆಂಗಸರಿಂದಲೂ ನಿಮ್ಮ ಮನೆಯಲ್ಲಿ ಇಳುಕೊಂಡ ಹೆಂಗಸರಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ಬಟ್ಟೆಗಳನ್ನೂ ಕೇಳಿಕೊಳ್ಳಲಿ. ನೀವು ಅವುಗಳನ್ನು ನಿಮ್ಮ ಗಂಡು ಹೆಣ್ಣು ಮಕ್ಕಳಿಗೆ ಇಡಿರಿ; ಇದರಿಂದ ಐಗುಪ್ತ್ಯರನ್ನು ಸೂರೆ ಮಾಡುವಿರಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಪ್ರತಿ ಸ್ತ್ರೀಯು ತನ್ನ ಮನೆಯಲ್ಲಿ ಇಳಿದುಕೊಂಡಿರುವ ಸ್ತ್ರೀಯಿಂದಲೂ ನೆರೆಯವಳಿಂದಲೂ ಬೆಳ್ಳಿಬಂಗಾರದ ಒಡವೆಗಳನ್ನು ಮತ್ತು ವಸ್ತ್ರಗಳನ್ನು ಕೇಳಿಕೊಳ್ಳಲಿ. ಅವುಗಳನ್ನು ನಿಮ್ಮ ಪುತ್ರಪುತ್ರಿಯರ ಮೇಲೆ ಹಾಕಿರಿ. ಹೀಗೆ ನೀವು ಈಜಿಪ್ಟಿನವರನ್ನು ಸೂರೆಮಾಡುವಿರಿ,” ಎಂದರು. ಅಧ್ಯಾಯವನ್ನು ನೋಡಿ |
ನೀವು ಯುದ್ಧಮಾಡಿ ಇತರರಿಂದ ಸುಲಿದುಕೊಳ್ಳುತ್ತೀರಿ. ಆದರೆ ಅವರು ನಿಮ್ಮಿಂದ ಏನೂ ಕದ್ದುಕೊಳ್ಳಲಿಲ್ಲ. ನೀವು ಜನರಿಗೆ ವಿರುದ್ಧವಾಗಿ ತಿರುಗುತ್ತೀರಿ. ಆದರೆ ಅವರು ನಿಮಗೆ ವಿರುದ್ಧವಾಗಲಿಲ್ಲ. ಆದ್ದರಿಂದ ನೀವು ಕದ್ದುಕೊಳ್ಳುವದನ್ನು ಬಿಟ್ಟಾಗ ಇತರರು ನಿಮ್ಮದನ್ನು ಕದ್ದುಕೊಳ್ಳುತ್ತಾರೆ. ನೀವು ಇತರರಿಗೆ ಹಾನಿ ಮಾಡುವದನ್ನು ನಿಲ್ಲಿಸಿದಾಗ ಇತರರು ನಿಮಗೆ ಹಾನಿ ಮಾಡುವರು. ಆಗ ನೀವು ಹೀಗೆ ಹೇಳುವಿರಿ: