Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:3 - ಪರಿಶುದ್ದ ಬೈಬಲ್‌

3 ಪೊದೆಯು ಉರಿಯುತ್ತಿದ್ದರೂ ಸುಟ್ಟುಹೋಗದಿರುವುದಕ್ಕೆ ಕಾರಣವೇನೆಂದು ತಿಳಿದುಕೊಳ್ಳಲು ಮೋಶೆಯು ಪೊದೆಯ ಸಮೀಪಕ್ಕೆ ಹೋಗತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಮೋಶೆ, “ಇದೇನು ಆಶ್ಚರ್ಯ! ಪೊದೆಯು ಸುಟ್ಟು ಹೋಗುತ್ತಿಲ್ಲವಲ್ಲಾ! ಇದನ್ನು ಹತ್ತಿರಕ್ಕೆ ಹೋಗಿ ನೋಡುವೆನು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಮೋಶೆ, “ಇದೇನು ಆಶ್ಚರ್ಯ! ಪೊದೆ ಸುಟ್ಟುಹೋಗದೆ ಇರುವುದಕ್ಕೆ ಕಾರಣವೇನು? ನಾನು ಹತ್ತಿರ ಹೋಗಿ ತಿಳಿದುಕೊಳ್ಳುತ್ತೇನೆ,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಮೋಶೆ - ನಾನು ದಾರಿ ಬಿಟ್ಟು ಈ ಆಶ್ಚರ್ಯವನ್ನು ನೋಡಿ ಪೊದೆಯು ಸುಟ್ಟು ಹೋಗದೆ ಇರುವದಕ್ಕೆ ಕಾರಣವನ್ನು ತಿಳುಕೊಳ್ಳುವೆನು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಮೋಶೆಯು, “ನಾನು ಹೋಗಿ ಆ ವಿಚಿತ್ರ ನೋಟವನ್ನೂ ಪೊದೆಯು ಏಕೆ ಸುಟ್ಟುಹೋಗಲಿಲ್ಲವೆಂಬುದನ್ನೂ ನೋಡುವೆನು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:3
5 ತಿಳಿವುಗಳ ಹೋಲಿಕೆ  

ಮೋಶೆಯು ಆಶ್ಚರ್ಯದಿಂದ ನೋಡಲು ಸಮೀಪಕ್ಕೆ ಹೋದನು. ಆಗ ಮೋಶೆಗೆ ವಾಣಿಯೊಂದು ಕೇಳಿಸಿತು. ಅದು ಪ್ರಭುವಿನ ವಾಣಿಯಾಗಿತ್ತು.


ಯೆಹೋವನ ಪ್ರೀತಿಗಾಗಿಯೂ ತನ್ನ ಜನರಿಗೋಸ್ಕರ ಆತನು ಮಾಡುವ ಅದ್ಭುತಕಾರ್ಯಗಳಿಗಾಗಿಯೂ ಆತನಿಗೆ ಕೃತಜ್ಞತಾಸ್ತುತಿಮಾಡಿರಿ.


“ಯೋಬನೇ, ಒಂದು ನಿಮಿಷ ಮೌನವಾಗಿದ್ದು ಕೇಳು. ದೇವರ ಅದ್ಭುತಕಾರ್ಯಗಳ ಬಗ್ಗೆ ಮೌನವಾಗಿದ್ದು ಆಲೋಚಿಸು.


ಆ ಬೆಟ್ಟದಲ್ಲಿ ಯೆಹೋವನ ದೂತನು ಮೋಶೆಗೆ ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡನು. ಪೊದೆಯು ಉರಿಯುತ್ತಿದ್ದರೂ ಸುಟ್ಟು ಹೋಗದಿರುವುದನ್ನು ಮೋಶೆ ಗಮನಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು