ವಿಮೋಚನಕಾಂಡ 3:5 - ಪರಿಶುದ್ದ ಬೈಬಲ್5 ಆಗ ಯೆಹೋವನು, “ಇನ್ನೂ ಹತ್ತಿರ ಬರಬೇಡ. ನಿನ್ನ ಪಾದರಕ್ಷೆಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೇವರು ಅವನಿಗೆ, “ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದೇವರು ಅವನಿಗೆ, “ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರಭೂಮಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೇವರು ಅವನಿಗೆ - ನೀನು ಹತ್ತಿರ ಬರಬೇಡ; ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂವಿು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ದೇವರು ಅವನಿಗೆ, “ಇಲ್ಲಿ ಸಮೀಪಕ್ಕೆ ಬರಬೇಡ, ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ,” ಎಂದರು. ಅಧ್ಯಾಯವನ್ನು ನೋಡಿ |
ಆದರೆ ಬೆಟ್ಟದಿಂದ ದೂರವಿರಬೇಕೆಂದು ನೀನು ಜನರಿಗೆ ಹೇಳಬೇಕು. ಒಂದು ಗೆರೆಯನ್ನು ಹಾಕಿ ಆ ಗೆರೆಯನ್ನು ದಾಟಬಾರದೆಂದು ಅವರಿಗೆ ತಿಳಿಸು. ಯಾವ ವ್ಯಕ್ತಿಯಾಗಲಿ ಬೆಟ್ಟವನ್ನು ಮುಟ್ಟಿದರೆ ಅವನನ್ನು ಕಲ್ಲುಗಳಿಂದಾಗಲಿ ಬಾಣಗಳಿಂದಾಗಲಿ ಕೊಲ್ಲಬೇಕು. ಯಾವ ಪ್ರಾಣಿಯಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕೊಲ್ಲಬೇಕು. ಯಾರೂ ಬೆಟ್ಟವನ್ನು ಮುಟ್ಟಕೂಡದು. ಕೊಂಬಿನ ತುತ್ತೂರಿ ಊದಿದಾಗ ಜನರು ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು” ಎಂದನು.