ವಿಮೋಚನಕಾಂಡ 30:10 - ಪರಿಶುದ್ದ ಬೈಬಲ್10 “ಆರೋನನು ವರ್ಷಕ್ಕೊಮ್ಮೆ ಯೆಹೋವನಿಗೆ ವಿಶೇಷ ಯಜ್ಞವನ್ನು ಸಮರ್ಪಿಸಬೇಕು. ಜನರ ಪಾಪಗಳ ಪ್ರಾಯಶ್ಚಿತ್ತಕ್ಕಾಗಿ ಆರೋನನು ದೋಷಪರಿಹಾರಕ ಯಜ್ಞದ ರಕ್ತವನ್ನು ಉಪಯೋಗಿಸುವನು. ಆರೋನನು ಇದನ್ನು ಈ ಯಜ್ಞವೇದಿಕೆಯ ಕೊಂಬುಗಳಲ್ಲಿ ಮಾಡುವನು. ಆ ದಿನವು ದೋಷಪರಿಹಾರಕ ದಿನವೆಂದು ಕರೆಯಲ್ಪಡುವುದು. ಯೆಹೋವನಿಗೆ ಇದು ಅತೀ ಪರಿಶುದ್ಧವಾದ ವಿಶೇಷ ದಿನವಾಗಿದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೊಮ್ಮೆ ಪಾಪಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಕೆಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಸರ್ವೇಶ್ವರನಾದ ನನಗೆ ಪರಮ ಪವಿತ್ರವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆರೋನನೂ ಅವನ ಸಂತತಿಯವರೂ ವರುಷಕ್ಕೊಮ್ಮೆ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷ ಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿಪರಿಶುದ್ಧವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೆ ಒಂದು ಸಾರಿ ಪಾಪ ಪರಿಹಾರದ ಬಲಿಯ ರಕ್ತದಿಂದ ಅದರ ಕೊಂಬುಗಳಿಗೆ ಹಚ್ಚಿ ಪ್ರಾಯಶ್ಚಿತ್ತ ಮಾಡಬೇಕು. ಅದು ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.” ಅಧ್ಯಾಯವನ್ನು ನೋಡಿ |
ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!
ಆದರೆ ಸರ್ವಾಂಗಹೋಮ ಅರ್ಪಿಸುವ ಯಜ್ಞವೇದಿಕೆಯ ಮೇಲೆ ಮತ್ತು ಧೂಪಾರ್ಪಣೆಯ ಯಜ್ಞವೇದಿಕೆಯ ಮೇಲೆ ಧೂಪವರ್ಪಿಸಲು ಆರೋನನ ಸಂತತಿಯವರನ್ನು ಮಾತ್ರ ಆರಿಸಿಕೊಳ್ಳಲಾಗಿತ್ತು. ದೇವರ ನಿವಾಸದ ಮಹಾಪವಿತ್ರ ಸ್ಥಳದಲ್ಲಿ ಆರೋನನ ಸಂತತಿಯವರೇ ಎಲ್ಲಾ ಕೆಲಸಕಾರ್ಯಗಳನ್ನು ಮಾಡುತ್ತಿದ್ದರು. ಅಲ್ಲದೆ ಇಸ್ರೇಲ್ ಜನರನ್ನು ಶುದ್ಧೀಕರಿಸಲು ಶುದ್ಧೀಕರಣ ಆಚಾರವನ್ನು ಅವರೇ ಮಾಡುತ್ತಿದ್ದರು. ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅವರು ಅನುಸರಿಸುತ್ತಿದ್ದರು.