Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:14 - ಪರಿಶುದ್ದ ಬೈಬಲ್‌

14 ಲೆಕ್ಕಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕೆ ಮೇಲ್ಪಟ್ಟವರೂ ಈ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಆ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಜನಗಣತಿಯಲ್ಲಿ ಸೇರಿಸಲಾದ ಇಪ್ಪತ್ತು ವರ್ಷದ ಹಾಗು ಅದಕ್ಕೂ ಹೆಚ್ಚು ವಯಸ್ಸಿನವರು ಈ ತೆರಿಗೆಯನ್ನು ನನಗೆ ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಲೆಕ್ಕಿಸಲ್ಪಟ್ಟವರಲ್ಲಿ ಸೇರಿದವರೊಳಗೆ ಇಪ್ಪತ್ತು ವರುಷದವರೂ ಅದಕ್ಕೆ ಹೆಚ್ಚಿನ ವಯಸ್ಸುಳ್ಳವರೂ ಆ ಕಪ್ಪವನ್ನು ಯೆಹೋವನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಲೆಕ್ಕಿತರಾದವರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕೂ ಹೆಚ್ಚು ಪ್ರಾಯವುಳ್ಳವರೂ ಯೆಹೋವ ದೇವರಿಗೆ ಕಾಣಿಕೆಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:14
10 ತಿಳಿವುಗಳ ಹೋಲಿಕೆ  

ಅವರು ಇಸ್ರೇಲನ ಚೊಚ್ಚಲ ಮಗನಾದ ರೂಬೇನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿ ಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಹೆಸರುಗಳನ್ನು ಪಟ್ಟಿಮಾಡಲಾಯಿತು.


‘ಈಜಿಪ್ಟಿನಿಂದ ಬಂದ ಈ ಜನರಲ್ಲಿ ಮತ್ತು ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಹೆಚ್ಚು ವಯಸ್ಸಾದ ನಿಮ್ಮವರೆಲ್ಲಾ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಯಾರೂ ನನ್ನನ್ನು ನಿಜವಾಗಿಯೂ ಅನುಸರಿಸದೆ ಹೋದದ್ದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಅವರಿಬ್ಬರೇ ಹೊರತು ಬೇರೆ ಯಾರೂ ನೋಡುವುದೇ ಇಲ್ಲ’ ಎಂದು ಖಂಡಿತವಾಗಿ ಹೇಳಿದನು.


“ನೀವು ಇಸ್ರೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸುಳ್ಳವರನ್ನು ಮತ್ತು ಇಸ್ರೇಲ್ ಸೈನ್ಯದಲ್ಲಿ ಸೇವೆಮಾಡಲು ಶಕ್ತರಾಗಿರುವ ಗಂಡಸರನ್ನು ಕುಟುಂಬ ಕುಟುಂಬಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.


ನಿಮ್ಮ ಶವಗಳು ಈ ಮರುಭೂಮಿಯಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಮರುಭೂಮಿಯಲ್ಲೇ ಸಾಯುವರು.


ಎರಡನೆ ತಿಂಗಳಿನ ಮೊದಲನೆ ದಿನದಲ್ಲಿ ಎಲ್ಲಾ ಜನರು ಒಟ್ಟಾಗಿ ಸೇರಿಬಂದರು. ಜನರು ತಮ್ಮತಮ್ಮ ಕುಟುಂಬಗಳಿಗನುಸಾರವಾಗಿ, ಗೋತ್ರಗಳಿಗನುಸಾರವಾಗಿ ಪಟ್ಟಿ ಮಾಡಿಸಿದರು. ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು.


ನೀನೂ ಆರೋನನೂ ಇಸ್ರೇಲರಲ್ಲಿ ಎಲ್ಲಾ ಪುರುಷರನ್ನು ಲೆಕ್ಕಿಸಬೇಕು. ಇಸ್ರೇಲ್ ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸುಳ್ಳ ಪುರುಷರನ್ನು ಲೆಕ್ಕಿಸು. ಅವರನ್ನು ಅವರವರ ವಿಭಾಗಗಳಿಗೆ ಅನುಸಾರವಾಗಿ ಪಟ್ಟಿಮಾಡು.


ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ಅಧಿಕೃತ ಅಳತೆಗನುಸಾರವಾಗಿರುವ ಅರ್ಧಶೆಕೆಲ್ ಕಪ್ಪಕಾಣಿಕೆಯನ್ನು ಕೊಡಬೇಕು. ಈ ಅರ್ಧಶೆಕೆಲ್ ಯೆಹೋವನಿಗೆ ಕಾಣಿಕೆಯಾಗಿರುತ್ತದೆ.


ಐಶ್ವರ್ಯವಂತರು ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು; ಬಡವರು ಅರ್ಧಶೆಕೆಲಿಗಿಂತ ಕಡಿಮೆ ಕೊಡಬಾರದು. ಜನರೆಲ್ಲರೂ ಈ ಕಾಣಿಕೆಯನ್ನು ಯೆಹೋವನಿಗೆ ಅರ್ಪಿಸಬೇಕು. ಇದು ನಿಮ್ಮ ಪ್ರಾಣರಕ್ಷಣೆಯ ತೆರಿಗೆಯಾಗಿದೆ.


“ಇಸ್ರೇಲಿನಲ್ಲಿರುವ ಪ್ರತಿಯೊಬ್ಬನು ಈ ಕಾಣಿಕೆಯನ್ನು ಇಸ್ರೇಲಿನ ಅಧಿಪತಿಗೆ ಕೊಡಬೇಕು.


ಒಂದು ಶೆಕೆಲ್ ಇಪ್ಪತ್ತು ಗೆರಾ ಇರಬೇಕು. ಒಂದು ಮಿನವು ಅರವತ್ತು ಶೆಕೆಲ್‌ನಷ್ಟು ಇರಬೇಕು. ಅದು ಇಪ್ಪತ್ತು ಶೆಕೆಲ್ ಮತ್ತು ಇಪ್ಪತ್ತೈದು ಶೆಕೆಲ್ ಮತ್ತು ಹದಿನೈದು ಶೆಕೆಲ್‌ಗಳಿಗೆ ಸಮಾನವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು