ವಿಮೋಚನಕಾಂಡ 30:16 - ಪರಿಶುದ್ದ ಬೈಬಲ್16 ಇಸ್ರೇಲರಿಂದ ಈ ಹಣವನ್ನು ಒಟ್ಟುಗೂಡಿಸಬೇಕು. ದೇವದರ್ಶನಗುಡಾರದ ಸೇವೆಗಾಗಿ ಹಣವನ್ನು ಉಪಯೋಗಿಸಬೇಕು. ಯೆಹೋವನು ತನ್ನ ಜನರನ್ನು ಜ್ಞಾಪಿಸಿಕೊಳ್ಳುವುದಕ್ಕಾಗಿ ಈ ಕಪ್ಪವು ಒಂದು ಮಾರ್ಗವಾಗಿದೆ. ಅವರು ತಮ್ಮ ಪ್ರಾಣರಕ್ಷಣೆಗಾಗಿ ಹಣವನ್ನು ಕೊಡುತ್ತಿರುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಪ್ರಾಣರಕ್ಷಣೆಯ ಈ ಹಣವನ್ನು ನೀನು ಇಸ್ರಯೇಲರಿಂದ ಶೇಖರಿಸಿ ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸು. ಇಸ್ರಯೇಲರ ಪ್ರಾಣವನ್ನು ಉಳಿಸಬೇಕೆಂಬುದಾಗಿ ಈ ತೆರಿಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕಪಡಿಸುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀನು ಪ್ರಾಣರಕ್ಷಣೆಯ ಹಣವನ್ನು ಇಸ್ರಾಯೇಲ್ಯರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲ್ಯರ ಪ್ರಾಣಗಳನ್ನು ಉಳಿಸಬೇಕೆಂಬದಾಗಿ ಆ ಕಪ್ಪವು ಯೆಹೋವನ ಸನ್ನಿಧಿಯಲ್ಲಿ ಜ್ಞಾಪಕ ಕೊಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಕೆಲಸಕ್ಕಾಗಿ ಪ್ರತ್ಯೇಕಿಸಬೇಕು. ಇದೇ ಯೆಹೋವ ದೇವರ ಮುಂದೆ ಇಸ್ರಾಯೇಲರಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಯಶ್ಚಿತ್ತಕ್ಕಾಗಿಯೂ ಇರುವುದು,” ಎಂದರು. ಅಧ್ಯಾಯವನ್ನು ನೋಡಿ |