21 ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳುವುದರಿಂದ ಅವರು ಸಾಯುವುದಿಲ್ಲ. ಆರೋನನಿಗೂ ಅವನ ಸಂತತಿಯವರಿಗೂ ಇದು ಶಾಶ್ವತವಾದ ನಿಯಮ. ತಲೆಮಾರುಗಳವರೆಗೆ ಆರೋನನ ಸಂತತಿಯವರಿಗೆಲ್ಲಾ ಇದೇ ಕಟ್ಟಳೆಯಿರುವುದು.”
ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”
ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.
ಪ್ರತಿಸಾರಿ ದೇವದರ್ಶನಗುಡಾರಕ್ಕೆ ಪ್ರವೇಶಿಸುವಾಗ ಅಥವಾ ಯೆಹೋವನಿಗಾಗಿ ಸರ್ವಾಂಗಹೋಮಗಳನ್ನು ಅರ್ಪಿಸಲು ಯಜ್ಞವೇದಿಕೆಯ ಹತ್ತಿರಕ್ಕೆ ಬರುವಾಗ ಅವರು ನೀರಿನಿಂದ ತೊಳೆದುಕೊಳ್ಳಬೇಕು. ಆಗ ಅವರು ಸಾಯುವುದಿಲ್ಲ.