ವಿಮೋಚನಕಾಂಡ 30:3 - ಪರಿಶುದ್ದ ಬೈಬಲ್3 ಧೂಪವೇದಿಕೆಯ ಮೇಲ್ಭಾಗವನ್ನೂ ಎಲ್ಲಾ ಪಾರ್ಶ್ವಗಳನ್ನೂ ಅದರ ಕೊಂಬುಗಳನ್ನೂ ಶುದ್ಧಬಂಗಾರದ ತಗಡಿನಿಂದ ಹೊದಿಸಬೇಕು ಮತ್ತು ಸುತ್ತಲೂ ಚಿನ್ನದ ಕಟ್ಟನ್ನು ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅದರ ಮೇಲ್ಭಾಗಕ್ಕೆ, ನಾಲ್ಕು ಬದಿಗಳಿಗೆ ಹಾಗೂ ಕೊಂಬುಗಳಿಗೆ, ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಅರುಗನ್ನು (ಅಂಚು) ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅದರ ಮೇಲ್ಭಾಗಕ್ಕೂ, ನಾಲ್ಕು ಪಕ್ಕಗಳಿಗೂ ಹಾಗು ಕೊಂಬುಗಳಿಗೂ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲು ಚಿನ್ನದ ತೋರಣ ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅದರ ಮೇಲ್ಭಾಗಕ್ಕೂ ನಾಲ್ಕು ಪಕ್ಕಗಳಿಗೂ ಕೊಂಬುಗಳಿಗೂ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ, ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |
ದೇವಾಲಯಕ್ಕಾಗಿ ಅನೇಕ ವಸ್ತುಗಳನ್ನು ಬಂಗಾರದಿಂದ ಮಾಡಲು ಸೊಲೊಮೋನನು ಆಜ್ಞಾಪಿಸಿದನು. ದೇವಾಲಯಕ್ಕಾಗಿ ಸೊಲೊಮೋನನು ಬಂಗಾರದಿಂದ ಮಾಡಿಸಿದ ವಸ್ತುಗಳು ಹೀಗಿವೆ: ಬಂಗಾರದ ಯಜ್ಞವೇದಿಕೆ; ಬಂಗಾರದ ಮೇಜು (ದೇವರಿಗೆ ವಿಶೇಷ ರೊಟ್ಟಿಯನ್ನು ಈ ಮೇಜಿನ ಮೇಲೆ ಅರ್ಪಿಸುತ್ತಾರೆ); ಅಪ್ಪಟ ಬಂಗಾರದ ದೀಪಸ್ತಂಭಗಳು (ಮಹಾ ಪವಿತ್ರಸ್ಥಳದ ಎದುರಿನಲ್ಲಿ ದಕ್ಷಿಣದ ಕಡೆಗೆ ಐದು ಮತ್ತು ಉತ್ತರದ ಕಡೆಗೆ ಐದು.) ಬಂಗಾರದ ಹೂಗಳು, ಹಣತೆಗಳು ಮತ್ತು ಇಕ್ಕುಳಗಳು; ಅಪ್ಪಟ ಬಂಗಾರದ ಬಟ್ಟಲುಗಳು; ದೀಪಗಳನ್ನು ಪ್ರಕಾಶಮಾನವಾಗಿ ಮಾಡಲು ಉಪಯೋಗಿಸುವ ಉಪಕರಣಗಳು; ಚಿಕ್ಕ ಗಂಗಾಳಗಳು; ಚಪ್ಪಟೆಯಾದ ಲೋಹದಿಂದ ಮಾಡಿದ ಪಾತ್ರೆಗಳು; ಬೂದಿಯನ್ನು ತೆಗೆದುಕೊಂಡು ಹೋಗಲು ಶುದ್ಧಬಂಗಾರದ ಪಾತ್ರೆಗಳು; ದೇವಾಲಯದ ಪ್ರವೇಶದ್ವಾರದ ಬಾಗಿಲುಗಳು.