ವಿಮೋಚನಕಾಂಡ 30:31 - ಪರಿಶುದ್ದ ಬೈಬಲ್31 ಅಭಿಷೇಕತೈಲವು ಪವಿತ್ರವಾದದ್ದು. ಅದನ್ನು ಯಾವಾಗಲೂ ನನಗಾಗಿ ಮಾತ್ರವೇ ಉಪಯೋಗಿಸಬೇಕೆಂದು ಇಸ್ರೇಲರಿಗೆ ಹೇಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನೀನು ಇಸ್ರಾಯೇಲರಿಗೆ ಆಜ್ಞಾಪಿಸತಕ್ಕದ್ದೇನೆಂದರೆ, “ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಪರಿಶುದ್ಧ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನೀನು ಇಸ್ರಯೇಲರಿಗೆ, ‘ನೀವು ಮತ್ತು ನಿಮ್ಮ ಸಂತತಿಯವರು ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನೀನು ಇಸ್ರಾಯೇಲ್ಯರಿಗೆ ಆಜ್ಞಾಪಿಸತಕ್ಕದ್ದೇನಂದರೆ - ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಅಭಿಷೇಕತೈಲವೆಂದು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನೀನು ಇಸ್ರಾಯೇಲರಿಗೆ: ‘ತಲತಲಾಂತರಗಳಲ್ಲಿ ಇದು ನನಗೆ ಪರಿಶುದ್ಧವಾದ ಅಭಿಷೇಕ ಎಣ್ಣೆಯಾಗಿರಬೇಕು. ಅಧ್ಯಾಯವನ್ನು ನೋಡಿ |
“ಪ್ರಧಾನಯಾಜಕನು ಅವನ ಸಹೋದರರೊಳಗಿಂದ ಆರಿಸಲ್ಪಟ್ಟವನಾಗಿದ್ದಾನೆ. ಅಭಿಷೇಕತೈಲವು ಅವನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಈ ರೀತಿಯಾಗಿ ಅವನು ಪ್ರಧಾನಯಾಜಕನ ವಿಶೇಷ ಕೆಲಸಕ್ಕೆ ಆರಿಸಲ್ಪಟ್ಟಿದ್ದಾನೆ. ಅವನು ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳಲು ಆರಿಸಲ್ಪಟ್ಟಿದ್ದಾನೆ. ಆದ್ದರಿಂದ ಅವನು ಬಹಿರಂಗವಾಗಿ ದುಃಖ ಸೂಚಿಸುವ ಕಾರ್ಯಗಳನ್ನು ಮಾಡಬಾರದು. ಅವನು ತನ್ನ ಕೂದಲನ್ನು ಕೆದರಿಕೊಳ್ಳಬಾರದು. ಅವನು ತನ್ನ ಬಟ್ಟೆಗಳನ್ನು ಹರಿದುಕೊಳ್ಳಬಾರದು.
ತರುವಾಯ ಯಜ್ಞವೇದಿಕೆಯಿಂದ ಸ್ವಲ್ಪ ರಕ್ತವನ್ನು ತೆಗೆದುಕೊ. ಅದನ್ನು ವಿಶೇಷವಾದ ಅಭೀಷೇಕತೈಲದಲ್ಲಿ ಬೆರಸಿ ಆರೋನನ ಮೇಲೆಯೂ ಅವನ ಬಟ್ಟೆಗಳ ಮೇಲೆಯೂ ಚಿಮಿಕಿಸು. ಅವನ ಪುತ್ರರ ಮತ್ತು ಅವರ ಬಟ್ಟೆಗಳ ಮೇಲೆಯೂ ಚಿಮಿಕಿಸು. ಆಗ ಅವರು ಪರಿಶುದ್ಧಗೊಳ್ಳುವರು, ಅವರ ಬಟ್ಟೆಗಳೂ ಪರಿಶುದ್ಧಗೊಳ್ಳುವವು. ಆರೋನನು ಮತ್ತು ಅವನ ಪುತ್ರರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡುತ್ತಾರೆಂದು ಇದು ತೋರಿಸುವುದು.