ವಿಮೋಚನಕಾಂಡ 30:32 - ಪರಿಶುದ್ದ ಬೈಬಲ್32 ಯಾರೂ ಇದನ್ನು ಸಾಮಾನ್ಯವಾದ ಸುಗಂಧ ವಾಸನೆಯುಳ್ಳ ತೈಲವಾಗಿ ಉಪಯೋಗಿಸಬಾರದು. ಈ ವಿಶೇಷವಾದ ತೈಲವನ್ನು ಮಾಡುವ ರೀತಿಯಲ್ಲಿ ಸಾಮಾನ್ಯವಾದ ಸುಗಂಧತೈಲವನ್ನು ಮಾಡಬಾರದು. ಈ ತೈಲವು ಪವಿತ್ರವಾದದ್ದು. ಇದು ನಿಮಗೆ ಬಹಳ ವಿಶೇಷವಾದದ್ದಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಜನರು ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನದ ಮೇರೆಗೆ ಬೇರೆ ಕೆಲಸಕ್ಕಾಗಿ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು. ಇದು ಪರಿಶುದ್ಧವಾದದ್ದು ಎಂದು ನೀವು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನವನ್ನು ಅನುಸರಿಸಿ ಬೇರೆ ಕಾರ್ಯಕ್ಕಾಗಿ ತೈಲವನ್ನು ತಯಾರಿಸಲೇ ಕೂಡದು. ಇದು ದೇವರ ವಸ್ತು. ಇದು ಮೀಸಲೆಂದು ನೀವು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಮೈಗೆ ಹಚ್ಚಿಕೊಳ್ಳುವದಕ್ಕೆ ಇದನ್ನು ಉಪಯೋಗಿಸಬಾರದು. ಇದರಲ್ಲಿರುವ ಜೀನಸುಗಳ ಮೇರೆಗೆ ಬೇರೆ ಕೆಲಸಕ್ಕೆ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು; ಇದನ್ನು ಮೀಸಲೆಂದು ನೀವು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇದನ್ನು ಮನುಷ್ಯರ ಮೇಲೆ ಹೊಯ್ಯಬಾರದು. ಇದರ ಮಾದರಿಯಂತೆ ಅಥವಾ ಇದಕ್ಕೆ ಸಮಾನವಾದದ್ದನ್ನು ಮಾಡಬಾರದು. ಇದು ಪರಿಶುದ್ಧವಾದದ್ದು. ನೀವು ಸಹ ಇದನ್ನು ಪರಿಶುದ್ಧವೆಂದು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |
“ಪ್ರಧಾನಯಾಜಕನು ಅವನ ಸಹೋದರರೊಳಗಿಂದ ಆರಿಸಲ್ಪಟ್ಟವನಾಗಿದ್ದಾನೆ. ಅಭಿಷೇಕತೈಲವು ಅವನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಈ ರೀತಿಯಾಗಿ ಅವನು ಪ್ರಧಾನಯಾಜಕನ ವಿಶೇಷ ಕೆಲಸಕ್ಕೆ ಆರಿಸಲ್ಪಟ್ಟಿದ್ದಾನೆ. ಅವನು ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳಲು ಆರಿಸಲ್ಪಟ್ಟಿದ್ದಾನೆ. ಆದ್ದರಿಂದ ಅವನು ಬಹಿರಂಗವಾಗಿ ದುಃಖ ಸೂಚಿಸುವ ಕಾರ್ಯಗಳನ್ನು ಮಾಡಬಾರದು. ಅವನು ತನ್ನ ಕೂದಲನ್ನು ಕೆದರಿಕೊಳ್ಳಬಾರದು. ಅವನು ತನ್ನ ಬಟ್ಟೆಗಳನ್ನು ಹರಿದುಕೊಳ್ಳಬಾರದು.