Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:33 - ಪರಿಶುದ್ದ ಬೈಬಲ್‌

33 ಯಾವನಾದರೂ ಸುಗಂಧತೈಲವನ್ನು ಈ ಪವಿತ್ರತೈಲದಂತೆ ಮಾಡಿ ಯಾಜಕನಲ್ಲದ ಒಬ್ಬನಿಗೆ ಅದನ್ನು ಕೊಟ್ಟರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇದರಂತೆ ತೈಲವನ್ನು ಮಾಡುವವನು ಹಾಗು ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಇದರ ಹಾಗೆ ತೈಲ ಮಾಡುವವನೂ ಯಾಜಕನಲ್ಲದವನ ಮೇಲೆ ಇದನ್ನು ಹಚ್ಚುವವನನ್ನು ಸ್ವಜನರೊಳಗಿಂದ ತೆಗೆದುಹಾಕಬೇಕು,’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:33
27 ತಿಳಿವುಗಳ ಹೋಲಿಕೆ  

ಸುವಾಸನೆಗೋಸ್ಕರ ಒಬ್ಬನು ತನಗಾಗಿ ಸ್ವಲ್ಪ ಧೂಪವನ್ನು ಈ ರೀತಿಯಲ್ಲಿ ಮಾಡಿದರೆ ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು.


ಆದರೆ ಯಾವನಾದರೂ ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಸ್ಕಹಬ್ಬವನ್ನು ಆಚರಿಸದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ಅವನು ಯೆಹೋವನಿಂದ ನೇಮಕವಾದ ಯಜ್ಞವನ್ನು ಸರಿಯಾದ ಕಾಲದಲ್ಲಿ ಸಮರ್ಪಿಸದೆ ಹೋದದ್ದರಿಂದ ಅವನು ದೋಷಿಯಾಗಿದ್ದಾನೆ ಮತ್ತು ಅವನಿಗೆ ಶಿಕ್ಷೆಯಾಗಬೇಕು.


“ಈ ದಿನದಲ್ಲಿ ಯಾವನಾದರೂ ಉಪವಾಸ ಮಾಡದಿದ್ದರೆ ಅವನನ್ನು ಅವನ ಕುಲದಿಂದ ತೆಗೆದುಹಾಕಬೇಕು.


ಒಬ್ಬನು ಅದನ್ನು ಮೂರನೆಯ ದಿನದಲ್ಲಿ ತಿಂದರೆ ಅವನು ಪಾಪಮಾಡಿದ ದೋಷಿಯಾಗಿರುವನು. ಯಾಕೆಂದರೆ ಯೆಹೋವನಿಗೆ ಮೀಸಲಾದ ಪವಿತ್ರ ವಸ್ತುಗಳ ವಿಷಯದಲ್ಲಿ ಅವನಿಗೆ ಗೌರವವಿಲ್ಲ; ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು.


ಅವನು ತನ್ನ ಬಲಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತೆಗೆದುಕೊಂಡು ಬಂದು ಯೆಹೋವನಿಗೆ ಅರ್ಪಿಸಬೇಕು. ಇಲ್ಲವಾದರೆ ಅವನನ್ನು ಅವನ ಕುಲದಿಂದ ತೆಗೆದುಹಾಕಬೇಕು.


ಅವನು ಆ ಪ್ರಾಣಿಯನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಅವನು ಆ ಪಶುವಿನ ಒಂದು ಭಾಗವನ್ನು ಯೆಹೋವನಿಗೆ ಕಾಣಿಕೆಯಾಗಿ ಕೊಡಬೇಕು. ಅವನು ರಕ್ತವನ್ನು ಸುರಿಸಿದ್ದರಿಂದ ತನ್ನ ಕಾಣಿಕೆಯನ್ನು ಯೆಹೋವನ ಪವಿತ್ರ ಗುಡಾರದೊಳಗೆ ತೆಗೆದುಕೊಂಡು ಹೋಗಬೇಕು. ಅವನು ಪ್ರಾಣಿಯ ಒಂದು ಭಾಗವನ್ನು ಯೆಹೋವನಿಗೆ ಉಡುಗೊರೆಯಾಗಿ ತೆಗೆದುಕೊಂಡು ಹೋಗದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು.


ಅವರು ಯಾಜಕರಾಗಿ ಮಾಡಲ್ಪಟ್ಟಾಗ ಅವರ ಪಾಪನಿವಾರಣೆಗಾಗಿ ಇವುಗಳನ್ನು ಸಮರ್ಪಿಸಲಾಗಿತ್ತು. ಆದ್ದರಿಂದ ಆ ಸಮರ್ಪಣೆಗಳನ್ನು ಅವರು ಮಾತ್ರ ತಿನ್ನಬೇಕೇ ಹೊರತು ಬೇರೆಯವರು ತಿನ್ನಬಾರದು; ಯಾಕೆಂದರೆ ಅವು ಪರಿಶುದ್ಧವಾಗಿವೆ ಮತ್ತು ಪ್ರತ್ಯೇಕಿಸಲ್ಪಟ್ಟವುಗಳಾಗಿವೆ.


ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಯಾವ ಹುಳಿಯೂ ಇರಬಾರದು. ಯಾವ ಇಸ್ರೇಲಿಯಾದರೂ ಯಾವ ವಿದೇಶಿಯನಾದರೂ ಈ ಹಬ್ಬದಲ್ಲಿ ಹುಳಿಯನ್ನು ತಿಂದರೆ, ಅವನನ್ನು ಇಸ್ರೇಲರ ಸಮುದಾಯದಿಂದ ಬಹಿಷ್ಕರಿಸಬೇಕು.


ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ, ಗಂಧದ ಚೆಕ್ಕೆ ಎಂಬ ಸುಗಂಧ ದ್ರವ್ಯಗಳನ್ನು ಸಮವಾಗಿ ತೆಗೆದುಕೊ.


“‘ಸಬ್ಬತ್ ದಿನವನ್ನು ವಿಶೇಷ ದಿನವೆಂದು ಪರಿಗಣಿಸಿ ಆಚರಿಸಿರಿ. ಆ ದಿನವನ್ನು ಬೇರೆ ದಿನದಂತೆ ಪರಿಗಣಿಸಿ ನಡೆಯುವವನಿಗೆ ಮರಣದಂಡನೆಯಾಗಬೇಕು. ಸಬ್ಬತ್ ದಿನದಲ್ಲಿ ಯಾವನಾದರೂ ಕೆಲಸಮಾಡಿದರೆ ಅವನನ್ನು ಬಹಿಷ್ಕರಿಸಬೇಕು.


“ರಕ್ತವನ್ನು ತಿನ್ನುವ ಪ್ರತಿಯೊಬ್ಬನಿಗೂ ನಾನು ವಿರುದ್ಧವಾಗಿರುವೆನು. ಅವನು ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಇಸ್ರೇಲನಾಗಲಿ ಪರದೇಶಸ್ಥನಾಗಲಿ ಆಗಿರಬಹುದು. ನಾನು ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕುವೆನು.


ನೀವು ಇದನ್ನು ಯಾಕೆ ಮಾಡಬೇಕೆಂದರೆ, ಮಾಂಸದಲ್ಲಿ ರಕ್ತವು ಇನ್ನೂ ಇದ್ದರೆ, ಅದರ ಪ್ರಾಣವು ಇನ್ನೂ ಮಾಂಸದಲ್ಲಿ ಇದೆ. ಆದ್ದರಿಂದ ನಾನು ಇಸ್ರೇಲರಿಗೆ ಈ ಅಪ್ಪಣೆಯನ್ನು ಕೊಡುತ್ತೇನೆ. ರಕ್ತದಿಂದ ಕೂಡಿರುವ ಮಾಂಸವನ್ನು ತಿನ್ನಬಾರದು. ಯಾವನಾದರೂ ರಕ್ತ ಭೋಜನ ಮಾಡಿದರೆ, ಅವನು ತನ್ನ ಜನರಿಂದ ತೆಗೆದುಹಾಕಲ್ಪಡಬೇಕು.


ಯಾವನಾದರೂ ಆ ಭಯಂಕರ ಪಾಪಗಳಲ್ಲಿ ಯಾವುದನ್ನಾದರೂ ಮಾಡಿದರೆ, ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು.


ನಾನು ಅವನಿಗೆ ವಿರುದ್ಧವಾಗಿರುವೆನು. ನಾನು ಅವನನ್ನು ಅವನ ಕುಟುಂಬದಿಂದ ಬೇರ್ಪಡಿಸುವೆನು. ಯಾಕೆಂದರೆ ಅವನು ತನ್ನ ಮಕ್ಕಳನ್ನು ಮೊಲೆಕನಿಗೆ ಅರ್ಪಿಸುವುದರ ಮೂಲಕ ನನ್ನ ಪವಿತ್ರಾಲಯವನ್ನು ಅಪವಿತ್ರಗೊಳಿಸಿದನು; ನನ್ನ ನಾಮಕ್ಕೆ ಅವಮಾನ ಮಾಡಿದನು.


“ಒಬ್ಬನು ತನ್ನ ಸಹೋದರಿಯನ್ನಾಗಲಿ ತನ್ನ ತಂದೆಯ ಅಥವಾ ತಾಯಿಯ ಮಗಳನ್ನಾಗಲಿ ಮದುವೆಯಾಗಿ ಲೈಂಗಿಕ ಸಂಬಂಧ ಬೆಳೆಸಿದರೆ, ಅದು ಅವಮಾನಕರವಾದ ಕಾರ್ಯವಾಗಿದೆ! ಅವರಿಗೆ ಬಹಿರಂಗವಾಗಿ ಶಿಕ್ಷೆಯಾಗಬೇಕು. ಅವರನ್ನು ಅವರ ಕುಲದಿಂದ ತೆಗೆದುಹಾಕಬೇಕು. ತನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಿದ ಪುರುಷನಿಗೆ ಅವನು ಮಾಡಿದ ಪಾಪಕ್ಕಾಗಿ ಶಿಕ್ಷೆಯಾಗಬೇಕು.


“ಒಬ್ಬನು ಸ್ತ್ರೀಯನ್ನು ಅವಳ ತಿಂಗಳ ಮುಟ್ಟಿನ ಸಮಯದಲ್ಲಿ ಸಂಭೋಗ ಮಾಡಿದರೆ, ಅವರಿಬ್ಬರನ್ನೂ ಕುಲದಿಂದ ತೆಗೆದುಹಾಕಬೇಕು. ಯಾಕೆಂದರೆ ಅವನು ಅವಳ ಶೋಣಿತಸ್ಥಾನವನ್ನು ಬಯಲುಪಡಿಸಿದನು; ಅವಳು ಬಯಲುಪಡಿಸಿಕೊಂಡಳು.


ನಿಮ್ಮ ಸಂತತಿಯವರೆಲ್ಲರಲ್ಲಿ ಯಾವನಾದರೂ ಅಪವಿತ್ರನಾಗಿರುವಾಗ ಅವುಗಳನ್ನು ಮುಟ್ಟಿದರೆ, ಅವನನ್ನು ನನ್ನ ಸನ್ನಿಧಿ ಸೇವೆಯಿಂದ ತೆಗೆದುಹಾಕಬೇಕು! ಇಸ್ರೇಲರು ಅವುಗಳನ್ನು ನನಗೆ ಕೊಟ್ಟಿದ್ದಾರೆ. ನಾನೇ ಯೆಹೋವನು!


“ಕೆಹಾತ್ಯರು ಲೇವಿಯರ ಮಧ್ಯದಿಂದ ಇಲ್ಲವಾಗದಂತೆ ಎಚ್ಚರಿಕೆಯಾಗಿರಿ.


“ಆದರೆ ಉದ್ದೇಶಪೂರ್ವಕವಾಗಿ ಪಾಪಮಾಡುವವನು ಯೆಹೋವನಿಗೆ ಅವಮಾನ ಮಾಡುವವನಾಗಿದ್ದಾನೆ. ಅವನನ್ನು ಕುಲದಿಂದ ಬಹಿಷ್ಕರಿಸಬೇಕು. ಈ ನಿಯಮವು ಇಸ್ರೇಲರಲ್ಲಿ ಹುಟ್ಟಿದ ಪ್ರತಿಯೊಬ್ಬನಿಗೂ ಹಾಗೂ ಪರದೇಶಸ್ಥರಿಗೂ ಅನ್ವಯಿಸುವುದು.


ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದ್ದರಿಂದ ಕುಲದಿಂದ ತೆಗೆದುಹಾಕಲ್ಪಡಲೇಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.”


ಒಬ್ಬನು ಮನುಷ್ಯನ ಶವವನ್ನು ಮುಟ್ಟಿ ತನ್ನನ್ನು ಶುದ್ಧೀಕರಿಸಿಕೊಳ್ಳದೆ ಹೋದರೆ ಅವನು ಯೆಹೋವನ ಪವಿತ್ರ ಗುಡಾರವನ್ನು ಅಶುದ್ಧಮಾಡುತ್ತಾನೆ. ಆದ್ದರಿಂದ ಆ ವ್ಯಕ್ತಿಯನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣದ ವಿಶೇಷ ನೀರು ಅವನ ಮೇಲೆ ಚಿಮಿಕಿಸಲ್ಪಡದ ಕಾರಣ ಅವನು ಅಶುದ್ಧನಾಗಿಯೇ ಇರುವನು. ಅವನ ಅಶುದ್ಧತ್ವ ಅವನಲ್ಲಿ ನೆಲೆಸುವುದು. ಅವನು ಅಶುದ್ಧನಾಗಿಯೇ ಇರುವನು.


“ಅಶುದ್ಧನಾಗಿದ್ದರೂ ತನ್ನನ್ನು ಶುದ್ಧಮಾಡಿಕೊಳ್ಳದವನು ಯೆಹೋವನ ಗುಡಾರವನ್ನು ಅಶುದ್ಧಮಾಡಿದವನಾಗಿರುತ್ತಾನೆ. ಆದ್ದರಿಂದ ಅವನನ್ನು ಇಸ್ರೇಲರಿಂದ ಬಹಿಷ್ಕರಿಸಬೇಕು. ಶುದ್ಧಪಡಿಸಿಕೊಳ್ಳುವ ನೀರನ್ನು ಚಿಮಿಕಿಸಿಕೊಳ್ಳದೆ ಹೋದದರಿಂದ ಅವನು ಅಶುದ್ಧನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು