Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:5 - ಪರಿಶುದ್ದ ಬೈಬಲ್‌

5 ಕೋಲುಗಳನ್ನು ಜಾಲೀಮರದಿಂದ ಮಾಡಿಸು. ಚಿನ್ನದ ತಗಡಿನಿಂದ ಆ ಕೋಲುಗಳನ್ನು ಹೊದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಗುದಿಗೆಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಕೋಲುಗಳನ್ನು ಜಾಲಿ ಮರದಿಂದ ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:5
5 ತಿಳಿವುಗಳ ಹೋಲಿಕೆ  

ಆ ಬಳೆಗಳು ಅಡ್ಡಪಟ್ಟಿಗೆ ಜೋಡಿಸಿಕೊಂಡಿರಬೇಕು. ಮೇಜನ್ನು ಹೊತ್ತುಕೊಂಡು ಹೋಗುವುದಕ್ಕೆ ಉಪಯೋಗಿಸುವ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.


ಬಳಿಕ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ಕಂಬಗಳನ್ನು ಮಾಡಬೇಕು. ಈ ಕಂಬಗಳನ್ನು ಜಾಲೀಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.


ಕೆಂಪುಬಣ್ಣದ ಕುರಿದೊಗಲು, ಉತ್ತಮ ತೊಗಲುಗಳು, ಜಾಲೀಮರ,


ಧೂಪವೇದಿಕೆಯ ಎದುರುಬದುರಾಗಿರುವ ಎರಡು ಗೋಡೆಗಳಲ್ಲಿ ಕಟ್ಟಿನ ಕೆಳಗೆ ಎರಡು ಚಿನ್ನದ ಬಳೆಗಳನ್ನು ಮಾಡಿಸು. ಧೂಪವೇದಿಕೆಯನ್ನು ಹೊರುವ ಕೋಲುಗಳನ್ನು ಈ ಬಳೆಗಳು ಹಿಡಿದುಕೊಂಡಿರುತ್ತವೆ.


ವಿಶೇಷ ಪರದೆಯ (ಒಡಂಬಡಿಕೆಯ ಪೆಟ್ಟಿಗೆಯನ್ನು ಆವರಿಸಿಕೊಂಡಿರುವ) ಮುಂಭಾಗದಲ್ಲಿ ಧೂಪವೇದಿಕೆಯನ್ನು ಇಡು. ಧೂಪವೇದಿಕೆಯು ಒಡಂಬಡಿಕೆ ಪೆಟ್ಟಿಗೆಯ ಕೃಪಾಸನದ ಮುಂಭಾಗದಲ್ಲಿರುವುದು. ಇದು ನಾನು ನಿನ್ನನ್ನು ಸಂಧಿಸುವ ಸ್ಥಳವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು