Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:8 - ಪರಿಶುದ್ದ ಬೈಬಲ್‌

8 ತಿರುಗಿ ಸಾಯಂಕಾಲದಲ್ಲಿ ಧೂಪವನ್ನು ಉರಿಸಬೇಕು. ಇದು ಸಾಯಂಕಾಲಗಳಲ್ಲಿ ಅವನು ದೀಪಗಳನ್ನು ಹೊತ್ತಿಸುವ ಸಮಯವಾಗಿರುತ್ತದೆ. ಹೀಗೆ ಪ್ರತಿದಿನ ಯೆಹೋವನ ಮುಂದೆ ನಿತ್ಯವಾದ ಧೂಪಸಮರ್ಪಣೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹೀಗೆ ನಿಮ್ಮಿಂದ ಮತ್ತು ನಿಮ್ಮ ಸಂತತಿಯವರಿಂದ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಎಡೆಬಿಡದೆ ಧೂಪಾರ್ಪಣೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿತ್ಯವಾದ ಧೂಪ ಸಮರ್ಪಣೆಯು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆರೋನನು ಸಂಜೆ ದೀಪಗಳನ್ನು ಹಚ್ಚುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಯೆಹೋವ ದೇವರ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:8
12 ತಿಳಿವುಗಳ ಹೋಲಿಕೆ  

ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.


ಆದ್ದರಿಂದಲೇ ತನ್ನ ಮೂಲಕ ದೇವರ ಬಳಿಗೆ ಬರುವ ಜನರನ್ನು ಯೇಸು ಯಾವಾಗಲೂ ರಕ್ಷಿಸಬಲ್ಲನು. ಏಕೆಂದರೆ ಆತನು ಸದಾಕಾಲ ಜೀವಿಸುವವನಾಗಿದ್ದಾನೆ ಮತ್ತು ಜನರು ದೇವರ ಸನ್ನಿಧಿಗೆ ಬಂದಾಗ ಜನರಿಗೆ ಸಹಾಯ ಮಾಡಲು ಸಿದ್ಧನಾಗಿದ್ದಾನೆ.


ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ.


ಈ ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಆ ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಆ ಪಶುಗಳನ್ನು ಕೊಯ್ಯಬೇಕು.


ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.


“ಆರೋನನು ಪ್ರತಿಮುಂಜಾನೆ ಧೂಪವೇದಿಕೆಯ ಮೇಲೆ ಸುಗಂಧದ್ರವ್ಯಗಳ ಧೂಪವನ್ನು ಉರಿಸಬೇಕು. ಅವನು ದೀಪಗಳನ್ನು ಸರಿಪಡಿಸಲು ಬರುವಾಗ ಇದನ್ನು ಮಾಡುವನು.


ಈ ಧೂಪವೇದಿಕೆಯನ್ನು ಬೇರೆ ವಿಧದ ಧೂಪಸಮರ್ಪಣೆಗಾಗಲಿ ಸರ್ವಾಂಗಹೋಮವನ್ನು ಅರ್ಪಿಸುವುದಕ್ಕಾಗಲಿ ಯಾವುದೇ ಧಾನ್ಯಸಮರ್ಪಣೆಗಾಗಲಿ ಪಾನದ್ರವ್ಯಸಮರ್ಪಣೆಗಾಗಲಿ ಉಪಯೋಗಿಸಬಾರದು.


ಇಸ್ರೇಲಿನ ಎಲ್ಲಾ ಕುಲಗಳಲ್ಲಿ ನಿನ್ನ ಕುಟುಂಬದವರನ್ನು ನನ್ನ ಯಾಜಕರನ್ನಾಗಿ ಆರಿಸಿಕೊಂಡೆನು. ಏಫೋದನ್ನು ಧರಿಸಿಕೊಳ್ಳುವುದಕ್ಕೂ ಯಜ್ಞವನ್ನು ಅರ್ಪಿಸುವುದಕ್ಕೂ ಧೂಪಹಾಕುವುದಕ್ಕೂ ನಾನು ಅವರನ್ನು ಆರಿಸಿಕೊಂಡೆನು. ಇಸ್ರೇಲರು ನನಗೆ ಅರ್ಪಿಸುವ ಯಜ್ಞಗಳಲ್ಲಿ ಮಾಂಸವನ್ನು ಪಡೆಯುವ ಅವಕಾಶವನ್ನೂ ನಾನು ನಿಮ್ಮ ಕುಲದವರಿಗೆ ನೀಡಿದೆನು.


“ಉಜ್ಜೀಯನೇ, ಯೆಹೋವನಿಗೆ ಧೂಪ ಹಾಕುವದು ನಿನ್ನ ಕೆಲಸವಲ್ಲ. ನೀನು ಹೀಗೆ ಮಾಡುವದು ಸರಿಯಲ್ಲ. ಆರೋನನ ಸಂತತಿಯವರಾದ ಯಾಜಕರೇ ಧೂಪ ಹಾಕಬೇಕಾದದ್ದು. ಅವರು ಪವಿತ್ರ ಸೇವೆಗೆ ನೇಮಿಸಲ್ಪಟ್ಟಿದ್ದಾರೆ. ನೀನು ಈ ಮಹಾ ಪವಿತ್ರಸ್ಥಾನದಿಂದ ಹೊರಗೆ ಹೋಗು. ನೀನು ದೇವರಾದ ಯೆಹೋವನಿಗೆ ವಿಧೇಯನಾಗಿಲ್ಲ. ಈ ಕಾರ್ಯವನ್ನು ಮಾಡಿದ್ದರಿಂದ ದೇವರು ನಿನ್ನನ್ನು ಮೆಚ್ಚುವದಿಲ್ಲ” ಎಂದು ಹೇಳಿದರು.


ನನ್ನ ಪ್ರಾರ್ಥನೆಯು ನಿನಗೆ ಧೂಪದಂತೆಯೂ ಸಾಯಂಕಾಲದ ಯಜ್ಞದಂತೆಯೂ ಸಮರ್ಪಕವಾಗಲಿ.


ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಈ ಹಣತೆಗಳು ದೀಪಸ್ತಂಭದ ಮುಂದಿರುವ ಪ್ರದೇಶಕ್ಕೆ ಬೆಳಕು ಕೊಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು