Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:9 - ಪರಿಶುದ್ದ ಬೈಬಲ್‌

9 ಈ ಧೂಪವೇದಿಕೆಯನ್ನು ಬೇರೆ ವಿಧದ ಧೂಪಸಮರ್ಪಣೆಗಾಗಲಿ ಸರ್ವಾಂಗಹೋಮವನ್ನು ಅರ್ಪಿಸುವುದಕ್ಕಾಗಲಿ ಯಾವುದೇ ಧಾನ್ಯಸಮರ್ಪಣೆಗಾಗಲಿ ಪಾನದ್ರವ್ಯಸಮರ್ಪಣೆಗಾಗಲಿ ಉಪಯೋಗಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ವೇದಿಕೆಯ ಮೇಲೆ ಬೇರೆ ಯಾವ ಅಪವಿತ್ರ ಧೂಪವನ್ನೂ ಹಾಕಕೂಡದು. ಅದರ ಮೇಲೆ ದಹನಬಲಿಯನ್ನಾಗಲಿ, ಅನ್ನಪಾನ ದ್ರವ್ಯಗಳನ್ನಾಗಲಿ ಅರ್ಪಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಕೂಡದು; ಅದರ ಮೇಲೆ ಹೋಮವನ್ನಾಗಲಿ ಧಾನ್ಯ ದ್ರವ್ಯವನ್ನಾಗಲಿ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ, ದಹನಬಲಿಗಳನ್ನಾಗಲಿ, ಧಾನ್ಯಗಳ ಅರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:9
3 ತಿಳಿವುಗಳ ಹೋಲಿಕೆ  

ತರುವಾಯ ಆರೋನನ ಪುತ್ರರಲ್ಲಿ ನಾದಾಬ ಮತ್ತು ಅಬೀಹು ಎಂಬಿಬ್ಬರು ಧೂಪ ಹಾಕಲು ಒಂದೊಂದು ಬಟ್ಟಲನ್ನು ತೆಗೆದುಕೊಂಡು ಅದರಲ್ಲಿ ಬೇರೆ ಬೆಂಕಿಯನ್ನಿಟ್ಟು ಯೆಹೋವನ ಮುಂದೆ ಧೂಪಹಾಕಿದರು. ಯೆಹೋವನ ಆಜ್ಞೆಗನುಸಾರವಾದ ಬೆಂಕಿಯನ್ನು ಅವರು ಉಪಯೋಗಿಸಲಿಲ್ಲ.


ತಿರುಗಿ ಸಾಯಂಕಾಲದಲ್ಲಿ ಧೂಪವನ್ನು ಉರಿಸಬೇಕು. ಇದು ಸಾಯಂಕಾಲಗಳಲ್ಲಿ ಅವನು ದೀಪಗಳನ್ನು ಹೊತ್ತಿಸುವ ಸಮಯವಾಗಿರುತ್ತದೆ. ಹೀಗೆ ಪ್ರತಿದಿನ ಯೆಹೋವನ ಮುಂದೆ ನಿತ್ಯವಾದ ಧೂಪಸಮರ್ಪಣೆ ಇರುವುದು.


“ಆರೋನನು ವರ್ಷಕ್ಕೊಮ್ಮೆ ಯೆಹೋವನಿಗೆ ವಿಶೇಷ ಯಜ್ಞವನ್ನು ಸಮರ್ಪಿಸಬೇಕು. ಜನರ ಪಾಪಗಳ ಪ್ರಾಯಶ್ಚಿತ್ತಕ್ಕಾಗಿ ಆರೋನನು ದೋಷಪರಿಹಾರಕ ಯಜ್ಞದ ರಕ್ತವನ್ನು ಉಪಯೋಗಿಸುವನು. ಆರೋನನು ಇದನ್ನು ಈ ಯಜ್ಞವೇದಿಕೆಯ ಕೊಂಬುಗಳಲ್ಲಿ ಮಾಡುವನು. ಆ ದಿನವು ದೋಷಪರಿಹಾರಕ ದಿನವೆಂದು ಕರೆಯಲ್ಪಡುವುದು. ಯೆಹೋವನಿಗೆ ಇದು ಅತೀ ಪರಿಶುದ್ಧವಾದ ವಿಶೇಷ ದಿನವಾಗಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು