ವಿಮೋಚನಕಾಂಡ 31:12 - ಪರಿಶುದ್ದ ಬೈಬಲ್12 ತರುವಾಯ ಯೆಹೋವನು ಮೋಶೆಗೆ ಹೀಗೆಂದನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ಮತ್ತೆ ಮೋಶೆಗೆ ಹೀಗೆಂದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12-13 ಮೋಶೆ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಇತ್ತ ಆಜ್ಞೆ: “ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಇರುವ ಗುರುತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12-13 ಯೆಹೋವನು ಮೋಶೆಗೆ ಹೀಗಂದನು - ನೀನು ಇಸ್ರಾಯೇಲ್ಯರಿಗೆ ಆಜ್ಞಾಪಿಸಬೇಕಾದದ್ದೇನಂದರೆ - ನಾನು ನೇವಿುಸಿರುವ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ದೇವಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ನೀವು ತಿಳುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಇರುವ ಗುರುತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, ಅಧ್ಯಾಯವನ್ನು ನೋಡಿ |
ಆ ದಿವಸಗಳಲ್ಲಿ ಯೆಹೂದದ ಜನರು ಸಬ್ಬತ್ ದಿನದಲ್ಲಿ ಕೆಲಸ ಮಾಡುವುದನ್ನು ನೋಡಿದೆನು. ಅವರು ದ್ರಾಕ್ಷಿಯನ್ನು ತುಳಿದು ದ್ರಾಕ್ಷಾರಸ ತಯಾರಿಸುತ್ತಿದ್ದರು. ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಹೋಗುತ್ತಿದ್ದರು. ಬೆಳೆಯನ್ನು ಮಾರಲು ಜೆರುಸಲೇಮಿಗೆ ಬರುತ್ತಿದ್ದರು. ನಾನು ಅವರನ್ನು ಕಟುವಾಗಿ ಎಚ್ಚರಿಸಿ ಇನ್ನು ಮುಂದೆ ಸಬ್ಬತ್ ದಿನದಲ್ಲಿ ಪಟ್ಟಣದೊಳಗೆ ಏನನ್ನೂ ತರಬಾರದೆಂದು ಆಜ್ಞಾಪಿಸಿದೆನು.