ವಿಮೋಚನಕಾಂಡ 31:13 - ಪರಿಶುದ್ದ ಬೈಬಲ್13 “ಇದನ್ನು ಇಸ್ರೇಲರಿಗೆ ಹೇಳು: ‘ನೀವು ನನ್ನ ವಿಶೇಷವಾದ ಸಬ್ಬತ್ ದಿನವನ್ನು ಖಂಡಿತವಾಗಿ ಆಚರಿಸಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿರುವುದಕ್ಕೆ ಇದು ಗುರುತಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ: ನಾನು ನೇಮಿಸಿದ ಪವಿತ್ರ ಸಬ್ಬತ್ ದಿನಗಳನ್ನು ನೀವು ತಪ್ಪದೇ ಆಚರಿಸಬೇಕು. ನಿಮ್ಮನ್ನು ಶುದ್ಧಿಪಡಿಸುವ ಯೆಹೋವನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರ ಮಧ್ಯ ಇರುವ ಗುರುತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ನೀನು ಇಸ್ರಾಯೇಲರೊಂದಿಗೆ ಮಾತನಾಡಿ, ‘ನಿಶ್ಚಯವಾಗಿ ನೀವು ನನ್ನ ವಿಶ್ರಾಂತಿಯ ದಿನವನ್ನು ಕೈಗೊಳ್ಳಬೇಕು. ಏಕೆಂದರೆ ನಿಮ್ಮನ್ನು ಪರಿಶುದ್ಧ ಮಾಡುವ ಯೆಹೋವ ದೇವರು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ, ನಿಮಗೂ, ನಿಮ್ಮ ಸಂತತಿಯವರಿಗೂ ಗುರುತಾಗಿರುವುದು. ಅಧ್ಯಾಯವನ್ನು ನೋಡಿ |