Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:14 - ಪರಿಶುದ್ದ ಬೈಬಲ್‌

14 “‘ಸಬ್ಬತ್ ದಿನವನ್ನು ವಿಶೇಷ ದಿನವೆಂದು ಪರಿಗಣಿಸಿ ಆಚರಿಸಿರಿ. ಆ ದಿನವನ್ನು ಬೇರೆ ದಿನದಂತೆ ಪರಿಗಣಿಸಿ ನಡೆಯುವವನಿಗೆ ಮರಣದಂಡನೆಯಾಗಬೇಕು. ಸಬ್ಬತ್ ದಿನದಲ್ಲಿ ಯಾವನಾದರೂ ಕೆಲಸಮಾಡಿದರೆ ಅವನನ್ನು ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪವಿತ್ರವೆಂದು ವರ್ತಿಸುವವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ದುಡಿಯುವವನನ್ನು ತನ್ನ ಕುಲದಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪರಿಶುದ್ಧವಾದದ್ದೆಂದು ಎಣಿಸಿ ನಡೆದವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಕೆಲಸವೇನಾದರೂ ಮಾಡುವವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ಹೀಗಿರುವುದರಿಂದ ನೀವು ಸಬ್ಬತ್ ದಿನವನ್ನು ಕೈಗೊಳ್ಳಬೇಕು. ಏಕೆಂದರೆ ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರ ಮಾಡುವ ಪ್ರತಿಯೊಬ್ಬನು ಸಾಯಲೇಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ, ಅವರನ್ನು ನಿಮ್ಮ ಜನರೊಳಗಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:14
17 ತಿಳಿವುಗಳ ಹೋಲಿಕೆ  

ವ್ಯಾಜ್ಯಗಳಿಗೆ ತೀರ್ಪು ನೀಡುವ ನ್ಯಾಯಾಧಿಶರಾಗಿ ಯಾಜಕರು ಸೇವೆಮಾಡಬೇಕು ಮತ್ತು ನನ್ನ ಆಡಳಿತವನ್ನು ಆಧರಿಸಿ ಅವರು ತೀರ್ಪು ನೀಡಬೇಕು. ಅವರು ವಿಶೇಷವಾದ ಕೂಟಗಳನ್ನು ಏರ್ಪಡಿಸುವಾಗ ನನ್ನ ವಿಧಿನಿಯಮಗಳನ್ನು ಅನುಸರಿಸುವರು ಮತ್ತು ವಿಶೇಷವಾದ ಎಲ್ಲಾ ರಜಾದಿನಗಳನ್ನು ಮತ್ತು ಸಬ್ಬತ್ ದಿನಗಳನ್ನು ಅವರು ಗೌರವಿಸುವರು.


“‘ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ಅಲಕ್ಷ್ಯಮಾಡಿದರು. ಮತ್ತು ಅವರ ಪೂರ್ವಿಕರ ಹೊಲಸು ವಿಗ್ರಹಗಳನ್ನು ಪೂಜಿಸಿದರು.


“‘ಆದರೆ ಅವರ ಮಕ್ಕಳು ನನಗೆ ವಿರುದ್ಧವಾಗಿ ದಂಗೆ ಎದ್ದರು. ಅವರು ನನ್ನ ಕಟ್ಟಳೆಗಳನ್ನು ಅನುಸರಿಸಲಿಲ್ಲ. ಅವರು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಾನು ಹೇಳಿದ್ದನ್ನು ಅವರು ಮಾಡಲಿಲ್ಲ. ಅವು ಒಳ್ಳೆಯ ಕಟ್ಟಳೆಗಳಾಗಿದ್ದವು. ಅವುಗಳಿಗೆ ವಿಧೇಯರಾಗುವವರು ಜೀವಿಸುವರು. ಅವರು ನನ್ನ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಆದ್ದರಿಂದ ಮರುಭೂಮಿಯಲ್ಲಿ ಅವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ನಿರ್ಧರಿಸಿದೆನು. ನನ್ನ ಕೋಪದ ತೀಕ್ಷ್ಣತೆಯನ್ನು ಅವರು ತಿಳಿದುಕೊಳ್ಳಬೇಕೆಂದು ತೀರ್ಮಾನಿಸಿದೆನು.


“‘ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನನ್ನ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಅವರ ಮನಸ್ಸು ಆ ಹೊಲಸು ದೇವರುಗಳ ಮೇಲೆ ನೆಟ್ಟಿದ್ದರಿಂದ ಅವರು ಹಾಗೆಲ್ಲಾ ಮಾಡಿದರು.


ಅವರಿಗೆ ನಿನ್ನ ವಿಶೇಷ ದಿನವಾದ ಸಬ್ಬತ್ತನ್ನು ತಿಳಿಸಿದೆ. ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಕಟ್ಟಳೆಗಳನ್ನು ತಿಳಿಸಿದೆ.


“ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಅದನ್ನು ಆಚರಿಸಿರಿ.


ಒಬ್ಬ ವ್ಯಕ್ತಿಯು ಮೋಶೆಯ ಕಟ್ಟಳೆಗೆ ವಿಧೇಯನಾಗುವುದಕ್ಕಾಗಿ ಸಬ್ಬತ್‌ದಿನದಂದು ಸುನ್ನತಿ ಮಾಡಬಹುದು ಎಂಬುದನ್ನು ಇದು ತೋರಿಸುತ್ತದೆ. ಹೀಗಿರುವಲ್ಲಿ, ಸಬ್ಬತ್‌ದಿನದಂದು ಒಬ್ಬನ ಇಡೀ ದೇಹವನ್ನು ಗುಣಪಡಿಸಿದ್ದಕ್ಕೋಸ್ಕರ ನೀವು ಏಕೆ ಕೋಪಗೊಂಡಿದ್ದೀರಿ?


ಕೆಲಸ ಮಾಡುವುದಕ್ಕೆ ವಾರದಲ್ಲಿ ಬೇರೆ ಆರು ದಿನಗಳಿವೆ. ಆದರೆ ಏಳನೆಯ ದಿನವು ವಿಶ್ರಾಂತಿಯ ಬಹು ವಿಶೇಷವಾದ ದಿನವಾಗಿದೆ. ಯೆಹೋವನನ್ನು ಸನ್ಮಾನಿಸಲು ಅದೊಂದು ವಿಶೇಷ ದಿನವಾಗಿದೆ. ಸಬ್ಬತ್ತಿನ ಸಮಯದಲ್ಲಿ ಕೆಲಸಮಾಡುವವನು ಕೊಲ್ಲಲ್ಪಡಬೇಕು.


“ಇದು ನಿಮಗೆ ಶಾಶ್ವತವಾದ ಕಟ್ಟಳೆ: ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನೀವು ಆಹಾರವನ್ನು ತೆಗೆದುಕೊಳ್ಳದೆ ಉಪವಾಸ ಮಾಡಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ದೇಶದಲ್ಲಿ ವಾಸಿಸುವ ಪ್ರವಾಸಿಗರಾಗಲಿ ಪರದೇಶಸ್ಥರಾಗಲಿ ಯಾವ ಕೆಲಸವನ್ನು ಮಾಡಬಾರದು.


ಯಾವನಾದರೂ ಸುಗಂಧತೈಲವನ್ನು ಈ ಪವಿತ್ರತೈಲದಂತೆ ಮಾಡಿ ಯಾಜಕನಲ್ಲದ ಒಬ್ಬನಿಗೆ ಅದನ್ನು ಕೊಟ್ಟರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


ಸುವಾಸನೆಗೋಸ್ಕರ ಒಬ್ಬನು ತನಗಾಗಿ ಸ್ವಲ್ಪ ಧೂಪವನ್ನು ಈ ರೀತಿಯಲ್ಲಿ ಮಾಡಿದರೆ ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು