Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:2 - ಪರಿಶುದ್ದ ಬೈಬಲ್‌

2 “ನಾನು ಯೆಹೂದ ಕುಲದಿಂದ ಊರಿಯ ಮಗನಾದ ಬೆಚಲೇಲನನ್ನು ಆರಿಸಿಕೊಂಡಿದ್ದೇನೆ. ಊರಿಯು ಹೂರನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ವಿಚಿತ್ರವಾಗಿ ನಯವಾದ ಕೆಲಸಗಳನ್ನು ಕಲ್ಪಿಸುವದಕ್ಕೂ ಚಿನ್ನ ಬೆಳ್ಳಿ ತಾಮ್ರಗಳಿಂದ ಕೆಲಸ ನಡಿಸುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲಯೇಲ್ ಎಂಬವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:2
14 ತಿಳಿವುಗಳ ಹೋಲಿಕೆ  

“ಆದ್ದರಿಂದ ಬೆಚಲೇಲನೂ ಒಹೊಲೀಯಾಬನೂ ಮತ್ತು ಇತರ ಎಲ್ಲಾ ನಿಪುಣರೂ ಯೆಹೋವನು ಆಜ್ಞಾಪಿಸಿದ ಕೆಲಸವನ್ನು ಮಾಡಬೇಕು. ಈ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಅವಶ್ಯವಿರುವ ಎಲ್ಲಾ ಸೂಕ್ಷ್ಮವಾದ ಕೆಲಸವನ್ನು ಮಾಡುವುದಕ್ಕೆ ಯೆಹೋವನು ಈ ಜನರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಅನುಗ್ರಹಿಸಿದ್ದಾನೆ.”


ಬಳಿಕ ಮೋಶೆಯು ಇಸ್ರೇಲರಿಗೆ ಹೀಗೆಂದನು: “ನೋಡಿರಿ, ಯೆಹೋವನು ಯೆಹೂದ ಕುಲದಿಂದ ಊರಿಯ ಮಗನಾದ ಬೆಚಲೇಲನನ್ನು ಆರಿಸಿಕೊಂಡಿದ್ದಾನೆ. ಊರಿಯು ಹೂರನ ಮಗ.


ಯೋಹಾನನು, “ದೇವರು ಏನು ಕೊಡುತ್ತಾನೋ ಅದನ್ನು ಮಾತ್ರ ಒಬ್ಬನು ಪಡೆದುಕೊಳ್ಳಬಲ್ಲನು.


ಬೆಚಲೇಲನು ಜಾಲೀಮರದಿಂದ ಪವಿತ್ರ ಪೆಟ್ಟಿಗೆಯನ್ನು ಮಾಡಿದನು. ಪೆಟ್ಟಿಗೆಯು ಎರಡೂವರೆ ಮೊಳ ಉದ್ದ ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರವಿತ್ತು.


ಆಗ ಯೆಹೋವನು ಮೋಶೆಗೆ, “ನಿನ್ನ ಕೋರಿಕೆಯನ್ನು ಅನುಗ್ರಹಿಸುತ್ತೇನೆ. ನಾನು ನಿನ್ನನ್ನು ಮೆಚ್ಚಿಕೊಂಡದ್ದರಿಂದಲೇ ಇದನ್ನು ಮಾಡುತ್ತೇನೆ. ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು” ಅಂದನು.


ಮೋಶೆಯು ಯೆಹೋವನಿಗೆ, “ಈ ಜನರನ್ನು ಮುನ್ನಡೆಸಬೇಕೆಂದು ನೀನು ನನಗೆ ಹೇಳಿರುವೆ. ಆದರೆ ನನ್ನೊಂದಿಗೆ ಯಾರನ್ನು ಕಳುಹಿಸುತ್ತೀಯೆಂದು ನೀನು ಹೇಳಲಿಲ್ಲ. ನೀನು ನನಗೆ, ‘ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಾನು ನಿನ್ನನ್ನು ಮೆಚ್ಚಿದ್ದೇನೆ’ ಎಂದು ಹೇಳಿದೆ.


ಯೆಹೋಶುವನು ಮೋಶೆಯ ಮಾತಿಗೆ ವಿಧೇಯನಾಗಿ ಮರುದಿನ ಅಮಾಲೇಕ್ಯರೊಡನೆ ಯುದ್ಧಮಾಡಲು ಹೋದನು. ಅದೇ ಸಮಯದಲ್ಲಿ ಮೋಶೆಯೂ ಆರೋನನೂ ಹೂರನೂ ಬೆಟ್ಟದ ತುದಿಗೆ ಹೋದರು.


ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರತಿಯೊಂದನ್ನೂ ಯೆಹೂದಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನು ಮಾಡಿದನು.


ಊರೀಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿದ ತಾಮ್ರದ ಯಜ್ಞವೇದಿಕೆಯು ಗಿಬ್ಯೋನಿನಲ್ಲಿದ್ದ ಪವಿತ್ರ ಗುಡಾರದ ಮುಂದೆ ಇಡಲ್ಪಟ್ಟಿತ್ತು. ಆದ್ದರಿಂದ ಸೊಲೊಮೋನನೂ ಇಸ್ರೇಲರೂ ಗಿಬ್ಯೋನಿಗೆ ಹೋದರು.


ದಾನ್‌ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನು ಅವನಿಗೆ ಸಹಾಯ ಮಾಡಿದನು. ಒಹೊಲೀಯಾಬನು ನಿಪುಣನಾದ ಕೆಲಸಗಾರನೂ ನಕಾಸಿ ಕೆಲಸ ಮಾಡುವವನೂ ಆಗಿದ್ದನು. ಅವನು ಶ್ರೇಷ್ಠ ನಾರುಬಟ್ಟೆಯಲ್ಲಿ ನೀಲಿ, ನೇರಳೆ, ಕೆಂಪುದಾರಗಳಿಂದ ಬುಟೇದಾರೀ ಕೆಲಸ ಮಾಡಲು ನಿಪುಣನಾಗಿದ್ದನು.


ಹೀರಾಮನ ತಾಯಿಯು ನಫ್ತಾಲಿ ಕುಲದವಳಾಗಿದ್ದಳು ಮತ್ತು ಇಸ್ರೇಲಿನವಳಾಗಿದ್ದಳು. ಅವನ ದಿವಂಗತ ತಂದೆಯು ತೂರಿನವನಾಗಿದ್ದನು. ಹೀರಾಮನು ಹಿತ್ತಾಳೆಯಿಂದ ವಸ್ತುಗಳನ್ನು ತಯಾರಿಸುತ್ತಿದ್ದನು. ಅವನು ಕುಶಲಕರ್ಮಿಯೂ ಅನುಭವಿಯೂ ಆದ ಕೆಲಸಗಾರನಾಗಿದ್ದನು. ರಾಜನಾದ ಸೊಲೊಮೋನನು ಹೀರಾಮನಿಗೆ ಬರಲು ಹೇಳಿದಾಗ, ಅವನು ಒಪ್ಪಿಕೊಂಡನು. ರಾಜನಾದ ಸೊಲೊಮೋನನು ಎಲ್ಲಾ ಹಿತ್ತಾಳೆಯ ಕಾರ್ಯಗಳಿಗೆ ಹೀರಾಮನನ್ನು ಮೇಲ್ವಿಚಾರಕನನ್ನಾಗಿ ನೇಮಿಸಿದನು. ಹೀರಾಮನು ಹಿತ್ತಾಳೆಯ ವಸ್ತುಗಳನ್ನು ನಿರ್ಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು