ವಿಮೋಚನಕಾಂಡ 31:6 - ಪರಿಶುದ್ದ ಬೈಬಲ್6 ಅವನೊಂದಿಗೆ ಕೆಲಸ ಮಾಡಲು ನಾನು ಒಹೊಲೀಯಾಬನನ್ನು ಆರಿಸಿಕೊಂಡಿದ್ದೇನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಬೇರೆ ಕೆಲಸಗಾರರಿಗೆಲ್ಲಾ ನಿಪುಣತೆಯನ್ನು ಅನುಗ್ರಹಿಸಿದ್ದೇನೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲೀಯಾಬನನ್ನು ನೇಮಿಸಿದ್ದೇನೆ. ಇದು ಮಾತ್ರವಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಲು ಕಲಾನಿಪುಣರಿಗೆ ಬೇಕಾದ ಜ್ಞಾನವನ್ನು ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೊಲೀಯಾಬನನ್ನೂ ನೇವಿುಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವದಕ್ಕೆ ಜಾಣರೆಲ್ಲರ ಹೃದಯದಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇಗೋ, ನಾನೇ ಅವನೊಂದಿಗೆ ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದೇನೆ. “ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಜಾಣರಾದವರೆಲ್ಲರ ಹೃದಯಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಜ್ಞಾನವನ್ನು ಅನುಗ್ರಹಿಸಿದ್ದೇನೆ. ಅಧ್ಯಾಯವನ್ನು ನೋಡಿ |