ವಿಮೋಚನಕಾಂಡ 32:14 - ಪರಿಶುದ್ದ ಬೈಬಲ್14 ಆದ್ದರಿಂದ ಯೆಹೋವನು ಜನರಿಗಾಗಿ ಮರುಕಪಟ್ಟು ತನ್ನ ಮನಸ್ಸನ್ನು ಮಾರ್ಪಡಿಸಿಕೊಂಡನು; ತಾನು ಹೇಳಿದ್ದ ಕೇಡನ್ನು ಮಾಡಲಿಲ್ಲ; ತನ್ನ ಜನರನ್ನು ನಾಶಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಸರ್ವೇಶ್ವರ ತಮ್ಮ ಪ್ರಜೆಗಳಿಗೆ ಮಾಡುವೆನೆಂದು ಹೇಳಿದ ಕೇಡಿನ ಬಗ್ಗೆ ಮನಸ್ಸನ್ನು ಮಾರ್ಪಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬೇರೆ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೆಹೋವ ದೇವರು ತಮ್ಮ ಜನರಿಗೆ ಮಾಡುವೆನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಮಾರ್ಪಡಿಸಿಕೊಂಡರು. ಅಧ್ಯಾಯವನ್ನು ನೋಡಿ |
ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.
“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”
ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.