ವಿಮೋಚನಕಾಂಡ 32:15 - ಪರಿಶುದ್ದ ಬೈಬಲ್15 ಬಳಿಕ ಮೋಶೆ ಬೆಟ್ಟದಿಂದಿಳಿದು ಬಂದನು. ಮೋಶೆಯೊಡನೆ ಆಜ್ಞಾಶಾಸನಗಳ ಎರಡು ಕಲ್ಲಿನ ಹಲಿಗೆಗಳಿದ್ದವು. ಈ ಆಜ್ಞಾಶಾಸನಗಳ ಕಲ್ಲುಗಳ ಮುಂದೆಯೂ ಹಿಂದೆಯೂ ಬರೆಯಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು. ಈ ಕಡೆಯೂ ಆ ಕಡೆಯೂ ಬರಹವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮೋಶೆ ಆಜ್ಞಾಶಾಸನಗಳಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದುಬಂದನು. ಆ ಹಲಗೆಗಳ ಎರಡು ಪಕ್ಕಗಳಲ್ಲೂ ಅಕ್ಷರಗಳು ಬರೆದಿದ್ದವು. ಇಕ್ಕಡೆಗಳಲ್ಲೂ ಬರಹವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದುಬಂದನು. ಆ ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು; ಈ ಕಡೆಯೂ ಆ ಕಡೆಯೂ ಬರಹವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಗೆಗಳ ಎರಡೂ ಬದಿಗಳಲ್ಲಿ ಅಂದರೆ ಈ ಕಡೆಯಲ್ಲಿಯೂ ಮತ್ತು ಆ ಕಡೆಯಲ್ಲಿಯೂ ಬರಹವಿತ್ತು. ಅಧ್ಯಾಯವನ್ನು ನೋಡಿ |
ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಆ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಈ ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಈ ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು.
ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.