ವಿಮೋಚನಕಾಂಡ 32:19 - ಪರಿಶುದ್ದ ಬೈಬಲ್19 ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದನು. ಅವನು ಚಿನ್ನದ ಬಸವನನ್ನೂ ಜನರ ನರ್ತನವನ್ನೂ ನೋಡಿ ಬಹುಕೋಪಗೊಂಡು ಕಲ್ಲಿನ ಹಲಿಗೆಗಳನ್ನು ನೆಲದ ಮೇಲೆ ಬಿಸಾಡಿಬಿಟ್ಟನು; ಅವು ಚೂರುಚೂರಾಗಿ ಒಡೆದುಹೋದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮೋಶೆಯು ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಮತ್ತು ಜನರು ಕುಣಿದಾಡುವುದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ತಗ್ಗಿನಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮೋಶೆ ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಜನರ ಕುಣಿದಾಟವನ್ನೂ ಕಂಡಾಗ ಕಡುಕೋಪಗೊಂಡನು. ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡಕ್ಕೆ ಬಿಸಾಡಿ ಒಡೆದುಹಾಕಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನು ಪಾಳೆಯದ ಹತ್ತಿರಕ್ಕೆ ಬಂದು ಆ ಬಸವನನ್ನೂ ಜನರು ಕುಣಿದಾಡುವದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡದಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಇದಾದ ಮೇಲೆ ಮೋಶೆ ಪಾಳೆಯದ ಸಮೀಪಕ್ಕೆ ಬಂದು ಆ ಕರುವನ್ನೂ, ಅವರ ಕುಣಿದಾಟವನ್ನೂ ನೋಡಿದಾಗ, ಮೋಶೆಯು ಕೋಪಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬೆಟ್ಟದ ಅಡಿಯಲ್ಲಿ ಬಿಸಾಡಿ ಅವುಗಳನ್ನು ಒಡೆದುಬಿಟ್ಟನು. ಅಧ್ಯಾಯವನ್ನು ನೋಡಿ |