ವಿಮೋಚನಕಾಂಡ 32:23 - ಪರಿಶುದ್ದ ಬೈಬಲ್23 ಅವರು ನನಗೆ, ‘ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ದೇವರುಗಳನ್ನು ಮಾಡಿಕೊಡು’ ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವರು ನನ್ನ ಬಳಿಗೆ ಬಂದು, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ಒಬ್ಬ ದೇವರನ್ನು ಮಾಡಿಸಿಕೊಡು, ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆಗೆ ಏನಾಯಿತೋ ಗೊತ್ತಿಲ್ಲ’ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅವರು ನನ್ನ ಬಳಿಗೆ ಬಂದು, “ನಮ್ಮನ್ನು ಮುನ್ನಡೆಸಿಕೊಂಡು ಹೋಗಲು ನಮಗೊಬ್ಬ ದೇವರನ್ನು ಮಾಡಿಸಿಕೊಡು. ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆ ಏನಾದನೋ ಗೊತ್ತಿಲ್ಲ,” ಎಂದರು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವರು ನನ್ನ ಬಳಿಗೆ ಬಂದು - ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರುಗಳನ್ನು ಮಾಡಿಸಿಕೊಡು; ಐಗುಪ್ತದೇಶದಿಂದ ನಮ್ಮನ್ನು ಕರಕೊಂಡುಬಂದ ಮೋಶೆಯು ಏನಾದನೋ ಗೊತ್ತಿಲ್ಲ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವರು ನನಗೆ, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,’ ಎಂದು ಹೇಳಿದರು. ಅಧ್ಯಾಯವನ್ನು ನೋಡಿ |