Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:25 - ಪರಿಶುದ್ದ ಬೈಬಲ್‌

25 ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಬಿಟ್ಟುಬಿಟ್ಟಿರುವುದು ಮೋಶೆಗೆ ತಿಳಿಯಿತು. ಜನರು ಕ್ರಮವಿಲ್ಲದೆ ಸ್ವೇಚ್ಛೆಯಿಂದ ನಡೆಯುತ್ತಿದ್ದರು; ಅವರ ಮೂರ್ಖತನವು ಅವರ ವಿರೋಧಿಗಳಿಗೆ ಎದ್ದುಕಾಣುತ್ತಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮೋಶೆಯು ಜನರು ಅಂಕೆ ತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಸಡಿಲವಾಗಿ ಬಿಟ್ಟಿದ್ದರಿಂದ ಅವನ ವಿರೋಧಿಗಳು ಅಪಹಾಸ್ಯಮಾಡುವುದಕ್ಕೆ ಆಸ್ಪದವಾಯಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇಸ್ರಯೇಲರು ಅಂಕೆಮೀರಿ ಇಷ್ಟಬಂದಂತೆ ನಡೆದುಕೊಳ್ಳಲು ಆರೋನನು ಬಿಟ್ಟುಬಿಟ್ಟಿದ್ದನು. ಈ ಕಾರಣ ಅವರು ವಿರೋಧಿಗಳ ಅಪಹಾಸ್ಯಕ್ಕೆ ಗುರಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವದಕ್ಕೆ ಆರೋನನು ಅವರನ್ನು ಬಿಟ್ಟದ್ದರಿಂದ ಅವರ ವಿರೋಧಿಗಳು ಅಪಹಾಸ್ಯ ಮಾಡುವದಕ್ಕೆ ಆಸ್ಪದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮೋಶೆಯು ಜನರು ಕ್ರಮವಿಲ್ಲದಿರುವುದನ್ನು ಕಂಡನು. ಆರೋನನು ಅವರನ್ನು ಮಿತಿಮೀರಿ ಇಷ್ಟಬಂದಂತೆ ಮಾಡುವದಕ್ಕೆ ಅವಕಾಶ ಮಾಡಿಕೊಟ್ಟದ್ದರಿಂದ ಅವರ ವೈರಿಗಳ ಮುಂದೆ ಅಪಹಾಸ್ಯಕ್ಕೆ ಆಸ್ಪದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:25
17 ತಿಳಿವುಗಳ ಹೋಲಿಕೆ  

ಪುರುಷರು ನಿನ್ನ ಶರೀರವನ್ನು ನೋಡಿ ನಿನ್ನೊಂದಿಗೆ ಸಂಭೋಗಿಸುವರು. ನೀನು ಮಾಡಿದ ಕೆಟ್ಟಕಾರ್ಯಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ಯಾರೂ ನಿನಗೆ ಸಹಾಯಮಾಡಲು ಬರುವದಿಲ್ಲ.


“ಕೇಳಿರಿ! ನಾನು ಕಳ್ಳನಂತೆ ಬರುತ್ತೇನೆ. ಎಚ್ಚರವಾಗಿದ್ದು ತನ್ನ ಬಟ್ಟೆಗಳನ್ನು ಕಾಪಾಡಿಕೊಳ್ಳುವವನು ಭಾಗ್ಯವಂತನಾಗಿದ್ದಾನೆ. ಆಗ ಅವನು ಬಟ್ಟೆಯಿಲ್ಲದೆ ಹೊರಗೆ ಹೋಗಿ ತನ್ನನ್ನು ನಾಚಿಕೆಗೆ ಗುರಿಪಡಿಸಿಕೊಳ್ಳುವ ಅಗತ್ಯತೆವಿರುವುದಿಲ್ಲ.”


ಶಾಫೀರ್‌ನಲ್ಲಿ ವಾಸಿಸುವವರೇ, ಬೆತ್ತಲೆಯಾಗಿ ನಾಚಿಕೆಯಿಂದ ನಡೆಯಿರಿ. ಚಾನಾನ್‌ನಲ್ಲಿ ವಾಸಿಸುವವರು ಹೊರಗೆ ಬರುವದಿಲ್ಲ. ಬೇತೇಚೆಲಿನ ಜನರು ಅಳುವರು, ನಿಮಗೆ ಅವರು ನೀಡುತ್ತಿದ್ದ ಬೆಂಬಲವನ್ನು ಹಿಂತೆಗೆದುಕೊಳ್ಳುವರು.


ನೀವು ದುಷ್ಕೃತ್ಯಗಳನ್ನು ಮಾಡಿದಿರಿ. ಈಗ ನೀವು ಆ ಕಾರ್ಯಗಳ ವಿಷಯದಲ್ಲಿ ನಾಚಿಕೆಪಡುತ್ತೀರಿ. ಆ ಕಾರ್ಯಗಳು ನಿಮಗೆ ಸಹಾಯ ಮಾಡಿದವೇ? ಇಲ್ಲ. ಆ ಕಾರ್ಯಗಳು ಆತ್ಮಿಕ ಮರಣವನ್ನು ಮಾತ್ರ ಉಂಟುಮಾಡುತ್ತವೆ.


ಆಕೆ ವ್ಯಭಿಚಾರ ಮಾಡುವದನ್ನು ನಿಲ್ಲಿಸದೆ ಹೋದರೆ ನಾನು ಆಕೆಯನ್ನು ಬೆತ್ತಲೆ ಮಾಡಿ, ಆಕೆ ಜನ್ಮ ತಾಳಿದಾಗ ಹೇಗೆ ಇದ್ದಳೋ ಹಾಗೆ ಮಾಡುವೆನು. ಆಕೆಯ ಜನರನ್ನು ಆಕೆಯಿಂದ ತೊಲಗಿಸಿ ಆಕೆಯನ್ನು ಒಣ ಮರುಭೂಮಿಯಂತೆ ಬೆಂಗಾಡಾಗಿ ಮಾಡುವೆನು. ಆಕೆ ಬಾಯಾರಿ ಸಾಯುವಂತೆ ಮಾಡುವೆನು.


ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚೆತ್ತುಕೊಳ್ಳುವರು. ಕೆಲವರು ಎಚ್ಚೆತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚೆತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು.


ಹೀಗಿರಲು, ನಿನ್ನ ಕಾರ್ಯಗಳನ್ನೆಲ್ಲಾ ನಾನು ಕ್ಷಮಿಸುವಾಗ, ನೀನು ಅವುಗಳನ್ನು ಜ್ಞಾಪಿಸಿಕೊಂಡು ನಾಚಿಕೆಪಡುವೆ. ಅಹಂಕಾರದಿಂದ ಮಾತನಾಡಲು ಮತ್ತೊಮ್ಮೆ ಬಾಯಿ ತೆರೆಯಲಾಗದಂತೆ ನೀನು ಬಹಳವಾಗಿ ಅವಮಾನಿತಳಾಗುವೆ.” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ಅರಸನಾದ ಆಹಾಜನು ತನ್ನ ಜನರನ್ನು ಪಾಪಮಾಡಲು ಪ್ರೋತ್ಸಾಹಿಸಿದ್ದಕ್ಕಾಗಿ ಯೆಹೋವನು ಯೆಹೂದ ದೇಶಕ್ಕೆ ಕಷ್ಟವನ್ನು ಕೊಟ್ಟನು. ಆಹಾಜನು ದೇವರಿಗೆ ದ್ರೋಹಮಾಡಿದನು.


ಯೆಹೋವನು ಆರೋನನನ್ನು ನಾಶಪಡಿಸುವಷ್ಟು ಕೋಪೋದ್ರಿಕ್ತನಾಗಿದ್ದನು. ನಾನು ಅವನಿಗಾಗಿ ಪ್ರಾರ್ಥಿಸಿದೆನು.


ಅದಕ್ಕೆ ಪುರುಷನು, “ನೀನು ತೋಟದಲ್ಲಿ ತಿರುಗಾಡುತ್ತಿರುವ ಸಪ್ಪಳವನ್ನು ನಾನು ಕೇಳಿದೆನು. ಆದರೆ ನಾನು ಬೆತ್ತಲೆಯಾಗಿದ್ದರಿಂದ ಭಯದಿಂದ ಅಡಗಿಕೊಂಡೆನು” ಎಂದು ಹೇಳಿದನು.


ಆದ್ದರಿಂದ ಪಾಳೆಯದ ದ್ವಾರದಲ್ಲಿ ಮೋಶೆಯು ನಿಂತು, “ಯೆಹೋವನ ಪಕ್ಷದವರು ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಲೇವಿ ಕುಲದವರೆಲ್ಲಾ ಮೋಶೆಯ ಬಳಿಗೆ ಬಂದರು.


ಬಳಿಕ ರಾಜನು ಈಗ ತಾನೇನು ಮಾಡಬೇಕೆಂದು ತನ್ನ ಸಲಹೆಗಾರರನ್ನು ಕೇಳಿದನು. ಅವರು ತಮ್ಮ ಸಲಹೆಯನ್ನು ಅವನಿಗೆ ನೀಡಿದರು. ಯಾರೊಬ್ಬಾಮನು ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ನೀವು ಆರಾಧಿಸಲು ಜೆರುಸಲೇಮಿಗೆ ಹೋಗಲೇಬಾರದು. ಇಸ್ರೇಲರೇ, ನಿಮ್ಮನ್ನು ಈಜಿಪ್ಟಿನಿಂದ ಹೊರತಂದ ದೇವರುಗಳು ಇಲ್ಲಿವೆ” ಎಂದು ಹೇಳಿದನು.


ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದ್ದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.


ಪ್ರವಾದಿಗಳಿಗೆ ದರ್ಶನವಾಗದಿದ್ದರೆ ಜನರು ಹತೋಟಿ ತಪ್ಪುತ್ತಾರೆ. ಆದರೆ ದೇವರ ಕಟ್ಟಳೆಗೆ ವಿಧೇಯನಾಗಿರುವವನು ಸಂತೋಷವಾಗಿರುವನು.


ನಾನು ಯೆಹೂದದ ಜನನಾಯಕರ ಹತ್ತಿರ ಹೋಗಿ ಅವರೊಂದಿಗೆ ಮಾತನಾಡುವೆನು. ಜನನಾಯಕರು ಯೆಹೋವನ ಮಾರ್ಗಗಳನ್ನು ನಿಶ್ಚಯವಾಗಿ ತಿಳಿದುಕೊಂಡಿರುವರು. ಅವರು ತಮ್ಮ ಯೆಹೋವನ ನ್ಯಾಯವಿಧಿಗಳನ್ನು ಅರಿತುಕೊಂಡಿರುತ್ತಾರೆ” ಅಂದುಕೊಂಡೆನು. ಆದರೆ ಈ ಜನನಾಯಕರುಗಳೆಲ್ಲಾ ದೇವರ ಸೇವೆಯನ್ನು ತೊರೆದುಬಿಟ್ಟಿದ್ದರು. ಅವರು ದೇವರಿಗೆ ವಿರೋಧಿಗಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು