Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:30 - ಪರಿಶುದ್ದ ಬೈಬಲ್‌

30 ಮರುದಿನ ಮುಂಜಾನೆ ಮೋಶೆಯು ಜನರಿಗೆ, “ನೀವು ಭಯಂಕರವಾದ ಪಾಪವನ್ನು ಮಾಡಿದ್ದೀರಿ. ಆದರೆ ಈಗ ನಾನು ಯೆಹೋವನ ಬಳಿಗೆ ಹೋಗಿ, ಆತನು ನಿಮ್ಮ ಪಾಪಗಳನ್ನು ಕ್ಷಮಿಸುವಂತೆ ನಾನೇನಾದರೂ ಮಾಡಬಹುದೊ ಎಂದು ವಿಚಾರಿಸುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮರುದಿನದಲ್ಲಿ ಮೋಶೆಯು ಜನರಿಗೆ, “ನೀವು ಮಹಾ ಪಾಪವನ್ನು ಮಾಡಿರುವಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು. ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಪ್ರಾಯಶ್ಚಿತ್ತವನ್ನು ನಾನು ಮಾಡಬಹುದೇನೋ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಮರುದಿನ ಮೋಶೆ ಜನರಿಗೆ, “ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟಹತ್ತಿ ಸರ್ವೇಶ್ವರನ ಸನ್ನಿಧಿಗೆ ಹೋಗುವೆನು. ಬಹುಶಃ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆ ನನ್ನ ಮುಖಾಂತರ ದೊರಕೀತು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಮರುದಿನದಲ್ಲಿ ಮೋಶೆ ಜನರಿಗೆ - ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು; ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆಯು ನನ್ನ ಮೂಲಕ ದೊರಕೀತು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಮರುದಿನದಲ್ಲಿ, ಮೋಶೆಯು ಜನರಿಗೆ, “ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ. ಆದ್ದರಿಂದ ನಾನು ಈಗ ಬೆಟ್ಟವನ್ನು ಹತ್ತಿ ಯೆಹೋವ ದೇವರ ಬಳಿಗೆ ಹೋಗುವೆನು. ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯಶ್ಚಿತ್ತ ಮಾಡಿಕೊಳ್ಳಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:30
22 ತಿಳಿವುಗಳ ಹೋಲಿಕೆ  

ಸಮುವೇಲನು, “ಭಯಪಡಬೇಡಿ. ಅದೇನೋ ನಿಜ. ನೀವು ಆ ಕೆಟ್ಟಕಾರ್ಯಗಳನ್ನೆಲ್ಲಾ ಮಾಡಿದಿರಿ. ಆದರೆ ಯೆಹೋವನ ಮಾರ್ಗದಲ್ಲಿ ನಡೆಯುವುದನ್ನು ನಿಲ್ಲಿಸದಿರಿ. ಯೆಹೋವನ ಸೇವೆಯನ್ನು ಪೂರ್ಣಹೃದಯದಿಂದ ಮಾಡಿರಿ.


ಆ ಒಡಂಬಡಿಕೆಯ ಪ್ರಕಾರವಾಗಿ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಕಾಪಾಡಿ ಇಸ್ರೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.


ಒಂದುವೇಳೆ ದೇವರು ತನ್ನ ಮನಸ್ಸನ್ನು ಬದಲಾಯಿಸಾನು. ತಾನು ಯೋಚಿಸಿದ್ದನ್ನು ನೆರವೇರಿಸದೆ ಇರುವನೋ ಏನೋ? ಆತನು ತನ್ನ ಯೋಜನೆಯನ್ನು ಹಿಂದೆಗೆದು, ಕೋಪಿಸಿಕೊಳ್ಳದೆ, ನಮ್ಮನ್ನು ಶಿಕ್ಷಿಸದೆ ಇರುವನೋ ಏನೋ! ಆಗ ನಾವು ನಾಶವಾಗದಿರಬಹುದು!


ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು.


ಯೆಹೋವನು ಇಸ್ರೇಲನ್ನು ದಾವೀದನ ವಂಶಾವಳಿಯಿಂದ ಕಿತ್ತುಹಾಕಿದನು. ಇಸ್ರೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ತಮ್ಮ ರಾಜನನ್ನಾಗಿಸಿಕೊಂಡರು. ಯಾರೊಬ್ಬಾಮನು ಇಸ್ರೇಲರನ್ನು ಯೆಹೋವನಿಂದ ದೂರಮಾಡಿದನು. ಇಸ್ರೇಲರು ಮಹಾಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು.


ಯೆಹೋವನು ನನಗುಂಟಾಗುತ್ತಿರುವ ಕೇಡುಗಳನ್ನು ನೋಡಿ ಶಿಮ್ಮಿಯ ಶಾಪಕ್ಕೆ ಬದಲಾಗಿ ಶುಭವನ್ನು ಅನುಗ್ರಹಿಸಬಹುದೇನೋ” ಎಂದನು.


ನಾನು ನಿಮಗಾಗಿ ಪ್ರಾರ್ಥಿಸದಿದ್ದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವನಾಗುತ್ತೇನೆ. ನಾನು ನಿಮಗೆ ಒಳ್ಳೆಯದೂ ಯೋಗ್ಯವೂ ಆಗಿರುವ ಮಾರ್ಗವನ್ನು ಉಪದೇಶಿಸುತ್ತೇನೆ.


ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿಹೋದಾಗ, ಘೋರವ್ಯಾಧಿ ಆ ಜನರಲ್ಲಿ ಹರಡಿಕೊಳ್ಳುತ್ತಾ ಇತ್ತು. ಆದ್ದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.


ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.


ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ಅವರು ನನ್ನ ಸಹೋದರ ಸಹೋದರಿಯರಾಗಿದ್ದಾರೆ; ಇಹಲೋಕದ ಕುಟುಂಬದವರಾಗಿದ್ದಾರೆ. ಅವರಿಗೆ ಸಹಾಯ ಮಾಡಲು ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವುದಕ್ಕೂ ಸಿದ್ಧನಾಗಿದ್ದೇನೆ.


ನಾನು ಇಲ್ಲಿಂದ ನನ್ನ ತಂದೆಯ ಬಳಿಗೆ ಹೊರಟುಹೋಗುತ್ತೇನೆ. ನಾನು ನನ್ನ ತಂದೆಗೆ, ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪ ಮಾಡಿದ್ದೇನೆ.


ಈಕೆಯ ಅನೇಕ ಪಾಪಗಳು ಕ್ಷಮಿಸಲ್ಪಟ್ಟಿವೆ ಎಂದು ನಾನು ನಿನಗೆ ಹೇಳುತ್ತೇನೆ. ಏಕೆಂದರೆ ಈಕೆ ಅಧಿಕವಾದ ಪ್ರೀತಿಯನ್ನು ತೋರಿದಳು. ಆದರೆ ಸ್ವಲ್ಪ ಕ್ಷಮೆ ಹೊಂದುವವನು ಕೇವಲ ಸ್ವಲ್ಪ ಪ್ರೀತಿಯನ್ನೇ ತೋರುವನು” ಎಂದು ಹೇಳಿದನು.


ಯೆಹೋವನಿಗೆ ಅರ್ಪಿಸುವ ಯಜ್ಞವನ್ನು ಹೊಫ್ನಿ ಮತ್ತು ಫೀನೆಹಾಸರು ತುಚ್ಛೀಕರಿಸುತ್ತಿದ್ದರು. ಇದು ಯೆಹೋವನಿಗೆ ವಿರೋಧವಾದ ಮಹಾ ಪಾಪವಾಗಿತ್ತು.


ನೀವು ಮಾಡಿದ ತಪ್ಪುಗಳನ್ನು ಒಬ್ಬರಿಗೊಬ್ಬರು ಯಾವಾಗಲೂ ಹೇಳಿಕೊಳ್ಳಿರಿ. ಬಳಿಕ ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ನೀವು ಹೀಗೆ ಮಾಡಿದರೆ, ದೇವರು ನಿಮ್ಮನ್ನು ಗುಣಪಡಿಸುವನು. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಲವಾಗಿದೆ.


ನೀನು ಯೆಹೋವನ ಆಜ್ಞೆಯನ್ನು ಏಕೆ ಕಡೆಗಣಿಸಿದೆ? ಆತನು ತಪ್ಪೆಂದು ಹೇಳಿದ ಕಾರ್ಯವನ್ನು ಏಕೆ ಮಾಡಿದೆ? ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ನೀನು ಕೊಲ್ಲಿಸಿದೆ. ಅವನ ಪತ್ನಿಯನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಿದೆ. ಹೌದು, ನೀನು ಅಮ್ಮೋನಿಯರ ಕತ್ತಿಯಿಂದ ಊರೀಯನನ್ನು ಕೊಲ್ಲಿಸಿದೆ.


ಆಗ ಮೋಶೆಯು ಅವರಿಗೆ, “ಇಂದು ನೀವು ಯೆಹೋವನಿಗೆ ಮೀಸಲಾದ ಜನರಾದಿರಿ; ಯಾಕೆಂದರೆ ನೀವು ನಿಮ್ಮ ಸ್ವಂತ ಗಂಡುಮಗನಿಗೂ ಸಹೋದರನಿಗೂ ವಿರೋಧವಾದಿರಿ. ಇಂದು ಆತನು ನಿಮ್ಮನ್ನು ಆಶೀರ್ವದಿಸಿದ್ದಾನೆ” ಅಂದನು.


ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.


ಈಗ ಗೋಧಿಯ ಸುಗ್ಗಿಕಾಲ. ನಾನು ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ. ಆತನು ಗುಡುಗನ್ನು ಮತ್ತು ಮಳೆಯನ್ನು ಕಳುಹಿಸಲೆಂದು ನಾನು ಪ್ರಾರ್ಥಿಸುತ್ತೇನೆ. ರಾಜನು ಬೇಕೆಂದು ನೀವು ಕೇಳಿದ್ದು ಯೆಹೋವನಿಗೆ ವಿರುದ್ಧವಾಗಿ ನೀವು ಮಾಡಿದ ಎಂತಹ ಕೆಟ್ಟಕಾರ್ಯವಾಗಿದೆ ಎಂಬದನ್ನು ನಿಮಗೇ ತಿಳಿಯುತ್ತದೆ” ಎಂದು ಹೇಳಿದನು.


ಜನರೆಲ್ಲಾ ಸಮುವೇಲನಿಗೆ, “ನಿನ್ನ ಸೇವಕರಾದ ನಮಗಾಗಿ, ನಿನ್ನ ದೇವರಾದ ಯೆಹೋವನಲ್ಲಿ ಪ್ರಾರ್ಥಿಸು. ನಮ್ಮನ್ನು ಸಾಯಲು ಬಿಡಬೇಡ. ನಾವು ಅನೇಕ ಸಲ ಪಾಪಗಳನ್ನು ಮಾಡಿದ್ದೇವೆ. ಈಗ ನಾವು ರಾಜನನ್ನು ಕೇಳಿಕೊಂಡಿದ್ದು ನಮ್ಮ ಪಾಪಗಳೊಂದಿಗೆ ಮತ್ತೊಂದು ಪಾಪವನ್ನು ಮಾಡಿದಂತಾಯಿತು” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು