ವಿಮೋಚನಕಾಂಡ 32:32 - ಪರಿಶುದ್ದ ಬೈಬಲ್32 ಅವರ ಈ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪಟ್ಟಿಯ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇಲ್ಲವಾದರೆ ನೀವು ಬರೆದಿರುವ (ಜೀವಿತರ) ಪಟ್ಟಿಯಿಂದ ನನ್ನ ಹೆಸರನ್ನು ಅಳಿಸಿಬಿಡಿಯೆಂದು ಕೇಳಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಇಲ್ಲವಾದರೆ ನೀನು ಬರೆದಿರುವ [ಜೀವಿತರ] ಪಟ್ಟಿಯಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆದರೂ ಈಗ ನೀವು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀವು ಬರೆದ ಗ್ರಂಥದಿಂದ ನನ್ನ ಹೆಸರನ್ನು ಅಳಿಸಿಬಿಡಿ,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿ |
ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.
“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.
ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.
ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.