ವಿಮೋಚನಕಾಂಡ 32:34 - ಪರಿಶುದ್ದ ಬೈಬಲ್34 ಆದ್ದರಿಂದ ಈಗ ಕೆಳಗಿಳಿದು ನಾನು ನಿನಗೆ ಹೇಳುವಲ್ಲಿಗೆ ಜನರನ್ನು ನಡಿಸು. ನನ್ನ ದೂತನು ನಿನ್ನ ಮುಂದೆ ಹೋಗಿ ನಿನ್ನನ್ನು ನಡಿಸುವನು. ಪಾಪಮಾಡಿದ ಜನರನ್ನು ಶಿಕ್ಷಿಸುವ ಸಮಯ ಬಂದಾಗ ಅವರು ಶಿಕ್ಷಿಸಲ್ಪಡುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನೀನಾದರೋ ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ನಾಡಿಗೆ ಈ ಜನರನ್ನು ನಡೆಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆ ನಡೆಯುವನು. ಆದರೂ ನಾನು ಅವರನ್ನು ದಂಡಿಸುವ ದಿನದಂದು ಅವರ ಪಾಪಕ್ಕೆ ತಕ್ಕಂತೆ ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡಿಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆಯಲ್ಲಿ ನಡೆಯುವನು. ಆದರೂ ನಾನು ಅವರನ್ನು ಶಿಕ್ಷಿಸುವಾಗ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆದರೆ ಈಗ ನೀನು ಹೋಗಿ, ಜನರನ್ನು ನಿನಗೆ ನಾನು ಹೇಳಿದ ಸ್ಥಳಕ್ಕೆ ಕರೆದುಕೊಂಡು ಹೋಗು. ಇಗೋ, ನನ್ನ ದೂತನು ನಿನ್ನನ್ನು ಮುನ್ನಡೆಸುವನು. ಆದರೂ ನಾನು ವಿಚಾರಿಸುವ ದಿನ ಬಂದಾಗ ಅವರ ಪಾಪಕ್ಕೆ ತಕ್ಕಂತೆ ಅವರನ್ನು ಶಿಕ್ಷಿಸುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿ |
ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.