ವಿಮೋಚನಕಾಂಡ 32:4 - ಪರಿಶುದ್ದ ಬೈಬಲ್4 ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು, ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಿದನು. ಆಗ ಜನರು, “ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಬಸವನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಲಾಗಿ ಅವರು - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡುಬಂದ ದೇವರು ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಉಳಿಯಿಂದ ರೂಪಿಸಿ, ಎರಕ ಹೊಯ್ದು, ಕರುವಾಗಿ ಮಾಡಿದನು. ಆಗ ಅವರು, “ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿನಿಂದ ಬರಮಾಡಿದ ನಿಮ್ಮ ದೇವರುಗಳು ಇವೇ,” ಎಂದರು. ಅಧ್ಯಾಯವನ್ನು ನೋಡಿ |
ರಾಜನಾದ ಯಾರೊಬ್ಬಾಮನು ಹೊಸಹಬ್ಬದ ದಿನವನ್ನು ಆರಂಭಿಸಿದನು. ಈ ಹಬ್ಬವು ಯೆಹೂದ್ಯರ ಪಸ್ಕಹಬ್ಬದಂತಿತ್ತು. ಆದರೆ ಈ ಹಬ್ಬವು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಂದರ್ಭದಲ್ಲಿ ರಾಜನು ಬೇತೇಲ್ ನಗರದಲ್ಲಿ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಅರ್ಪಿಸಿದನು. ಅವನು ತಾನೇ ನಿರ್ಮಿಸಿದ ಕರುಗಳಿಗೆ ಯಜ್ಞಗಳನ್ನು ಅರ್ಪಿಸಿದನು. ರಾಜನಾದ ಯಾರೊಬ್ಬಾಮನು ತಾನು ನಿರ್ಮಿಸಿದ ಎತ್ತರದ ಸ್ಥಳಗಳಲ್ಲಿ ಸೇವೆಮಾಡಲು ಯಾಜಕರನ್ನು ಬೇತೇಲ್‌ನಲ್ಲಿಯೇ ಆರಿಸಿಕೊಂಡನು.
ಇಸ್ರೇಲರು ಸೋಲಿಸಿದ ಜನರಲ್ಲಿ ಕೆಲವರು ಇಷ್ಮಾಯೇಲ್ಯರಾಗಿದ್ದರು. ಇಷ್ಮಾಯೇಲ್ಯರು ಕಿವಿಗಳಲ್ಲಿ ಚಿನ್ನದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಆದ್ದರಿಂದ ಗಿದ್ಯೋನನು ಇಸ್ರೇಲರಿಗೆ, “ನೀವು ನನಗಾಗಿ ಈ ಒಂದು ಕೆಲಸವನ್ನು ಮಾಡಬೇಕೆಂದು ನನ್ನ ಕೋರಿಕೆ. ನೀವು ಯುದ್ಧದಲ್ಲಿ ಕೊಳ್ಳೆಹೊಡೆದ ವಸ್ತುಗಳಿಂದ ಪ್ರತಿಯೊಬ್ಬನು ಒಂದು ಬಂಗಾರದ ಮುರುವನ್ನು ನನಗೆ ಕೊಡಬೇಕು” ಎಂದು ಕೇಳಿದನು.