ವಿಮೋಚನಕಾಂಡ 32:5 - ಪರಿಶುದ್ದ ಬೈಬಲ್5 ಆರೋನನು ಇವೆಲ್ಲವನ್ನು ನೋಡಿ, ಬಸವನ ಮುಂದೆ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಬಳಿಕ, “ನಾಳೆ ಯೆಹೋವನನ್ನು ಸನ್ಮಾನಿಸಲು ಒಂದು ವಿಶೇಷ ಹಬ್ಬವಿರುವುದು” ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆರೋನನು ಅದನ್ನು ನೋಡಿದಾಗ ಹೋರಿಕರುವಿಗೆ ಎದುರಾಗಿ ಒಂದು ಯಜ್ಞವೇದಿಯನ್ನು ಕಟ್ಟಿಸಿ, “ನಾಳೆ ಯೆಹೋವನಿಗೆ ಹಬ್ಬವಾಗಬೇಕು” ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆರೋನನು ಇದನ್ನು ನೋಡಿ ಆ ಹೋರಿಕರುವಿನ ಮುಂದೆ ಒಂದು ಬಲಿಪೀಠವನ್ನು ಕಟ್ಟಿಸಿ, “ನಾಳೆ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಹಬ್ಬವನ್ನು ಆಚರಿಸಬೇಕು,” ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆರೋನನು ಅದನ್ನು ನೋಡಿ ಬಸವನಿಗೆ ಎದುರಾಗಿ ಯಜ್ಞವೇದಿಯನ್ನು ಕಟ್ಟಿಸಿ - ನಾಳೆ ಯೆಹೋವನಿಗೆ ಉತ್ಸವವಾಗಬೇಕು ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆರೋನನು ಅದನ್ನು ನೋಡಿ ಅದರ ಮುಂದೆ ಬಲಿಪೀಠವನ್ನು ಕಟ್ಟಿದನು. “ನಾಳೆ ಯೆಹೋವ ದೇವರಿಗೆ ಹಬ್ಬ,” ಎಂದು ಪ್ರಕಟಿಸಿದನು. ಅಧ್ಯಾಯವನ್ನು ನೋಡಿ |