Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:8 - ಪರಿಶುದ್ದ ಬೈಬಲ್‌

8 ನಾನು ಅವರಿಗೆ ಆಜ್ಞಾಪಿಸಿದವುಗಳಿಗೆ ಬಹುಬೇಗನೆ ಅವಿಧೇಯರಾಗಿದ್ದಾರೆ. ಚಿನ್ನವನ್ನು ಕರಗಿಸಿ ಅದರಿಂದ ಬಸವನನ್ನು ಮಾಡಿಕೊಂಡು ಅದನ್ನು ಪೂಜಿಸುತ್ತಾ ಅದಕ್ಕೆ ಯಜ್ಞಗಳನ್ನು ಸಮರ್ಪಿಸುತ್ತಿದ್ದಾರೆ. ‘ಇಸ್ರೇಲರೇ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳು’ ಎಂದು ಜನರು ಹೇಳುತ್ತಿದ್ದಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಇಷ್ಟು ಬೇಗನೆ ತೊರೆದುಬಿಟ್ಟು ತಮಗೇ ಲೋಹದ ಹೋರಿಕರುವನ್ನು ಮಾಡಿಸಿಕೊಂಡು, ಅದಕ್ಕೆ ಅಡ್ಡಬಿದ್ದು, ಬಲಿಗಳನ್ನರ್ಪಿಸಿ, ‘ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರು’ ಎಂದು ಹೇಳಿಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹದ ಬಸವನನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು, ತಮಗೆ ಎರಕ ಹೊಯ್ದ ಕರುವನ್ನು ಮಾಡಿಕೊಂಡು, ಅದನ್ನು ಆರಾಧಿಸುತ್ತಾ, ಅದಕ್ಕೆ ಬಲಿ ಅರ್ಪಿಸಿ, ‘ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರುಗಳು ಇವುಗಳೇ,’ ಎಂದು ಹೇಳುತ್ತಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:8
18 ತಿಳಿವುಗಳ ಹೋಲಿಕೆ  

ಬಳಿಕ ರಾಜನು ಈಗ ತಾನೇನು ಮಾಡಬೇಕೆಂದು ತನ್ನ ಸಲಹೆಗಾರರನ್ನು ಕೇಳಿದನು. ಅವರು ತಮ್ಮ ಸಲಹೆಯನ್ನು ಅವನಿಗೆ ನೀಡಿದರು. ಯಾರೊಬ್ಬಾಮನು ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ನೀವು ಆರಾಧಿಸಲು ಜೆರುಸಲೇಮಿಗೆ ಹೋಗಲೇಬಾರದು. ಇಸ್ರೇಲರೇ, ನಿಮ್ಮನ್ನು ಈಜಿಪ್ಟಿನಿಂದ ಹೊರತಂದ ದೇವರುಗಳು ಇಲ್ಲಿವೆ” ಎಂದು ಹೇಳಿದನು.


ಆದ್ದರಿಂದ ನನ್ನೊಡನೆ ಸ್ಪರ್ಧಿಸಲು, ನೀವು ಬೆಳ್ಳಿಬಂಗಾರಗಳಿಂದ ಮೂರ್ತಿಗಳನ್ನು ಮಾಡಿಕೊಳ್ಳಬಾರದು. ಈ ಸುಳ್ಳು ದೇವರುಗಳನ್ನು ನೀವು ಮಾಡಿಕೊಳ್ಳಲೇಬಾರದು.”


ನಾನು ಕೆಳಗೆ ನೋಡಿದಾಗ ಬಂಗಾರದಿಂದ ಬಸವನನ್ನು ಮಾಡಿಕೊಂಡು ಯೆಹೋವನ ವಿರುದ್ಧವಾಗಿ ಪಾಪ ಮಾಡಿದ್ದಿರಿ. ಯೆಹೋವನ ಆಜ್ಞೆಯನ್ನು ಅಷ್ಟು ಬೇಗನೇ ನೀವು ಉಲ್ಲಂಘಿಸಿದ್ದಿರಿ.


ಆದರೆ ಇಸ್ರೇಲರು ನ್ಯಾಯಾಧೀಶರ ಮಾತನ್ನು ಕೇಳಲಿಲ್ಲ. ಅವರು ಯೆಹೋವನಿಗೆ ನಂಬಿಗಸ್ತರಾಗಿರದೆ ಬೇರೆಬೇರೆ ದೇವರುಗಳನ್ನು ಅನುಸರಿಸಿದರು. ಹಿಂದೆ ಇಸ್ರೇಲರ ಪೂರ್ವಿಕರು ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಿದ್ದರು. ಆದರೆ ಈಗ ಇಸ್ರೇಲರು ಬದಲಾಗಿ ಯೆಹೋವನ ಆಜ್ಞಾಪಾಲನೆಯನ್ನು ನಿಲ್ಲಿಸಿಬಿಟ್ಟರು.


“ಸುಳ್ಳುದೇವರಿಗೆ ಯಜ್ಞವನ್ನರ್ಪಿಸುವವನನ್ನು ನಾಶ ಮಾಡಬೇಕು. ನೀವು ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನರ್ಪಿಸಬೇಕು.


ಆರೋನನು ಬಸವನ ಮೂರ್ತಿಯನ್ನು ಚಿನ್ನದಿಂದ ಎರಕಹೊಯ್ಯಿಸಿದನು. ಬಳಿಕ ಅವರು, “ಇಸ್ರೇಲರೇ, ನಿಮ್ಮ ದೇವರುಗಳು ಇಲ್ಲಿವೆ! ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರುಗಳು ಇವುಗಳೇ” ಎಂದು ಹೇಳಿದರು.


“ಎಚ್ಚರಿಕೆಯಾಗಿರಿ, ಆ ದೇಶದಲ್ಲಿ ವಾಸಿಸುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ನೀವು ಅವರೊಂದಿಗೆ ಸೇರಿಕೊಳ್ಳುವಿರಿ. ಅವರೊಂದಿಗೆ ಸೇರಿಕೊಳ್ಳುವಂತೆ ನಿಮ್ಮನ್ನು ಆಹ್ವಾನಿಸುವರು; ಅವರ ಯಜ್ಞಾರ್ಪಣೆಗಳನ್ನು ತಿನ್ನುವಿರಿ.


ಅವರು “ಅಜದೇವತೆಗಳಿಗೆ” ಇನ್ನು ಮುಂದೆ ಬಲಿಕೊಡಬಾರದು. ಅವರು ಅನ್ಯದೇವತೆಗಳ ಹಿಂದೆ ಹೋಗಿದ್ದಾರೆ. ಆ ರೀತಿಯಲ್ಲಿ ಅವರು ಸೂಳೆಯರ ಹಾಗೆ ವರ್ತಿಸಿದ್ದಾರೆ. ಈ ನಿಯಮಗಳು ಶಾಶ್ವತವಾಗಿವೆ.


ಆಗ ಆತನು ನನಗೆ, ‘ಎದ್ದು ಬೇಗನೆ ಕೆಳಗಿಳಿ. ಯಾಕೆಂದರೆ ನೀನು ಈಜಿಪ್ಟಿನಿಂದ ಬಿಡಿಸಿತಂದ ಜನರು ತಮ್ಮನ್ನು ತಾವೇ ಕೆಡಿಸಿಕೊಂಡಿದ್ದಾರೆ. ಇಷ್ಟು ಬೇಗನೆ ಅವರು ನನ್ನ ಆಜ್ಞೆಗಳನ್ನು ಮೀರಿದ್ದಾರೆ. ಅವರು ಬಂಗಾರವನ್ನು ಕರಗಿಸಿ ತಮಗಾಗಿ ವಿಗ್ರಹವನ್ನು ಮಾಡಿಕೊಂಡಿದ್ದಾರೆ’ ಎಂದು ಹೇಳಿದನು.


ಅವರು ದೆವ್ವಗಳಿಗೆ ಯಜ್ಞವನ್ನರ್ಪಿಸಿದರು. ಅವುಗಳು ನಿಜ ದೇವರುಗಳಲ್ಲ. ಅವುಗಳು ಮಾಡಲ್ಪಟ್ಟ ದೇವರುಗಳೆಂದು ಅವರಿಗೆ ಗೊತ್ತಿರಲಿಲ್ಲ. ಅವುಗಳು ಕೈಯಿಂದ ಮಾಡಲ್ಪಟ್ಟ ದೇವರುಗಳು. ಅವರ ಪೂರ್ವಿಕರಿಗೆ ತಿಳಿಯದಂಥ ದೇವರುಗಳು.


ಆದರೆ ಅವರು ಯಥಾರ್ಥವಾಗಿರದೆ ಸುಳ್ಳಾಡಿದರು.


ಈ ಹತ್ತು ಮಂದಿ ಗಿಲ್ಯಾದಿಗೆ ಹೋಗಿ ರೂಬೇನ್ಯರ, ಗಾದ್ಯರ ಮತ್ತು ಮನಸ್ಸೆಕುಲದ ಅರ್ಧಜನರ ಜೊತೆಗೆ ಮಾತನಾಡಿ ಹೀಗೆಂದರು:


ಇಸ್ರೇಲರು ಸೋಲಿಸಿದ ಜನರಲ್ಲಿ ಕೆಲವರು ಇಷ್ಮಾಯೇಲ್ಯರಾಗಿದ್ದರು. ಇಷ್ಮಾಯೇಲ್ಯರು ಕಿವಿಗಳಲ್ಲಿ ಚಿನ್ನದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು. ಆದ್ದರಿಂದ ಗಿದ್ಯೋನನು ಇಸ್ರೇಲರಿಗೆ, “ನೀವು ನನಗಾಗಿ ಈ ಒಂದು ಕೆಲಸವನ್ನು ಮಾಡಬೇಕೆಂದು ನನ್ನ ಕೋರಿಕೆ. ನೀವು ಯುದ್ಧದಲ್ಲಿ ಕೊಳ್ಳೆಹೊಡೆದ ವಸ್ತುಗಳಿಂದ ಪ್ರತಿಯೊಬ್ಬನು ಒಂದು ಬಂಗಾರದ ಮುರುವನ್ನು ನನಗೆ ಕೊಡಬೇಕು” ಎಂದು ಕೇಳಿದನು.


ಅವರು ಬಂಗಾರದಿಂದ ಕರುವಿನಾಕೃತಿಯ ವಿಗ್ರಹವನ್ನು ಮಾಡಿ, ‘ಈ ವಿಗ್ರಹವೇ ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದದ್ದು’ ಎಂದು ಹೇಳಿದರೂ ನೀನು ಅವರನ್ನು ತೊರೆದುಬಿಡಲಿಲ್ಲ. ಅವರು ನಿನಗೆ ವಿರೋಧವಾಗಿ ದೂಷಿಸಿ ಪಾಪಮಾಡಿದರು.


ಹೋರೇಬ್ ಬೆಟ್ಟದ ಬಳಿಯಲ್ಲಿ ಅವರು ಚಿನ್ನದ ಬಸವನನ್ನು ಮಾಡಿ ಅದಕ್ಕೆ ಅಡ್ಡಬಿದ್ದರು.


ಕೆಲವರು ಬೆಳ್ಳಿಬಂಗಾರಗಳಲ್ಲಿ ಐಶ್ವರ್ಯವಂತರಾಗಿದ್ದಾರೆ. ಅವರ ಕೈಚೀಲಗಳಿಂದ ಬಂಗಾರವು ಉದುರುತ್ತವೆ, ಅವರು ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗುತ್ತಾರೆ; ಕುಶಲಕರ್ಮಿಗಳಿಗೆ ಹಣಕೊಟ್ಟು ಮರದಿಂದ ವಿಗ್ರಹವನ್ನು ಮಾಡಿಸಿಕೊಳ್ಳುತ್ತಾರೆ. ಆಮೇಲೆ ಅವರು ಆ ವಿಗ್ರಹಕ್ಕೆ ಅಡ್ಡಬಿದ್ದು ಪೂಜೆ ಮಾಡುತ್ತಾರೆ.


ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು