Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:9 - ಪರಿಶುದ್ದ ಬೈಬಲ್‌

9 ಯೆಹೋವನು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಅವರು ಬಹಳ ಮೊಂಡರೆಂದು ನಾನು ಬಲ್ಲೆನು. ಅವರು ಯಾವಾಗಲೂ ನಿನಗೆ ವಿರೋಧವಾಗಿ ದಂಗೆ ಏಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಲ್ಲದೆ ಯೆಹೋವನು ಮೋಶೆಗೆ, “ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ. ಇವರು ಮೊಂಡುತನವುಳ್ಳ ಜನರಾಗಿದ್ದಾರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಜನರ ಸ್ವಭಾವ ನನಗೆ ಗೊತ್ತಿದೆ. ಇವರು ನನ್ನ ಆಜ್ಞೆಗೆ ಬಗ್ಗದ ಹಟಮಾರಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದಲ್ಲದೆ ಯೆಹೋವನು ಮೋಶೆಗೆ - ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ; ಇವರು ನನ್ನ ಆಜ್ಞೆಗೆ ಬೊಗ್ಗದವರಾಗಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಯೆಹೋವ ದೇವರು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಇವರು ಹಟಮಾರಿ ಜನರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:9
19 ತಿಳಿವುಗಳ ಹೋಲಿಕೆ  

ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!


ನೀವು ಹಠಮಾರಿಗಳಾಗಿದ್ದು ನಾನು ಹೇಳಿದ್ದನ್ನು ನಂಬದೆ ಹೋದದ್ದರಿಂದ ನಾನು ಹಾಗೆ ಮಾಡಿದೆನು. ನೀವು ಕಬ್ಬಿಣದಂತೆ ಬಗ್ಗದ ಹಠಮಾರಿಗಳಾಗಿದ್ದೀರಿ. ಹಿತ್ತಾಳೆಯಂತೆ ಗಟ್ಟಿಯಾಗಿದ್ದೀರಿ.


“ಅಲ್ಲದೆ ಯೆಹೋವನು ನನಗೆ, ‘ನಾನು ಈ ಜನರನ್ನು ಗಮನಿಸುತ್ತಿದ್ದೇನೆ. ಇವರು ತುಂಬಾ ಹಠಮಾರಿಗಳು.


ಮೋಶೆಯು, “ಯೆಹೋವನೇ, ನಿನ್ನ ದಯೆ ನನಗೆ ದೊರಕುವುದಾದರೆ, ದಯವಿಟ್ಟು ನಮ್ಮೊಂದಿಗೆ ಬಾ. ಇವರು ಅವಿಧೇಯರಾದ ಜನರೆಂದು ನಾನು ಬಲ್ಲೆನು. ಆದರೆ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ನಿನ್ನ ಜನರನ್ನಾಗಿ ಸ್ಪೀಕರಿಸು” ಎಂದು ಬೇಡಿಕೊಂಡನು.


ಯೆಹೋವನು ಮೋಶೆಗೆ, “ಇಸ್ರೇಲರಿಗೆ ಹೀಗೆಂದು ಹೇಳು: ನೀವು ಅವಿಧೇಯರಾದ ಜನರಾಗಿದ್ದೀರಿ. ನಾನು ನಿಮ್ಮೊಡನೆ ಕ್ಷಣಹೊತ್ತು ಸಂಚರಿಸಿದರೆ, ನಿಮ್ಮನ್ನು ಸಂಹರಿಸುವೆನು. ಆದ್ದರಿಂದ ನಿಮ್ಮೆಲ್ಲಾ ಆಭರಣಗಳನ್ನು ತೆಗೆದುಬಿಡಿರಿ. ನೀವು ಮಾಡಬೇಕಾದದ್ದನ್ನು ನಾನೇ ತಿಳಿಸುವೆನು!” ಎಂದು ಹೇಳಿದನು.


ಆದ್ದರಿಂದ ಸಮೃದ್ಧಿಕರವಾದ ಆ ದೇಶಕ್ಕೆ ಹೋಗಿರಿ. ಆದರೆ ನಾನು ನಿಮ್ಮೊಂದಿಗೆ ಬರುವುದಿಲ್ಲ. ನೀವು ನನ್ನ ಆಜ್ಞೆಗೆ ವಿಧೇಯರಾಗದೆ ನನ್ನನ್ನು ಕೋಪಗೊಳಿಸುತ್ತೀರಿ. ನಾನು ನಿಮ್ಮೊಂದಿಗೆ ಬಂದರೆ, ದಾರಿಯಲ್ಲಿ ನಿಮ್ಮನ್ನು ಸಂಹರಿಸುವೆನು” ಎಂದು ಹೇಳಿದನು.


ನೀವು ಹಠಮಾರಿಗಳೆಂದು ನಾನು ಬಲ್ಲೆನು. ನಾನು ನಿಮ್ಮೊಂದಿಗೆ ಇದ್ದಾಗಲೇ ನೀವು ಯೆಹೋವನಿಗೆ ವಿಧೇಯರಾಗಲಿಲ್ಲ. ಆದ್ದರಿಂದ ನಾನು ಸತ್ತ ಬಳಿಕ ಆತನ ಮಾತುಗಳನ್ನು ನೀವು ಕೇಳುವುದಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತು.


ನಿಮ್ಮ ಪೂರ್ವಿಕರ ಹಾಗೆ ಮೊಂಡರಾಗಿರಬೇಡಿ. ನೀವು ಪೂರ್ಣಮನಸ್ಸಿನಿಂದ ದೇವರಿಗೆ ವಿಧೇಯರಾಗಿರಿ. ಆತನ ಶಾಶ್ವತವಾದ ಮಹಾಪವಿತ್ರಸ್ಥಳಕ್ಕೆ ಬನ್ನಿರಿ. ನಿಮ್ಮ ದೇವರಾದ ಯೆಹೋವನನ್ನು ಆರಾಧಿಸಿರಿ ಮತ್ತು ಆತನ ಸೇವೆಮಾಡಿರಿ. ಆಗ ನಿಮ್ಮ ಮೇಲಿರುವ ಆತನ ಕೋಪವು ಶಮನವಾಗುವುದು.


ನಿಮ್ಮ ದೇವರಾದ ಯೆಹೋವನು ಆ ಉತ್ತಮವಾದ ದೇಶವನ್ನು ನಿಮಗೆ ವಾಸಿಸಲು ಕೊಡುವನು. ನೀವು ಒಳ್ಳೆಯವರು ಎಂಬುದಾಗಿ ಅಲ್ಲ. ನಿಜವಾಗಿ ಹೇಳಬೇಕಾದರೆ ನೀವು ಹಠಮಾರಿಗಳು.


ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


ಜನರು ತಮ್ಮ ಮಕ್ಕಳಿಗೆ ದೇವರ ಆಜ್ಞೆಗಳನ್ನು ಉಪದೇಶಿಸಿದರೆ, ಮಕ್ಕಳು ತಮ್ಮ ಪೂರ್ವಿಕರಂತಾಗುವುದಿಲ್ಲ. ಅವರ ಪೂರ್ವಿಕರು ದೇವರಿಗೆ ವಿಮುಖರಾಗಿ ಆತನಿಗೆ ವಿಧೇಯರಾಗಲಿಲ್ಲ. ಅವರು ಮೊಂಡರಾಗಿದ್ದರು. ಅವರು ದೇವರಿಗೆ ನಂಬಿಗಸ್ತರಾಗಿರಲಿಲ್ಲ.


ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.


“ಆದ್ದರಿಂದ ಹಠಮಾರಿಗಳಾಗಬೇಡಿರಿ. ನಿಮ್ಮ ಹೃದಯಗಳನ್ನು ಯೆಹೋವನಿಗೆ ಕೊಡಿರಿ.


ಇಸ್ರೇಲ್ ಜನಾಂಗದಲ್ಲಿ ಅತೀ ಭಯಂಕರ ಸಂಗತಿಗಳನ್ನು ನಾನು ನೋಡಿರುತ್ತೇನೆ. ಎಫ್ರಾಯೀಮು ದೇವರಿಗೆ ದ್ರೋಹಿಯಾದನು. ಇಸ್ರೇಲು ಪಾಪದಿಂದ ಹೊಲಸಾಗಿದೆ.


ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”


“ಈ ಜನರು ಇನ್ನೆಷ್ಟು ಕಾಲದವರೆಗೆ ನನ್ನನ್ನು ತಿರಸ್ಕರಿಸುವರು? ನಾನು ಮಾಡಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನೆಷ್ಟು ಕಾಲದವರೆಗೆ ನನ್ನನ್ನು ನಂಬದೆ ಇರುವರು?


ಆದರೆ ಅವರು ಯೆಹೋವನ ಮಾತುಗಳಿಗೆ ಕಿವಿಗೊಡಲಿಲ್ಲ; ತಮ್ಮ ದೇವರಾದ ಯೆಹೋವನನ್ನು ನಂಬದೆಹೋದ ತಮ್ಮ ಪೂರ್ವಿಕರನ್ನೇ ಅನುಸರಿಸಿದರು.


ನಮ್ಮ ಪೂರ್ವಿಕರು ಹೆಮ್ಮೆಯಿಂದ ತುಂಬಿದರು; ಅವರು ಹಠಮಾರಿಗಳಾದರು; ನಿನ್ನ ಆಜ್ಞೆಯನ್ನು ಪರಿಪಾಲಿಸಲು ನಿರಾಕರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು