Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:1 - ಪರಿಶುದ್ದ ಬೈಬಲ್‌

1 ತರುವಾಯ ಯೆಹೋವನು ಮೋಶೆಗೆ, “ನೀನು ಮತ್ತು ಈಜಿಪ್ಟಿನಿಂದ ನೀನು ಕರೆದುಕೊಂಡು ಬಂದ ಜನರು ಈ ಸ್ಥಳವನ್ನು ಬಿಡಬೇಕು. ನಾನು ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ ದೇಶಕ್ಕೆ ಹೋಗಿ. ನಾನು ಅವರಿಗೆ ‘ನಿಮ್ಮ ನಂತರ ಜೀವಿಸುವ ನಿಮ್ಮ ಸಂತತಿಯವರಿಗೆ ಆ ದೇಶವನ್ನು ಕೊಡುವೆನು’ ಎಂದು ನಾನು ಅವರಿಗೆ ವಾಗ್ದಾನ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೋಶೆಗೆ ಸರ್ವೇಶ್ವರ ಸ್ವಾಮಿ ಹೇಳಿದ ಮಾತುಗಳಿವು: “ನೀನು ಈಜಿಪ್ಟಿನಿಂದ ಕರೆದುತಂದ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳಬಿಟ್ಟು ತೆರಳು. ನಾನು ಅಬ್ರಹಾಮ್, ಇಸಾಕ್, ಯಕೋಬ್ ಎಂಬುವರೊಡನೆ ಅವನ ಸಂತತಿಯವರಿಗೆ ಕೊಡುವುದಾಗಿ ಪ್ರಮಾಣ ಮಾಡಿದ ನಾಡಿಗೆ ಹೊರಟುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಐಗುಪ್ತದೇಶದಿಂದ ಕರತಂದ ಜನರನ್ನು ನಿನ್ನ ಸಂಗಡ ಕರಕೊಂಡು ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ - ನಿಮ್ಮ ಸಂತತಿಯವರಿಗೆ ಕೊಡುವೆನೆಂದು ಪ್ರಮಾಣ ಮಾಡಿ ಕೊಟ್ಟ ದೇಶಕ್ಕೆ ಹೊರಟುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ, ‘ನಿಮ್ಮ ಸಂತತಿಯವರಿಗೆ ಅದನ್ನು ಕೊಡುವೆನು,’ ಎಂದು ಹೇಳಿ ಪ್ರಮಾಣ ಮಾಡಿದ ದೇಶಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:1
18 ತಿಳಿವುಗಳ ಹೋಲಿಕೆ  

ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.


ಅದೇ ಸಮಯದಲ್ಲಿ ಯೆಹೋವನು ಮೋಶೆಗೆ, “ಬೆಟ್ಟದಿಂದ ಇಳಿದುಹೋಗು. ನೀನು ಈಜಿಪ್ಟಿನಿಂದ ಕರೆದುಕೊಂಡು ಬಂದ ನಿನ್ನ ಜನರು ಭಯಂಕರವಾದ ಪಾಪ ಮಾಡಿದ್ದಾರೆ.


ನಾನು ನಿನ್ನ ಸಂಗಡವಿದ್ದು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಕುಟುಂಬಕ್ಕೂ ಈ ಪ್ರದೇಶಗಳನ್ನೆಲ್ಲ ಕೊಡುವೆನು. ನಾನು ನಿನ್ನ ತಂದೆಯಾದ ಅಬ್ರಹಾಮನಿಗೆ ಪ್ರಮಾಣ ಮಾಡಿದ್ದನ್ನು ನೆರವೇರಿಸುವೆನು.


ಆದ್ದರಿಂದ ಈಗ ಕೆಳಗಿಳಿದು ನಾನು ನಿನಗೆ ಹೇಳುವಲ್ಲಿಗೆ ಜನರನ್ನು ನಡಿಸು. ನನ್ನ ದೂತನು ನಿನ್ನ ಮುಂದೆ ಹೋಗಿ ನಿನ್ನನ್ನು ನಡಿಸುವನು. ಪಾಪಮಾಡಿದ ಜನರನ್ನು ಶಿಕ್ಷಿಸುವ ಸಮಯ ಬಂದಾಗ ಅವರು ಶಿಕ್ಷಿಸಲ್ಪಡುವರು” ಎಂದು ಹೇಳಿದನು.


ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.


ಆದರೆ ಜನರು ನೀರಿಲ್ಲದೆ ಬಹಳ ಬಾಯಾರಿಕೆಗೆ ಒಳಗಾಗಿದ್ದರು. ಆದ್ದರಿಂದ ಅವರು ಮೋಶೆಯ ಮೇಲೆ ಗುಣುಗುಟ್ಟುತ್ತಿದ್ದರು. “ನೀನು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದದ್ದೇಕೆ? ನಾವು, ನಮ್ಮ ಮಕ್ಕಳು ಮತ್ತು ನಮ್ಮ ದನಕರುಗಳೆಲ್ಲಾ ನೀರಿಲ್ಲದೆ ಸಾಯುವುದಕ್ಕೆ ನೀನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯಾ?” ಎಂದು ಅವರು ಕೇಳಿದರು.


ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.


ಆದ್ದರಿಂದ ಮೋಶೆಯು ಜನರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ಅವನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಈಜಿಪ್ಟಿನಲ್ಲಿಯೂ ಕೆಂಪುಸಮುದ್ರದಲ್ಲಿಯೂ ಮತ್ತು ನಲವತ್ತು ವರ್ಷಗಳ ಕಾಲ ಅರಣ್ಯದಲ್ಲಿಯೂ ಮಾಡಿದನು.


ಅಬ್ರಹಾಮನ ಕಾಲದಲ್ಲಿ ಬಂದಿದ್ದ ಕ್ಷಾಮದಂತೆ ಮತ್ತೊಂದು ಕ್ಷಾಮವು ಕಾನಾನ್ ದೇಶಕ್ಕೆ ಬಂದಿತು. ಆದ್ದರಿಂದ ಇಸಾಕನು ಫಿಲಿಷ್ಟಿಯರ ರಾಜನಾದ ಅಬೀಮೆಲೆಕನ ಬಳಿಗೆ ಹೋದನು. ಅಬೀಮೆಲೆಕನು ಗೆರಾರ್ ನಗರದಲ್ಲಿದ್ದನು.


ಯಾಕೋಬನು ಬೇರ್ಷೆಬವನ್ನು ಬಿಟ್ಟು ಹಾರಾನಿಗೆ ಹೋದನು.


ನೀವು ಅವರ ದೇಶವನ್ನು ಪಡೆಯುವಿರಿ ಎಂದು ನಾನು ನಿಮಗೆ ಹೇಳಿದ್ದೇನೆ. ನಾನು ಅವರ ದೇಶವನ್ನು ನಿಮಗೆ ಕೊಡುವೆ. ಅದು ನಿಮ್ಮ ದೇಶವಾಗಿರುವದು. ಅದು ಅನೇಕ ಒಳ್ಳೆ ಸಂಗತಿಗಳಿಂದ ತುಂಬಿದ ದೇಶವಾಗಿದೆ. ನಾನು ನಿಮ್ಮ ದೇವರಾಗಿರುವ ಯೆಹೋವನು! “ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿಕೊಂಡಿದ್ದೇನೆ. ನಾನು ನಿಮ್ಮನ್ನು ಇತರ ಜನರಿಂದ ಆರಿಸಿಕೊಂಡಿದ್ದೇನೆ.


ನಾನು ಇವರಿಗೆ ಹೆತ್ತ ತಾಯಿಯೋ? ನಾನು ಅವರಿಗೆ ಜನ್ಮ ಕೊಡಲಿಲ್ಲವೆಂದು ನಿನಗೆ ಗೊತ್ತಿದೆ. ದಾದಿಯು ಮಗುವನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ನಾನು ನನ್ನ ಮಡಿಲಲ್ಲಿ ಇಟ್ಟು, ನೀನು ಅವರ ಪೂರ್ವಿಕರಿಗೆ ವಾಗ್ದಾನಮಾಡಿರುವ ದೇಶಕ್ಕೆ ಎತ್ತಿಕೊಂಡು ಹೋಗುವಂತೆ ನೀನು ನನಗೇಕೆ ಹೇಳುವೆ?


ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’”


ಯೋಸೇಫನಿಗೆ ಸಾವು ಸಮೀಪಿಸಿದಾಗ ಅವನು ತನ್ನ ಸಹೋದರರಿಗೆ, “ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ನಿಮ್ಮನ್ನು ಪೋಷಿಸುವವನು ದೇವರೆಂಬುದು ನಿಮಗೆ ತಿಳಿದಿರಲಿ. ಆತನು ಈ ದೇಶದಿಂದ ನಿಮ್ಮನ್ನು ಕರೆದುಕೊಂಡು ಹೋಗಿ ಅಬ್ರಹಾಮನಿಗೂ ಇಸಾಕನಿಗೂ ಮತ್ತು ಯಾಕೋಬನಿಗೂ ವಾಗ್ದಾನ ಮಾಡಿದ್ದ ದೇಶವನ್ನು ಕೊಡುವನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು