Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:11 - ಪರಿಶುದ್ದ ಬೈಬಲ್‌

11 ಯೆಹೋವನು ಮೋಶೆಯೊಂದಿಗೆ ಮುಖಾಮುಖಿಯಾಗಿ ಮಾತಾಡುತ್ತಿದ್ದನು. ಒಬ್ಬನು ತನ್ನ ಸ್ನೇಹಿತನೊಂದಿಗೆ ಮಾತಾಡುವಂತೆ ಯೆಹೋವನು ಮೋಶೆಯೊಂದಿಗೆ ಮಾತಾಡುತ್ತಿದ್ದನು. ಯೆಹೋವನೊಂದಿಗೆ ಮಾತಾಡಿದ ನಂತರ ಮೋಶೆಯು ಪಾಳೆಯಕ್ಕೆ ಮರಳಿ ಹೋಗುತ್ತಿದ್ದನು. ನೂನನ ಮಗನೂ ಯೌವನಸ್ಥನೂ ಆಗಿದ್ದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯು ಗುಡಾರವನ್ನು ಬಿಟ್ಟುಹೋದಾಗ ಯೆಹೋಶುವನು ಗುಡಾರದಲ್ಲಿಯೇ ಇರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಒಬ್ಬ ಮನುಷ್ಯ ತನ್ನ ಗೆಳೆಯನೊಡನೆ ಹೇಗೆ ಮಾತಾಡುತ್ತಾನೋ ಹಾಗೆಯೇ ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದರು. ತರುವಾಯ ಮೋಶೆ ಪಾಳೆಯಕ್ಕೆ ಮರಳಿ ಬರುತ್ತಿದ್ದನು. ಆದರೆ ನೂನನ ಮಗನಾದ ಯೆಹೋಶುವ ಎಂಬ ಹೆಸರುಳ್ಳ ಯುವಕನೊಬ್ಬನು ಮೋಶೆಯ ಶಿಷ್ಯನಾಗಿ ಆ ಗುಡಾರದಲ್ಲೇ ಇರುತ್ತಿದ್ದನು. ಅದನ್ನು ಬಿಟ್ಟು ಹೋಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮನುಷ್ಯರೊಳಗೆ ಒಬ್ಬನು ತನ್ನ ಸ್ನೇಹಿತನೊಡನೆ ಹೇಗೆ ಮಾತಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದನು; ತರುವಾಯ ಮೋಶೆ ಪಾಳೆಯಕ್ಕೆ ತಿರಿಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಹೆಸರುಳ್ಳ ಯೌವನಸ್ಥನಾದ ಅವನ ಶಿಷ್ಯನು ಆ ಡೇರೆಯಲ್ಲೇ ಇದ್ದನು; ಅದರ ಬಳಿಯಿಂದ ಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಯೆಹೋವ ದೇವರು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದರು. ತರುವಾಯ ಅವನು ಪಾಳೆಯಕ್ಕೆ ಹಿಂದಿರುಗಿ ಹೋಗುತ್ತಿದ್ದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವನೆಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:11
19 ತಿಳಿವುಗಳ ಹೋಲಿಕೆ  

ನಾನು ಅವನೊಂದಿಗೆ ಗೂಡಾರ್ಥದಿಂದ ಮಾತಾಡದೆ ನೇರವಾಗಿಯೂ ಸ್ಪಷ್ಟವಾಗಿಯೂ ಮಾತಾಡುತ್ತೇನೆ. ಅವನು ನನ್ನ ಸ್ವರೂಪವನ್ನೇ ನೋಡಬಲ್ಲನು. ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡಲು ನೀವು ಯಾಕೆ ಭಯಪಡಲಿಲ್ಲ?” ಎಂದು ಹೇಳಿದನು.


ಮೋಶೆಯಂತ ಪ್ರವಾದಿಯು ಇಸ್ರೇಲರಿಗೆ ದೊರೆಯಲೇ ಇಲ್ಲ. ಯೆಹೋವನು ಅವನೊಂದಿಗೆ ಮುಖಾಮುಖಿಯಾಗಿ ಮಾತನಾಡಿದನು.


ಮೋಶೆಯು ಗುಡಾರದೊಳಕ್ಕೆ ಹೋದಾಗ ಎತ್ತರವಾದ ಮೇಘಸ್ತಂಭವು ಯಾವಾಗಲೂ ಕೆಳಗಿಳಿಯುತ್ತಿತ್ತು. ಆ ಮೇಘಸ್ತಂಭವು ಗುಡಾರದ ದ್ವಾರದಲ್ಲಿ ನಿಲ್ಲುತ್ತಿತ್ತು. ಹೀಗೆ ಯೆಹೋವನು ಮೋಶೆಯೊಡನೆ ಮಾತಾಡುತ್ತಿದ್ದನು.


ಆದ್ದರಿಂದ ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಡನೆ ಎದ್ದುನಿಂತು ದೇವರ ಬೆಟ್ಟದ ಮೇಲಕ್ಕೆ ಹೋದನು.


ಆ ಪರ್ವತದಲ್ಲಿ ಯೆಹೋವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಬೆಂಕಿಯೊಳಗಿಂದ ನಿಮ್ಮೊಂದಿಗೆ ಮಾತಾಡಿರುತ್ತಾನೆ.


ಆದ್ದರಿಂದ ಯಾಕೋಬನು, “ಈ ಸ್ಥಳದಲ್ಲಿ ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ ನನ್ನ ಜೀವ ಉಳಿಯಿತು” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ಹೀಗೆ ಪವಿತ್ರಗ್ರಂಥದ ಈ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.” ಅಬ್ರಹಾಮನನ್ನು “ದೇವರ ಸ್ನೇಹಿತ” ನೆಂದು ಕರೆಯಲಾಯಿತು.


ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ, “ನಮ್ಮ ಸ್ನೇಹಿತನಾದ ಲಾಜರನು ಈಗ ನಿದ್ರಿಸುತ್ತಿದ್ದಾನೆ. ಅವನನ್ನು ಎಬ್ಬಿಸಲು ನಾನು ಅಲ್ಲಿಗೆ ಹೋಗುತ್ತಿದ್ದೇನೆ” ಎಂದು ಹೇಳಿದನು.


ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಈ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ.


“ನಾನೇ ಕರ್ತನು. ಯೆಹೋವನೆಂಬುದೇ ನನ್ನ ಹೆಸರು. ನನ್ನ ಮಹಿಮೆಯನ್ನು ನಾನು ಇತರರಿಗೆ ಕೊಡೆನು. ನನಗೆ ಸಲ್ಲತಕ್ಕ ಮಹಿಮೆಯನ್ನು ಸುಳ್ಳುದೇವರ ವಿಗ್ರಹಗಳಿಗೆ ಬಿಟ್ಟುಕೊಡೆನು.


ಒಬ್ಬನು ತನ್ನ ಸ್ನೇಹಿತನಿಗಾಗಿ ಬೇಡಿಕೊಳ್ಳುವಂತೆ ನನ್ನ ಕಣ್ಣೀರು ನನ್ನ ಪರವಾಗಿ ದೇವರ ಮುಂದೆ ವಾದ ಮಾಡುತ್ತದೆ.


ನೀನೇ ನಮ್ಮ ದೇವರಾಗಿರುವೆ. ನೀನು ಈ ದೇಶದಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿ ಈ ದೇಶವನ್ನು ಅಬ್ರಹಾಮನ ಸಂತತಿಯವರಾದ ಇಸ್ರೇಲರಿಗೆ ಕೊಟ್ಟೆ. ಅಬ್ರಹಾಮನು ನಿನ್ನ ಸ್ನೇಹಿತನಾಗಿದ್ದನು.


ಇಸ್ರೇಲರ ಗದ್ದಲವನ್ನೂ ಕೂಗಾಟವನ್ನೂ ಯೆಹೋಶುವನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಯುದ್ಧದ ಧ್ವನಿ ಕೇಳಿಬರುತ್ತಿದೆ” ಅಂದನು.


ಆದ್ದರಿಂದ ಮೋಶೆ ಯೆಹೋಶುವನಿಗೆ, “ಕೆಲವು ಪುರುಷರನ್ನು ಆರಿಸಿಕೊಂಡು, ನಾಳೆ ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ಬೆಟ್ಟದ ತುದಿಯಲ್ಲಿ ನಿಂತು ಗಮನಿಸುವೆನು, ದೇವರು ನನಗೆ ಕೊಟ್ಟ ಊರುಗೋಲನ್ನು ನಾನು ಹಿಡಿದುಕೊಂಡಿರುವೆನು” ಎಂದು ಹೇಳಿದನು.


ಗುಡಾರದ ದ್ವಾರದಲ್ಲಿ ಮೇಘಸ್ತಂಭವಿರುವುದನ್ನು ಜನರು ನೋಡಿದಾಗ, ಅವರು ತಮ್ಮ ಸ್ವಂತ ಡೇರೆಗಳ ದ್ವಾರದಲ್ಲಿ ತಲೆಬಾಗಿ ಯೆಹೋವನನ್ನು ಆರಾಧಿಸುತ್ತಿದ್ದರು.


ನೂನನ ಮಗನಾದ ಯೆಹೋಶುವನು ಮೋಶೆಗೆ, “ಸ್ವಾಮೀ, ನೀನು ಅವರನ್ನು ತಡೆಯಬೇಕು” ಎಂದನು. (ಯೆಹೋಶುವನು ಯೌವನಸ್ಥನಾಗಿದ್ದಾಗಿನಿಂದಲೂ ಮೋಶೆಯ ಸಹಾಯಕನಾಗಿದ್ದನು.)


ಆದರೆ ಮೋಶೆಯೊಡನೆ ನಾನು ಆ ರೀತಿ ಮಾಡುವುದಿಲ್ಲ. ಮೋಶೆಯು ನನ್ನ ನಂಬಿಗಸ್ತನಾದ ಸೇವಕನು. ಅವನ ಮೇಲೆ ನನಗೆ ಭರವಸೆಯಿದೆ.


ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು