ವಿಮೋಚನಕಾಂಡ 33:12 - ಪರಿಶುದ್ದ ಬೈಬಲ್12 ಮೋಶೆಯು ಯೆಹೋವನಿಗೆ, “ಈ ಜನರನ್ನು ಮುನ್ನಡೆಸಬೇಕೆಂದು ನೀನು ನನಗೆ ಹೇಳಿರುವೆ. ಆದರೆ ನನ್ನೊಂದಿಗೆ ಯಾರನ್ನು ಕಳುಹಿಸುತ್ತೀಯೆಂದು ನೀನು ಹೇಳಲಿಲ್ಲ. ನೀನು ನನಗೆ, ‘ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಾನು ನಿನ್ನನ್ನು ಮೆಚ್ಚಿದ್ದೇನೆ’ ಎಂದು ಹೇಳಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮೋಶೆ ಸರ್ವೇಶ್ವರ ಸ್ವಾಮಿಗೆ, ” ಈ ಜನರನ್ನು ಇಂಥ ಈ ನಾಡಿಗೆ ನಡೆಸಿಕೊಂಡು ಹೋಗಬೇಕೆಂದು ನನಗೆ ನೀವು ವಿಧಿಸಿದಿರಿ. ನನ್ನ ಸಂಗಡ ಬೇರೆ ಯಾರನ್ನು ಕಳುಹಿಸುವಿರೆಂದು ನನಗೆ ತಿಳಿಸಲಿಲ್ಲ. ‘ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ. ನಿನಗೆ ನನ್ನ ದಯೆ ದೊರಕಿದೆ,’ ಎಂದು ಹೇಳಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮೋಶೆ ಯೆಹೋವನಿಗೆ - ಈ ಜನರನ್ನು ಆ ಸೀಮೆಗೆ ನಡಿಸಿಕೊಂಡುಹೋಗಬೇಕೆಂದು ನೀನು ನನಗೆ ಆಜ್ಞಾಪಿಸಿದಿಯಷ್ಟೆ; ನನ್ನ ಸಂಗಡ ಯಾರನ್ನು ಕಳುಹಿಸುವಿಯೋ ಅದನ್ನು ನನಗೆ ತಿಳಿಸಲಿಲ್ಲ. ನಿನ್ನ ಹೆಸರನ್ನು ಗೊತ್ತುಮಾಡಿದ್ದೇನೆಂದೂ ನಿನಗೆ ನನ್ನ ದಯೆ ದೊರಕಿತೆಂದೂ ನೀನು ನನಗೆ ಹೇಳಿದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮೋಶೆಯು ಯೆಹೋವ ದೇವರಿಗೆ, “ ‘ಈ ಜನರನ್ನು ನಡೆಸಿಕೊಂಡು ಹೋಗು,’ ಎಂದು ನನಗೆ ಹೇಳುತ್ತಿರುವಿರಿ. ಯಾರನ್ನು ನನ್ನ ಸಂಗಡ ಕಳುಹಿಸುವಿರಿ, ಎಂದು ನೀವು ನನಗೆ ತಿಳಿಸಲಿಲ್ಲ. ಆದರೂ ನೀವು ನನಗೆ, ‘ನಾನು ನಿನ್ನನ್ನು ನಿನ್ನ ಹೆಸರಿನ ಮೂಲಕ ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆಯಿತು,’ ಎಂದೂ ಹೇಳಿದ್ದೀರಲ್ಲಾ. ಅಧ್ಯಾಯವನ್ನು ನೋಡಿ |