ವಿಮೋಚನಕಾಂಡ 33:16 - ಪರಿಶುದ್ದ ಬೈಬಲ್16 ಮಾತ್ರವಲ್ಲದೆ ನನಗೂ ಈ ಜನರಿಗೂ ನಿನ್ನ ದಯೆ ದೊರಕಿದೆಯೆಂದು ನಾವು ತಿಳಿದುಕೊಳ್ಳುವುದಾದರೂ ಹೇಗೆ? ನೀನು ನಮ್ಮೊಡನೆ ಬಂದರೆ, ಆಗ ನಾವು ಇದನ್ನು ಖಚಿತವಾಗಿ ತಿಳಿದುಕೊಳ್ಳುವೆವು. ನೀನು ನಮ್ಮೊಡನೆ ಬಾರದಿದ್ದರೆ, ಆಗ ನಮಗೂ ಭೂಮಿಯ ಮೇಲಿರುವ ಇತರ ಜನರಿಗೂ ಯಾವ ವ್ಯತ್ಯಾಸವಿರುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನನಗೂ ನಿಮ್ಮ ಪ್ರಜೆಗಳಾದ ಇವರಿಗೂ ನಿಮ್ಮ ಅನುಗ್ರಹ ದೊರಕಿದೆ ಎಂಬುದು ನೀವೇ ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದೀತು? ನೀವು ಬರುವುದರಿಂದ ನಾನೂ ನಿಮ್ಮ ಪ್ರಜೆಗಳಾದ ಇವರೂ ಜಗದಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶಿಷ್ಟರಾದವರೆಂಬುದು ಖಚಿತವಾಗುವುದು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ಅನುಗ್ರಹ ದೊರಕಿತೆಂಬದು ನೀನೇ ನಮ್ಮ ಸಂಗಡ ಬರುವದರಿಂದಲೇ ಹೊರತು ಬೇರೆ ಯಾತರಿಂದ ತಿಳಿದುಬರುವದು? ಇದರಿಂದ ನಾನೂ ನಿನ್ನ ಪ್ರಜೆಗಳಾದ ಇವರೂ ಭೂವಿುಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷವಾಗಿದ್ದೇವೆಂಬದು ತೋರುವದು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಏಕೆಂದರೆ ನನಗೂ ನಿಮ್ಮ ಜನರಿಗೂ ನಿಮ್ಮ ದೃಷ್ಟಿಯಲ್ಲಿ ದಯೆ ದೊರಕಿತೆಂದು ಯಾವುದರಿಂದ ತಿಳಿದುಬರುವುದು? ನೀವು ನನ್ನೊಂದಿಗೆ ಹೋಗುವುದರಿಂದಲ್ಲವೋ? ಹೀಗೆ ನಾನೂ ನಿಮ್ಮ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕವಾಗಿರುವೆವು,” ಎಂದನು. ಅಧ್ಯಾಯವನ್ನು ನೋಡಿ |
“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.
ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!