Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:21 - ಪರಿಶುದ್ದ ಬೈಬಲ್‌

21 “ಇಲ್ಲಿ ಒಂದು ಬಂಡೆ ಇದೆ. ನೀನು ಆ ಬಂಡೆಯ ಮೇಲೆ ನಿಂತುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮತ್ತು ಯೆಹೋವನು ಅವನಿಗೆ, “ನೋಡು, ಇಲ್ಲಿ ನನ್ನ ಸಮೀಪದಲ್ಲೇ ಒಂದು ಸ್ಥಳವಿದೆ. ನೀನು ಈ ಬಂಡೆಯ ಮೇಲೆಯೇ ನಿಂತುಕೊಂಡಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇನ್ನೂ ಮೋಶೆಗೆ, “ಇಗೋ ಇಲ್ಲಿ ಸಮೀಪದಲ್ಲೇ ಒಂದು ಸ್ಥಳವಿದೇ. ನೀನು ಆ ಬಂಡೆಯ ಮೇಲೆ ನಿಂತಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮತ್ತು ಯೆಹೋವನು ಅವನಿಗೆ - ಇಲ್ಲಿ ನನ್ನ ಸಮೀಪದಲ್ಲೇ ಒಂದು ಸ್ಥಳವಿದೆ; ನೀನು ಈ ಬಂಡೆಯ ಮೇಲೆಯೇ ನಿಂತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಯೆಹೋವ ದೇವರು, “ನನ್ನ ಬಳಿಯಲ್ಲಿ ಒಂದು ಸ್ಥಳವಿದೆ. ನೀನು ಬಂಡೆಯ ಮೇಲೆ ನಿಂತುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:21
11 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಹೇಳುವ ರೀತಿಯಲ್ಲಿ ಜೀವಿಸು. ನಾನು ಹೇಳುವ ರೀತಿಯಲ್ಲಿ ನಡೆ. ನೀನು ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ಅಂಕಣಗಳನ್ನು ನೀನು ನೋಡಿಕೊಳ್ಳುವೆ. ಇಲ್ಲಿ ನಿಂತಿರುವವರೊಂದಿಗೆ ನೀನು ಪ್ರವೇಶಿಸಬಹುದು.


“ಆಶ್ರಯನಗರಕ್ಕೆ ಓಡಿಹೋದವನು ಆ ಪಟ್ಟಣದ ಪ್ರವೇಶದ್ವಾರದಲ್ಲಿ ನಿಂತು ಅಲ್ಲಿಯ ಜನನಾಯಕರಿಗೆ ನಡೆದ ಸಂಗತಿಯನ್ನು ತಿಳಿಸಲಿ. ಆಗ ನಾಯಕರು ಅವನಿಗೆ ನಗರವನ್ನು ಪ್ರವೇಶಿಸಲು ಅನುಮತಿ ಕೊಡಲಿ; ತಮ್ಮ ಜೊತೆಯಲ್ಲಿ ವಾಸಿಸಲು ಒಂದು ಸ್ಥಳವನ್ನು ಕೊಡಲಿ.


ಆದರೆ ಮೋಶೆಯೇ, ನೀನು ನನ್ನ ಬಳಿಯಲ್ಲಿಯೇ ನಿಂತಿರು. ನೀನು ಅವರಿಗೆ ಉಪದೇಶಿಸಬೇಕಾಗಿರುವ ಎಲ್ಲಾ ಆಜ್ಞೆಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ನಾನು ನಿನಗೆ ತಿಳಿಸುತ್ತೇನೆ. ಅವರ ವಾಸಕ್ಕಾಗಿ ನಾನು ಕೊಡಲಿರುವ ದೇಶದಲ್ಲಿ ಅವರು ಇವುಗಳೆಲ್ಲವನ್ನು ಪರಿಪಾಲಿಸಬೇಕು.’


ಅನೇಕ ಸುಂಕವಸೂಲಿಗಾರರು ಮತ್ತು ಪಾಪಿಗಳು ಯೇಸುವಿನ ಉಪದೇಶವನ್ನು ಕೇಳಲು ಬಂದಿದ್ದರು.


ಎಲೀಯನು ಅಲ್ಲಿನ ಒಂದು ಗುಹೆಗೆ ಹೋಗಿ ರಾತ್ರಿಯೆಲ್ಲಾ ಅಲ್ಲಿ ಕಳೆದನು. ಆಗ ಯೆಹೋವನು ಎಲೀಯನೊಂದಿಗೆ ಮಾತನಾಡಿ, “ಎಲೀಯನೇ, ನೀನು ಇಲ್ಲಿರುವುದೇಕೆ?” ಎಂದು ಕೇಳಿದನು.


ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣಾಬಲವೂ ನನ್ನ ದುರ್ಗವೂ ಆಗಿದ್ದಾನೆ.


ಯೆಹೋವನು ಜೀವಸ್ವರೂಪನಾಗಿದ್ದಾನೆ. ನನ್ನ ಬಂಡೆಯಾಗಿರುವ ಆತನನ್ನು ಸ್ತುತಿಸುವೆನು. ನನ್ನನ್ನು ರಕ್ಷಿಸುವ ದೇವರು ಮಹೋನ್ನತನಾಗಿದ್ದಾನೆ.


ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ; ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ. ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು.


ನಾನೆಲ್ಲೇ ಇದ್ದರೂ, ಎಷ್ಟೇ ಬಲಹೀನನಾಗಿದ್ದರೂ ಸಹಾಯಕ್ಕಾಗಿ ನಿನಗೇ ಮೊರೆಯಿಡುವೆನು! ಅತ್ಯುನ್ನತವಾದ ಆಶ್ರಯಗಿರಿಗೆ ನನ್ನನ್ನು ಹತ್ತಿಸು.


ನನ್ನ ರಕ್ಷಣೆಯೂ ಮಾನವೂ ದೇವರೇ. ಆತನೇ ನನಗೆ ಭದ್ರವಾದ ದುರ್ಗವೂ ಆಶ್ರಯಸ್ಥಾನವೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು