ವಿಮೋಚನಕಾಂಡ 33:4 - ಪರಿಶುದ್ದ ಬೈಬಲ್4 ಈ ದುಃಖದ ಸಮಾಚಾರವನ್ನು ಕೇಳಿ ಜನರು ನೊಂದುಕೊಂಡರು. ಅವರಲ್ಲಿ ಒಬ್ಬರಾದರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಸ್ರಾಯೇಲ್ ಜನರು ದೋಷಾರೋಪಣೆಯ ಈ ವಾಕ್ಯವನ್ನು ಕೇಳಿದಾಗ ದುಃಖಪಟ್ಟರು. ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಈ ದುಃಖಕರವಾದ ಮಾತುಗಳನ್ನು ಕೇಳಿ, ಇಸ್ರಯೇಲರು ಶೋಕತಪ್ತರಾದರು; ಒಬ್ಬರೂ ಒಡವೆ ವಸ್ತುಗಳನ್ನು ಧರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಸ್ರಾಯೇಲ್ ಜನರು ಈ ದುಃಖಕರವಾದ ವಾಕ್ಯವನ್ನು ಕೇಳಿ ಮನಗುಂದಿದವರಾದರು; ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಜನರು ಈ ಕಠಿಣವಾದ ಮಾತುಗಳನ್ನು ಕೇಳಿದಾಗ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |
ಅವರು ಸರ್ವಶಕ್ತನಾದ ಯೆಹೋವನ ಆಲಯದಲ್ಲಿದ್ದ ಯಾಜಕರ ಬಳಿಗೂ ಪ್ರವಾದಿಗಳ ಬಳಿಗೂ ಹೋದರು. ಅವರು ಹೀಗೆ ಪ್ರಶ್ನೆ ಕೇಳಿದರು: “ಅನೇಕ ವರ್ಷಗಳಿಂದ ಆಲಯವು ಕೆಡವಲ್ಪಟ್ಟದ್ದಕ್ಕಾಗಿ ನಮ್ಮ ದುಃಖವನ್ನು ತೋರಿಸಿದೆವು. ಪ್ರತೀ ವರ್ಷದ ಐದನೇ ತಿಂಗಳಿನಲ್ಲಿ ಉಪವಾಸಕ್ಕಾಗಿ ಮತ್ತು ರೋದಿಸುವುದಕ್ಕಾಗಿ ನಾವು ಪ್ರತ್ಯೇಕ ಸಮಯವನ್ನು ನೇಮಿಸುತ್ತಿದ್ದೆವು. ನಾವು ಇದನ್ನು ಹೀಗೆಯೇ ಮುಂದುವರಿಸಬೇಕೋ?”
ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆ ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಆದರೆ ಯೆಹೋವನು ಬೆಂಕಿಯಿಂದ ನಾಶಮಾಡಿದವರ ಬಗ್ಗೆ ಇಸ್ರೇಲರೆಲ್ಲರು ಮತ್ತು ನಿಮ್ಮ ಬಂಧುಗಳು ದುಃಖಿಸಬಹುದು.