ವಿಮೋಚನಕಾಂಡ 33:5 - ಪರಿಶುದ್ದ ಬೈಬಲ್5 ಯೆಹೋವನು ಮೋಶೆಗೆ, “ಇಸ್ರೇಲರಿಗೆ ಹೀಗೆಂದು ಹೇಳು: ನೀವು ಅವಿಧೇಯರಾದ ಜನರಾಗಿದ್ದೀರಿ. ನಾನು ನಿಮ್ಮೊಡನೆ ಕ್ಷಣಹೊತ್ತು ಸಂಚರಿಸಿದರೆ, ನಿಮ್ಮನ್ನು ಸಂಹರಿಸುವೆನು. ಆದ್ದರಿಂದ ನಿಮ್ಮೆಲ್ಲಾ ಆಭರಣಗಳನ್ನು ತೆಗೆದುಬಿಡಿರಿ. ನೀವು ಮಾಡಬೇಕಾದದ್ದನ್ನು ನಾನೇ ತಿಳಿಸುವೆನು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ಮೋಶೆಗೆ ಹೀಗೆಂದನು. “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಮೊಂಡುತನವುಳ್ಳ ಜನರು, ನಾನು ಒಂದು ಕ್ಷಣ ಮಾತ್ರ ನಿಮ್ಮ ಮಧ್ಯದಲ್ಲಿ ಬರುವುದಾದರೆ, ನಾನು ನಿಮ್ಮನ್ನು ನಿರ್ಮೂಲ ಮಾಡಿಬಿಡುವೆನು. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ. ನಿಮಗೆ ನಾನು ಏನು ಮಾಡಬೇಕೆಂಬುದನ್ನು ಆಲೋಚಿಸಿಕೊಳ್ಳುವೆನು’” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಏಕೆಂದರೆ ಮೋಶೆಯ ಮುಖಾಂತರ ಸರ್ವೇಶ್ವರ, “ನೀವು ನನ್ನ ಆಜ್ಞೆಗಳಿಗೆ ಬಗ್ಗದ ಹಟಮಾರಿಗಳು. ನಾನು ಕ್ಷಣಮಾತ್ರ ನಿಮ್ಮೊಡನೆ ಬರುವುದಾದರೆ ನಿರ್ಮೂಲವಾಗಿಬಿಡುವಿರಿ, ಎಚ್ಚರಿಕೆ! ಆದ್ದರಿಂದ ನಿಮ್ಮ ಒಡವೆವಸ್ತುಗಳನ್ನು ತೆಗೆದುಬಿಡಿ. ನಿಮಗೇನು ಮಾಡಬೇಕೆಂದು ಆಲೋಚಿಸುವೆನು,” ಎಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನು ಮೋಶೆಗೆ ಹೀಗಂದನು - ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದದ್ದೇನಂದರೆ - ನೀವು ನನ್ನ ಆಜ್ಞೆಗಳಿಗೆ ಬೊಗ್ಗದವರೇ. ನಾನು ಒಂದು ಕ್ಷಣಮಾತ್ರ ನಿಮ್ಮ ಮಧ್ಯದಲ್ಲಿ ಬರುವದಾದರೆ ನೀವು ನಿರ್ಮೂಲವಾಗಿ ಹೋದೀರಿ, ನೋಡಿಕೊಳ್ಳಿರಿ. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ ನಿಮಗೆ ನಾನು ಏನು ಮಾಡಬೇಕೆಂಬದನ್ನು ಆಲೋಚಿಸಿಕೊಳ್ಳುವೆನು ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ ಯೆಹೋವ ದೇವರು ಮೋಶೆಗೆ, “ಇಸ್ರಾಯೇಲರಿಗೆ ಹೀಗೆ ಹೇಳು: ‘ನೀವು ಆಜ್ಞೆಗಳನ್ನು ಪಾಲಿಸದ ಹಟಮಾರಿ ಜನರು. ನಾನು ಕ್ಷಣಮಾತ್ರವೂ ನಿಮ್ಮೊಡನೆ ಬಂದರೆ ನೀವು ನಿರ್ಮೂಲವಾಗಿಬಿಡುವಿರಿ. ಹೀಗಿರುವುದರಿಂದ ಈಗ ನಿಮ್ಮ ಆಭರಣಗಳನ್ನು ನಿಮ್ಮಿಂದ ತೆಗೆದುಬಿಡಿರಿ, ನಾನು ನಿಮಗೆ ಏನು ಮಾಡಬೇಕೆಂಬುದನ್ನು ತೀರ್ಮಾನಿಸುವೆನು’ ಎಂದು ಹೇಳು,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನು ಈ ನಲವತ್ತು ವರ್ಷಗಳ ಕಾಲ ನಿಮ್ಮನ್ನು ಅರಣ್ಯ ಪ್ರಯಾಣದಲ್ಲಿ ಮೊದಲು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.