Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:9 - ಪರಿಶುದ್ದ ಬೈಬಲ್‌

9 ಮೋಶೆಯು ಗುಡಾರದೊಳಕ್ಕೆ ಹೋದಾಗ ಎತ್ತರವಾದ ಮೇಘಸ್ತಂಭವು ಯಾವಾಗಲೂ ಕೆಳಗಿಳಿಯುತ್ತಿತ್ತು. ಆ ಮೇಘಸ್ತಂಭವು ಗುಡಾರದ ದ್ವಾರದಲ್ಲಿ ನಿಲ್ಲುತ್ತಿತ್ತು. ಹೀಗೆ ಯೆಹೋವನು ಮೋಶೆಯೊಡನೆ ಮಾತಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಶೆಯು ಆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು ಹಾಗು ಯೆಹೋವನು ಮೋಶೆಯ ಸಂಗಡ ಮಾತನಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೋಶೆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವೊಂದು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು. ಆಗ ಮೋಶೆಯ ಸಂಗಡ ಸರ್ವೇಶ್ವರ ಮಾತಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಶೆ ಆ ಡೇರೆಯೊಳಕ್ಕೆ ಹೋದ ಕೂಡಲೆ ಮೇಘಸ್ತಂಭವು ಇಳಿದು ಆ ಡೇರೆಯ ಬಾಗಲಲ್ಲಿ ನಿಲ್ಲುತ್ತಿತ್ತು. ಆಗ ಯೆಹೋವನು ಮೋಶೆಯ ಸಂಗಡ ಮಾತಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮೋಶೆ ಗುಡಾರದೊಳಗೆ ಹೋಗುವಾಗ, ಮೇಘಸ್ತಂಭವು ಪ್ರವೇಶದ್ವಾರದ ಬಳಿಯಲ್ಲಿ ನಿಲ್ಲುತ್ತಿತ್ತು. ಆಗ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:9
17 ತಿಳಿವುಗಳ ಹೋಲಿಕೆ  

ಆತನು ಮೇಘಸ್ತಂಭದಿಂದ ಅವರೊಂದಿಗೆ ಮಾತಾಡಿದನು. ಅವರು ಆಜ್ಞೆಗಳಿಗೆ ವಿಧೇಯರಾದರು. ಆತನು ಅವರಿಗೆ ಧರ್ಮಶಾಸ್ತ್ರವನ್ನು ಕೊಟ್ಟನು.


ಹೀಗೆ, ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡುವುದನ್ನು ಮುಗಿಸಿದನು. ಬಳಿಕ ಯೆಹೋವನು ಒಡಂಬಡಿಕೆ ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಗೆ ಕೊಟ್ಟನು. ಅವು ದೇವರ ಬೆರಳಿನಿಂದ ಲಿಖಿತವಾಗಿತ್ತು.


ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನಗೆ, “ಎದ್ದೇಳು, ಬಯಲು ಸೀಮೆಗೆ ಹೋಗು. ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು.


ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿದ ಆತ್ಮವನ್ನೇ ಅವರ ಮೇಲೆ ಸುರಿಸುವೆನು. ಆಗ ಸ್ವತಃ ನೀನೇ ಈ ಜನರ ಭಾರವನ್ನು ವಹಿಸಬೇಕಾಗಿರುವುದಿಲ್ಲ. ಈ ಎಪ್ಪತ್ತು ಮಂದಿ ಹಿರಿಯರು ಆ ಭಾರವನ್ನು ಹೊರಲು ನಿನಗೆ ಸಹಾಯ ಮಾಡುವರು.


ಮೋಶೆಯು, “ಯೆಹೋವನೇ, ನಿನ್ನ ದಯೆ ನನಗೆ ದೊರಕುವುದಾದರೆ, ದಯವಿಟ್ಟು ನಮ್ಮೊಂದಿಗೆ ಬಾ. ಇವರು ಅವಿಧೇಯರಾದ ಜನರೆಂದು ನಾನು ಬಲ್ಲೆನು. ಆದರೆ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ನಿನ್ನ ಜನರನ್ನಾಗಿ ಸ್ಪೀಕರಿಸು” ಎಂದು ಬೇಡಿಕೊಂಡನು.


ನಿನ್ನೊಂದಿಗೆ ಯಾರೂ ಬರಕೂಡದು. ಬೆಟ್ಟದ ಯಾವ ಸ್ಥಳದಲ್ಲಿಯೂ ಯಾರೂ ಕಾಣಿಸಬಾರದು. ನಿಮ್ಮ ಪಶುಗಳಾಗಲಿ ಕುರಿಮಂದೆಗಳಾಗಲಿ ಬೆಟ್ಟದ ಬುಡದಲ್ಲಿ ಹುಲ್ಲು ಮೇಯಕೂಡದು” ಎಂದು ಹೇಳಿದನು.


ಯೆಹೋವನು ಮೋಶೆಯೊಂದಿಗೆ ಮುಖಾಮುಖಿಯಾಗಿ ಮಾತಾಡುತ್ತಿದ್ದನು. ಒಬ್ಬನು ತನ್ನ ಸ್ನೇಹಿತನೊಂದಿಗೆ ಮಾತಾಡುವಂತೆ ಯೆಹೋವನು ಮೋಶೆಯೊಂದಿಗೆ ಮಾತಾಡುತ್ತಿದ್ದನು. ಯೆಹೋವನೊಂದಿಗೆ ಮಾತಾಡಿದ ನಂತರ ಮೋಶೆಯು ಪಾಳೆಯಕ್ಕೆ ಮರಳಿ ಹೋಗುತ್ತಿದ್ದನು. ನೂನನ ಮಗನೂ ಯೌವನಸ್ಥನೂ ಆಗಿದ್ದ ಯೆಹೋಶುವನು ಮೋಶೆಯ ಸಹಾಯಕನಾಗಿದ್ದನು. ಮೋಶೆಯು ಗುಡಾರವನ್ನು ಬಿಟ್ಟುಹೋದಾಗ ಯೆಹೋಶುವನು ಗುಡಾರದಲ್ಲಿಯೇ ಇರುತ್ತಿದ್ದನು.


ನಾನು ನಿನಗೆ ದರ್ಶನ ಕೊಡುವಾಗ ಒಡಂಬಡಿಕೆ ಪೆಟ್ಟಿಗೆಯ ಮೇಲಿರುವ ಕೆರೂಬಿಗಳ ಮಧ್ಯದಿಂದ ನಿನ್ನ ಸಂಗಡ ಮಾತಾಡುವೆನು; ಇಸ್ರೇಲರಿಗೆ ಆಜ್ಞಾಪಿಸಬೇಕಾದವುಗಳನ್ನು ನಿನಗೆ ತಿಳಿಸುವೆನು.


ಯೆಹೋವನು ಅಬ್ರಹಾಮನೊಂದಿಗೆ ಮಾತಾಡುವುದನ್ನು ಮುಗಿಸಿದ ಮೇಲೆ ಅಲ್ಲಿಂದ ಹೊರಟುಹೋದನು. ಅಬ್ರಹಾಮನು ಸಹ ತನ್ನ ಮನೆಗೆ ಹಿಂತಿರುಗಿದನು.


ದೇವರು ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿದ ಮೇಲೆ ಮೇಲೋಕಕ್ಕೆ ಹೊರಟುಹೋದನು.


ಮೋಶೆಯು ಆ ಗುಡಾರದೊಳಗೆ ಹೋಗುವಾಗ ಜನರೆಲ್ಲರೂ ಅವನನ್ನು ಗಮನಿಸುತ್ತಿದ್ದರು. ಜನರು ತಮ್ಮ ಡೇರೆಗಳ ದ್ವಾರಗಳಲ್ಲಿ ನಿಂತುಕೊಂಡು ಮೋಶೆಯು ದೇವದರ್ಶನಗುಡಾರಕ್ಕೆ ಪ್ರವೇಶಿಸುವವರೆಗೆ ಅವನನ್ನು ಗಮನಿಸುತ್ತಿದ್ದರು.


ಗುಡಾರದ ದ್ವಾರದಲ್ಲಿ ಮೇಘಸ್ತಂಭವಿರುವುದನ್ನು ಜನರು ನೋಡಿದಾಗ, ಅವರು ತಮ್ಮ ಸ್ವಂತ ಡೇರೆಗಳ ದ್ವಾರದಲ್ಲಿ ತಲೆಬಾಗಿ ಯೆಹೋವನನ್ನು ಆರಾಧಿಸುತ್ತಿದ್ದರು.


ಮೋಶೆಯು ಬೆಟ್ಟವನ್ನೇರಿ ಹೋದನಂತರ ಯೆಹೋವನು ಮೇಘದಲ್ಲಿ ಅವನ ಬಳಿಗೆ ಇಳಿದುಬಂದನು. ಯೆಹೋವನು ಮೋಶೆಯೊಡನೆ ಅಲ್ಲಿ ನಿಂತನು ಮತ್ತು ಮೋಶೆಯು ಯೆಹೋವನ ಹೆಸರನ್ನು ಕರೆದನು.


ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.


ಯೆಹೋವನು ಒಂದು ಮೇಘಸ್ತಂಭದಲ್ಲಿ ಪ್ರತ್ಯಕ್ಷನಾದನು. ಆ ಮೇಘಸ್ತಂಭವು ಗುಡಾರದ ಬಾಗಿಲಲ್ಲಿ ಬಂದು ನಿಂತಿತು.


ಮೋಶೆ ಯೆಹೋವನ ಸಂಗಡ ಮಾತಾಡಲು ದೇವದರ್ಶನಗುಡಾರದೊಳಗೆ ಹೋದಾಗ, ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯ ಹೊದಿಕೆಯ ಮೇಲಿದ್ದ ಎರಡು ಕೆರೂಬಿಗಳ ಮಧ್ಯದಿಂದ ಯೆಹೋವನ ಸ್ವರವು ಮೋಶೆಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು