Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:10 - ಪರಿಶುದ್ದ ಬೈಬಲ್‌

10 ಆಗ ಯೆಹೋವನು, “ನಾನು ನಿಮ್ಮೊಂದಿಗೆ ಈ ಒಡಂಬಡಿಕೆಯನ್ನು ಮಾಡುತ್ತಿದ್ದೇನೆ. ಭೂಲೋಕದಲ್ಲಿ ಎಲ್ಲಿಯೇ ಆಗಲಿ ಯಾವ ಜನಾಂಗದಲ್ಲಿಯೇ ಆಗಲಿ ಹಿಂದೆಂದೂ ನಡೆಯದಂತ ಮಹತ್ಕಾರ್ಯಗಳನ್ನು ಮಾಡುವೆನು. ಎಲ್ಲಾ ಜನರು ಮತ್ತು ನಿನ್ನೊಂದಿಗಿರುವ ಜನರು ಇವುಗಳನ್ನು ನೋಡಿ ಯೆಹೋವನಾದ ನಾನೇ ಮಹಾ ಮಹಿಮಸ್ವರೂಪನೆಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಹೇಳಿದ್ದೇನೆಂದರೆ, “ಕೇಳು, ನಾನು ಒಂದು ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ, ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಭಯಂಕರವಾದದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ಮೋಶೆಗೆ, “ಕೇಳು, ನಾನೊಂದು ಒಡಂಬಡಿಕೆಯನ್ನು ಮಾಡುತ್ತೇನೆ. ಜಗದಲ್ಲಿ ಯಾವ ನಾಡಿನಲ್ಲೂ ಯಾವ ಜನಾಂಗದಲ್ಲೂ ನಡೆಯದಂಥ ಮಹಾತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಜನರೆಲ್ಲರು ಸರ್ವೇಶ್ವರನಾದ ನಾನು ಮಾಡುವ ಮಹಾತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಅದ್ಭುತಕರವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಹೇಳಿದ್ದೇನಂದರೆ - ನಾನು ಒಂದು ನಿಬಂಧನೆಯನ್ನು ಸ್ಥಾಪಿಸುತ್ತೇನೆ, ಕೇಳು; ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡಿಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವದು ಭಯಂಕರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದಕ್ಕೆ ಯೆಹೋವ ದೇವರು, “ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿಯಲ್ಲಿಯೂ ಯಾವ ಜನಾಂಗದಲ್ಲಿಯೂ ಹಿಂದೆಂದಿಗೂ ಮಾಡದಿರುವಂಥ ಅದ್ಭುತಗಳನ್ನು ನಿನ್ನ ಎಲ್ಲಾ ಜನರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವೆಯೋ ಆ ಜನರೂ ಯೆಹೋವ ದೇವರ ಕಾರ್ಯವನ್ನು ನೋಡುವರು ಏಕೆಂದರೆ ನಾನು ನಿಮಗೆ ಮಾಡುವಂಥದ್ದು ಭಯಂಕರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:10
28 ತಿಳಿವುಗಳ ಹೋಲಿಕೆ  

ಯೆಹೋವನನ್ನು ಮಾತ್ರ ನೀವು ಸ್ತುತಿಸಬೇಕು. ಆತನೇ ನಿಮ್ಮ ದೇವರು. ಆತನು ನಿಮಗಾಗಿ ಭಯಂಕರವಾದ ಮಹತ್ಕಾರ್ಯಗಳನ್ನು ಮಾಡಿದ್ದಾನೆ. ಅವುಗಳನ್ನು ನೀವು ಕಣ್ಣಾರೆ ಕಂಡಿದ್ದೀರಿ.


ಅದ್ಭುತಕಾರ್ಯಗಳನ್ನು ಮಾಡಿದ ದೇವರು ನೀನೇ. ನೀನು ಜನರಿಗೆ ನಿನ್ನ ಮಹಾಶಕ್ತಿಯನ್ನು ತೋರಿಸಿದೆ.


ಆದರೆ ನೀನು ಹೀಗೆ ಮಾಡುವುದು ನಿಜವಾಗಿಯೂ ನಮಗಿಷ್ಟವಿಲ್ಲ. ಪರ್ವತಗಳು ನಿನ್ನೆದುರು ಕರಗಿಹೋದರೂ


ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ; ಆತನ ಕಾರ್ಯಗಳು ಅತ್ಯದ್ಭುತವಾಗಿವೆ!


ಯೆಹೋವನೇ, ನೀನು ಅದ್ಭುತಕಾರ್ಯಗಳನ್ನು ಮಾಡಿ ನಿನ್ನ ಜನರನ್ನು ಈಜಿಪ್ಟಿನಿಂದ ಇಸ್ರೇಲಿಗೆ ಕರೆದುತಂದೆ. ಇದನ್ನು ಬಲವಾದ ಕೈಗಳಿಂದಲೇ ಮಾಡಿದೆ. ನಿನ್ನ ಸಾಮರ್ಥ್ಯ ಆಶ್ಚರ್ಯಕರವಾದದು.


“ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.


ಈಜಿಪ್ಟಿನ ಸೋನ್ ಪ್ರದೇಶದಲ್ಲಿ ಅವರ ಪೂರ್ವಿಕರಿಗೆ ದೇವರು ತನ್ನ ಮಹಾಶಕ್ತಿಯನ್ನು ತೋರಿಸಿದನು.


ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.


ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ? ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು;


ಯಾಜಕರು ತುತ್ತೂರಿಗಳನ್ನು ಊದಿದಾಗ ಜನರು ಆರ್ಭಟಿಸತೊಡಗಿದರು. ಆಗ ಗೋಡೆಗಳು ಬಿದ್ದವು; ಜನರು ನೇರವಾಗಿ ನಗರದೊಳಗೆ ನುಗ್ಗಿದರು. ಹೀಗೆ ಇಸ್ರೇಲರು ನಗರವನ್ನು ಸ್ವಾಧೀನಪಡಿಸಿಕೊಂಡರು.


ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಹೇಳಿದ ಸಂಗತಿಗಳನ್ನೆಲ್ಲಾ ಬರೆ. ಆ ಸಂಗತಿಗಳು ನಾನು ನಿನ್ನೊಂದಿಗೆ ಮತ್ತು ಇಸ್ರೇಲರೊಂದಿಗೆ ಮಾಡಿದ ಒಡಂಬಡಿಕೆಯಾಗಿದೆ” ಎಂದು ಹೇಳಿದನು.


ನಿನ್ನ ಅತ್ಯಾಶ್ಚರ್ಯಕರವಾದ ಕಾರ್ಯಗಳನ್ನು ಜನರು ಕೊಂಡಾಡುವರು. ನಿನ್ನ ಮಹತ್ಕಾರ್ಯಗಳನ್ನು ನಾನು ವರ್ಣಿಸುವೆನು.


ಆತನು ಹಾಮನ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದನು. ಆತನು ಕೆಂಪು ಸಮುದ್ರದ ಸಮೀಪದಲ್ಲಿ ಭಯಂಕರವಾದ ಕಾರ್ಯಗಳನ್ನು ಮಾಡಿದನು!


ಆತನು ಮಹಾನಾಯಕರುಗಳನ್ನು ಸೋಲಿಸುವನು. ಭೂರಾಜರುಗಳೆಲ್ಲಾ ಆತನಿಗೆ ಭಯಪಡುವರು.


ನಮ್ಮ ರಕ್ಷಕನಾದ ದೇವರೇ, ನೀತಿವಂತರ ಪ್ರಾರ್ಥನೆಗೆ ಸದುತ್ತರವನ್ನು ದಯಪಾಲಿಸು; ಅವರಿಗೋಸ್ಕರ ಮಹತ್ಕಾರ್ಯಗಳನ್ನು ನಡೆಸು. ಸರ್ವಭೂನಿವಾಸಿಗಳ ನಂಬಿಕೆಗೆ ನೀನೇ ಆಧಾರ.


ಆತನು ಬೇರೆ ಯಾವ ಜನಾಂಗದವರಿಗೂ ಹೀಗೆ ಮಾಡಲಿಲ್ಲ. ಆತನು ಅನ್ಯಜನಾಂಗಗಳವರಿಗೆ ತನ್ನ ಕಟ್ಟಳೆಗಳನ್ನು ಉಪದೇಶಿಸಲಿಲ್ಲ. ಯೆಹೋವನಿಗೆ ಸ್ತೋತ್ರವಾಗಲಿ!


ಅಲ್ಲಿ ಆತನು ನಿಮ್ಮೊಂದಿಗೆ ಒಡಂಬಡಿಕೆ ಮಾಡಿಕೊಂಡನು. ಆತನು ಹತ್ತು ಆಜ್ಞೆಗಳನ್ನು ನಿಮಗೆ ಕೊಟ್ಟು ಅವುಗಳನ್ನು ಅನುಸರಿಸಲು ಆಜ್ಞಾಪಿಸಿದನು. ಆ ಹತ್ತು ಆಜ್ಞೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದನು.


ದೇವರೇ, ನಿನ್ನ ಪರಿಶುದ್ಧಾಲಯದಲ್ಲಿರುವ ನೀನು ಅದ್ಭುತಸ್ವರೂಪನಾಗಿರುವೆ. ಇಸ್ರೇಲರ ದೇವರು ತನ್ನ ಜನರಿಗೆ ಬಲವನ್ನೂ ಶಕ್ತಿಯನ್ನೂ ದಯಪಾಲಿಸುವನು. ದೇವರಿಗೆ ಸ್ತೋತ್ರ!


ಮೋಶೆಯು ಅಲ್ಲಿ ಯೆಹೋವನೊಂದಿಗೆ ಹಗಲಿರುಳು ನಲವತ್ತು ದಿನಗಳಿದ್ದನು. ಆ ದಿನಗಳಲ್ಲಿ ಅವನು ಆಹಾರವನ್ನಾಗಲಿ ನೀರನ್ನಾಗಲಿ ಸೇವಿಸಲಿಲ್ಲ. ಮೋಶೆಯು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ದಶಾಜ್ಞೆಗಳನ್ನು ಎರಡು ಕಲ್ಲಿನ ಹಲಿಗೆಗಳ ಮೇಲೆ ಬರೆದನು.


ಯೆಹೋವನ ಭಯಂಕರ ಕೋಪಕ್ಕೆ ನಾನು ಹೆದರಿದ್ದೆನು. ನಿಮ್ಮನ್ನು ನಾಶಮಾಡುವಷ್ಟರ ತನಕ ಆತನು ಕೋಪಗೊಂಡಿದ್ದನು. ಆದರೆ ಆತನು ನನ್ನ ಬಿನ್ನಹಗಳನ್ನು ಲಾಲಿಸಿದನು.


ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ. ಅಂಥ ಅದ್ಭುತಕಾರ್ಯಗಳನ್ನು ದೇವರೊಬ್ಬನೇ ಮಾಡಬಲ್ಲನು!


ಮಹತ್ಕಾರ್ಯಗಳನ್ನು ಮಾಡಬಲ್ಲ ಆತನಿಗೆ ಸ್ತೋತ್ರಮಾಡಿರಿ. ಆತನ ಪ್ರೀತಿ ಶಾಶ್ವತವಾದದ್ದು.


ನಿನ್ನನ್ನು ಈಜಿಪ್ಟಿನಿಂದ ಬರಮಾಡಿದಾಗ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಇನ್ನೂ ಅನೇಕ ಅದ್ಭುತಗಳನ್ನು ನೀನು ನೋಡುವಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು