ವಿಮೋಚನಕಾಂಡ 34:12 - ಪರಿಶುದ್ದ ಬೈಬಲ್12 ಎಚ್ಚರಿಕೆಯಾಗಿರಿ! ನೀವು ಹೋಗುತ್ತಿರುವ ದೇಶದಲ್ಲಿರುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ನೀವು ಆ ಜನರೊಂದಿಗೆ ಒಪ್ಪಂದ ಮಾಡಿಕೊಂಡರೆ, ಅದು ನಿಮಗೆ ಕೇಡನ್ನು ಬರಮಾಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೀವು ಸೇರುವ ನಾಡಿನ ನಿವಾಸಿಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಮಾಡಿಕೊಂಡರೆ ಅದು ಕೊರಳನ್ನು ಸಿಕ್ಕಿಸುವ ಉರುಳಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀವು ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು ನೋಡಿಕೊಳ್ಳಿರಿ; ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಪ್ಪಂದವನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವುದು. ಅಧ್ಯಾಯವನ್ನು ನೋಡಿ |